Breaking News

ಶುದ್ಧ ನೀರಿನ ಘಟಕ ದುರಸ್ಥಿಗೊಳಿಸಲು ಮಾರ್ಟಳ್ಳಿ ಗ್ರಾಮಸ್ಥರ ಅಗ್ರಹ

Demand of Martalli villagers to repair clean water plant.


ವರದಿ : ಬಂಗಾರಪ್ಪ ಸಿ ಹನೂರು .
ಹನೂರು: ಕ್ಷೇತ್ರ ವ್ಯಾಪ್ತಿಯ ಮಾರ್ಟಳ್ಳಿ ಗ್ರಾಮದಲ್ಲಿ ಪಂಚಾಯಿತಿಯಿಂದ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕವು ಸಾರ್ವಜನಿಕರಿಗೆ ಉಪಯೋಗಕ್ಕೆ ಬಾರದಂತಾಗಿದೆ .

ನೀರಿನ ಘಟಕದ ಸುತ್ತ ಮುತ್ತ ಮುಳ್ಳು ಗಿಡ ಗಂಟೆಗಳು ಬೆಳೆದು ಅವ್ಯವಸ್ತೆಯಿಂದ ಕೂಡಿದೆ. ಇದರಿಂದ ಗ್ರಾಮದ ಜನರು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಇಡೀ ಶಾಪ ಹಾಕುತ್ತಿರುವ ಘಟನೆ ನಡೆದಿದೆ ಪಟ್ಟಣದ ಪ್ರದೇಶದ ನಾಗರಿಕರಂತೆ ಗ್ರಾಮೀಣ ಭಾಗದ ಜನರೂ ಸಹ ಆರೋಗ್ಯದ ದೃಷ್ಟಿಯಿಂದ ಶುದ್ಧ ಕುಡಿಯುವ ನೀರು ಕುಡಿಯಲೆಂದು ಸರ್ಕಾರ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಿಸಿದೆ.
ಈ ಬಗ್ಗೆ ಗ್ರಾಮದ ಜನರನ್ನು ವಿಚಾರಿಸಿದಾಗ ಕೆಟ್ಟು ನಿಂತು 2 ವರ್ಷವೇ ಕಳೆದಿದೆ ಈ ಬಗ್ಗೆ ಗ್ರಾಮ ಪಂಚಾಯತಿ ಆಡಳಿತ ವಾಗಲಿ ಅಥವಾ ಸಂಬಂದಿಸಿದ ಗ್ರಾಮೀಣ ಕುಡಿಯುವ ನೀರು ಇಲಾಖೆಯ ಅಧಿಕಾರಿಗಳಾಗಲಿ ಸ್ಪಂದಿಸುತ್ತಿಲ್ಲ ಅಧಿಕಾರಿಗಳ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯದಿಂದ ಶುದ್ದ ನೀರಿನ ಸೌಲಭ್ಯದಿಂದ ನಾವೆಲ್ಲ ವಂಚಿತರಾಗಿದ್ದೇವಿ
ಸರ್ಕಾರವು ಗ್ರಾಮೀಣ ಜನತೆಯ ಆರೋಗ್ಯ ದೃಷ್ಟಿಯಿಂದ ಈ ಯೋಜನೆಯನ್ನು ಜಾರಿ ಮಾಡಿದ್ದೂ ಬಳಕೆಗೆ ಬಾರದಿರುವುದು ದುರ ದೃಷ್ಟಕರವಾಗಿದೆ. ತಾಲೂಕಿನ ಹಲವು ಗ್ರಾಮಗಳಲ್ಲಿಯು ಕೂಡ ನಿರ್ಮಿಸಿರುವ ಶುದ್ಧ ನೀರಿನ ಘಟಕಗಳು ಕಾರ್ಯ ನಿರ್ವಹಿಸದಿರುವುದರಿಂದ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಕೆಟ್ಟು ನಿಂತಿರುವ ನೀರಿನ ಘಟಕಗಳನ್ನು ದುರಸ್ತಿಪಡಿಸಿ ಲಕ್ಷಾಂತರ ರೂ. ವೆಚ್ಚ ಮಾಡಿ ನಿರ್ಮಿಸಿರುವ ಘಟಕದ ಯಂತ್ರೋಪಕರಣಗಳು ತುಕ್ಕು ಹಿಡಿಯುವಂತಹ ಪರಿಸ್ಥಿತಿಯಿಂದ ನಿರ್ಮಾಣವಾಗಿದ್ದು,ಇನ್ನಾದರು ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಗಮನ ಹರಿಸಬೇಕಾಗಿದೆ ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.

About Mallikarjun

Check Also

ಖೊಟ್ಟಿ ದಾಖಲೆ ಸೃಷ್ಟಿಸಿ, ಬಿಪಿಎಲ್ ಪಡಿತರ ಚೀಟಿ ಪಡೆದಿದ್ದ ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು, ದಂಡವಸೂಲಿ.

ಕಾರಟಗಿ: ತಾಲೂಕಿನ ಸಿದ್ಧಾಪುರ ಗ್ರಾಮದ ಬಿಜೆಪಿ ಮುಖಂಡ ಆಗಿರುವ ಮಹಿಬೂಬ್ ಸಾಬ್ ಮುಲ್ಲಾ (ಎಂ.ಡಿ.ಎಸ್) ತಂದೆ ಮೋದಿನ್ ಸಾಬ್ ಈತನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.