Breaking News

ಅರಿವು ಶೈಕ್ಷಣಿಕ ಸಾಲ ಯೋಜನೆ: ಅವಧಿ ವಿಸ್ತರಣೆ

Oops! Google Translate did not respond: please try again!

ಜಾಹೀರಾತು

ಕೊಪ್ಪಳ ಜುಲೈ 10 (ಕರ್ನಾಟಕ ವಾರ್ತೆ): ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು 2023-24ನೇ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ/ನೀಟ್ ನಲ್ಲಿ ಆಯ್ಕೆಯಾಗುವ ಎಂ.ಬಿ.ಬಿ.ಎಸ್., ಬಿ.ಡಿ.ಎಸ್., ಬಿ.ಆಯುಶ್, ಬಿ.ಇ., ಬಿ.ಆರ್ಕಿಟೇಕ್ಟರ್ ಮತ್ತು ಬ್ಯಾಚುಲರ್ ಆಫ್ ಟೆಕ್ನಾಲಜಿ ಕೊರ್ಸಗಳಿಗೆ ಆಯ್ಕೆಯಾದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ಜುಲೈ 15ರವರೆಗೆ ವಿಸ್ತರಿಸಲಾಗಿದೆ.
ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತರ ಸಮುದಾಯದ ಅರ್ಹ ವಿದ್ಯಾರ್ಥಿಗಳು ಕೆಎಂಡಿಸಿ ವೆಬ್‌ಸೈಟ್ kmdconline.karnataka.gov.in ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ ಬಳಿಕ ವಿಧ್ಯಾರ್ಥಿಗಳಿಂದ ಮೂಲ ಇನ್‌ಡೆಂನಿಟಿ ಬಾಂಡ್‌ನ್ನು ನಿಗಮದ ಜಿಲ್ಲಾ ಕಚೇರಿಗೆ ಜುಲೈ 15ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08539-225008ಗೆ ಸಂಪರ್ಕಿಸಬಹುದು ಎಂದು ನಿಗಮದ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

ಗಿಣಿಗೇರ ಮುಖಾಂತರ ಕೊಪ್ಪಳಕ್ಕೆ ಹೋಗುವ ಮೇಲ್ ಸೇತುವೆ ಮೇಲೆ ವಿದ್ಯುತ್ ದೀಪ ಅಳವಡಿಸಲು ಮನವಿ.

Request to install electric lights on the overhead bridge leading to Koppal via Ginigera. ಕೊಪ್ಪಳ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.