Breaking News

ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‍ಶಿಪ್‍ನಲ್ಲಿಬಿ.ಎಲ್ ಬುಲ್ಸ್ ಕರಾಟೆ ಸಂಸ್ಥೆಯ ವಿದ್ಯಾರ್ಥಿಗಳು ಅಮೋಘ ಸಾಧನೆ

In the National Karate Championship
The students of BL Bulls Karate Institute have done a great job



ಗಂಗಾವತಿ: ಗದಗ ಜಿಲ್ಲೆಯಲ್ಲಿ ನಡೆದಂತಹ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‍ಶಿಪ್ ಕರಾಟೆ ಪಂದ್ಯಾವಳಿಯನ್ನು ಕರಾಟೆ ಶಿಕ್ಷಕರಾದ ಗಣೇಶ್ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಒಂದು ಸ್ಪರ್ಧೆಯಲ್ಲಿ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಬೆಂಗಳೂರು, ಉಡುಪಿ, ಶಿವಮೊಗ್ಗ, ಬಳ್ಳಾರಿ, ಹೊಸಪೇಟೆ, ಕೊಡಗು, ಬೆಳಗಾವಿ, ಹಾವೇರಿ, ದಾವಣಗೆರೆ, ಬಿಜಾಪುರ, ತುಮಕೂರ್, ಗಂಗಾವತಿ, ಲಕ್ಷ್ಮೇಶ್ವರ, ಕೊಪ್ಪಳ, ರಾಯಚೂರು ವಿವಿಧ ಜಿಲ್ಲೆಯ ವಿವಿಧ ತಾಲೂಕಿನ ಕ್ರೀಡಾಪಟುಗಳು ಭಾಗವಹಿಸಿದ್ದರು. ಈ ಒಂದು ಸ್ಪರ್ಧೆಯಲ್ಲಿ ಭತ್ತದನಾಡು ಗಂಗಾವತಿಯ ಬಿ.ಎಲ್ ಬುಲ್ಸ್ ಕರಾಟೆ ಸಂಸ್ಥೆಯ 10 ವಿದ್ಯಾರ್ಥಿಗಳು ಭಾಗವಹಿಸಿ ವಿಜಯಶಾಲಿಗಳಾಗಿದ್ದಾರೆ.
ಮೀನಾಕ್ಷಿ, ಎಂ.ಡಿ ನಿಹಾಲ್ ಕಟಾ ಮತ್ತು ಕುಮುಟೆ ವಿಭಾಗದಲ್ಲಿ ಪ್ರಥಮಸ್ಥಾನ ಪಡೆದಿದ್ದಾರೆ ಹಾಗೂ ಮೌಲಾಹುಸೇನ್ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ. ರಿಷಿಕ್. ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ ಕುಮಟೆ ವಿಭಾಗದಲ್ಲಿ ಪ್ರಥಮ ಸ್ಥಾನ, ಸಿರಾಜ್ ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ ಕುಮಟೆ ವಿಭಾಗದಲ್ಲಿ ಪ್ರಥಮ ಸ್ಥಾನ, ನಿಂಗರಾಜ್ ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ ಕುಮಟೆ ವಿಭಾಗದಲ್ಲಿ ಪ್ರಥಮ ಸ್ಥಾನ, ಶಿವರಾಜ್ ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ ಕುಮಟೆ ವಿಭಾಗದಲ್ಲಿ ಪ್ರಥಮ ಸ್ಥಾನ, ಆಂಜನೇಯ ಕಟಾ ವಿಭಾಗದಲ್ಲಿ ತೃತೀಯ ಸ್ಥಾನ ಕುಮುಟೆ ವಿಭಾಗದಲ್ಲಿ ಪ್ರಥಮ ಸ್ಥಾನ, ವಾಹಿದ್ ಕಟಾ ವಿಭಾಗದಲ್ಲಿ ತೃತೀಯ ಸ್ಥಾನ, ಅಭಯ್ ಕಟಾ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಇವರಿಗೆ ಸಂಸ್ಥೆಯ ಅಧ್ಯಕ್ಷರಾದ ಚಂದ್ರೇಗೌಡ ಪೆÇಲೀಸ್ ಪಾಟೀಲ್ ಹಾಗೂ ಕರಾಟೆ ತರಬೇತುದರಾದ ಮಂಜುನಾಥ್ ರಾಠೋಡ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

About Mallikarjun

Check Also

ಪ್ರಜಾತಂತ್ರಉಳಿವಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಕಾಳೆ

ಗಂಗಾವತಿ.ಮೇ.05: ಪ್ರಜಾತಂತ್ರ ಉಳಿವು, ಸಂವಿಧಾನದ ರಕ್ಷಣೆ ಹಾಗೂ ದೇಶದ ಸಮಗ್ರ ಅಭಿವೃದ್ಧಿಗಾಗಿ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಕಾಂಗ್ರೆಸ್ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.