Application Invitation from Senior Citizens
ಕೊಪ್ಪಳ ಜುಲೈ 15 (ಕ.ವಾ.): ವಿಶ್ವ ಹಿರಿಯ ನಾಗರಿಕರ ದಿನಾಚಾರಣೆಯ ಸಂದರ್ಭದಲ್ಲಿ ಹಿರಿಯ ನಾಗರಿಕರಿಗೆ ಶಿಕ್ಷಣ, ಸಾಹಿತ್ಯ, ಕಾನೂನು, ಪ್ರತಿಭೆ, ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಒಳಗೊಂಡಂತೆ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 06 ವೈಯಕ್ತಿಕ ಪ್ರಶಸ್ತಿಗಳನ್ನು ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ 01 ಸಂಸ್ಥೆಗೆ ಒಟ್ಟು 07 ಪ್ರಶಸ್ತಿಗಳನ್ನು ರಾಜ್ಯಮಟ್ಟದಲ್ಲಿ ನೀಡಲಾಗುತ್ತಿದೆ. ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ ಮೇಲ್ಕಂಡ ಕ್ಷೇತ್ರದಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಂದ ಮತ್ತು ಅರ್ಹ ಸಂಸ್ಥೆಗಳಿಂದ ಅರ್ಜಿಯನ್ನು ದ್ವಿಪ್ರತಿಯಲ್ಲಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಗಳನ್ನು ಈ ಕಚೇರಿಯಿಂದ ಪಡೆದು ನಿಗದಿತ ನಮೂನೆಯಲ್ಲಿ ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿ ಪ್ರಸ್ತಾವನೆಗಳನ್ನು ದ್ವಿಪ್ರತಿಯಲ್ಲಿ ಆಗಸ್ಟ್ 14ರೊಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ಕಚೇರಿ, ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಾಲಯ ಆವರಣ ಕೊಠಡಿ ಸಂಖ್ಯೆ 31,32 ರಿಲಾಯನ್ಸ್ ಪೆಟ್ರೋಲ್ ಬಂಕ್ ಎದುರುಗಡೆ ಹೊಸಪೇಟ್ ರಸ್ತೆ ಕೊಪ್ಪಳ ಈ ಕಚೇರಿಗೆ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:08539-295496 ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಕೊಪ್ಪಳ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.