Adjournment of the 17th July Disha Committee meeting
ಕೊಪ್ಪಳ ,(ಕರ್ನಾಟಕ ವಾರ್ತೆ): ಕೊಪ್ಪಳ ಸಂಸದರು ಹಾಗೂ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ಅಧ್ಯಕ್ಷರಾದ ಕರಡಿ ಸಂಗಣ್ಣ ಅವರ ಅಧ್ಯಕ್ಷತೆಯಲ್ಲಿ ಜುಲೈ 17ರಂದು ನಿಗದಿಪಡಿಸಲಾಗಿದ್ದ 2022-23ನೇ ಸಾಲಿನ 4ನೇ ತ್ರೈಮಾಸಿಕ ಹಾಗೂ 2023-24ನೇ ಸಾಲಿನ 1ನೇ ತ್ರೈಮಾಸಿಕದ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನಾ (ದಿಶಾ) ಸಭೆಯನ್ನು ವಿಧಾನಸಭಾ ಅಧಿವೇಶನ ಜಾರಿಯಲ್ಲಿರುವ ಹಿನ್ನೆಲೆ ಮುಂದೂಡಲಾಗಿದೆ.
ಸಭೆಯ ಮುಂದಿನ ದಿನಾಂಕವನ್ನು ನಂತರದಲ್ಲಿ ತಿಳಿಸಲಾಗುವುದು ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ದಿಶಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.