Application invited for Krishi Pandit award separately from farmer and farmer women
ಕೊಪ್ಪಳ ಜುಲೈ 17 (ಕರ್ನಾಟಕ ವಾರ್ತೆ): ಕೃಷಿ ಇಲಾಖೆಯಿಂದ 2023-24ನೇ ಸಾಲಿನ ಕೃಷಿ ಪಂಡಿತ ಪ್ರಶಸ್ತಿಗೆ ಜಿಲ್ಲೆಯ ಆಸಕ್ತ ರೈತ ಮತ್ತು ರೈತ ಮಹಿಳೆಯರಿಂದ ಪ್ರತ್ಯೇಕವಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕೃಷಿಯಲ್ಲಿ ರೈತ ಮಹಿಳೆಯರನ್ನು ಪ್ರೋತ್ಸಾಹಿಸುವ ಮತ್ತು ಕೃಷಿಯತ್ತ ಆಕರ್ಷಿಸಲು ಪ್ರತ್ಯೇಕವಾಗಿ ರೈತ ಮಹಿಳೆಯರಿಗೆ ಕೃಷಿ ಪಂಡಿತ ಪ್ರಶಸ್ತಿಯನ್ನು ನೀಡಲು ಕ್ರಮವಹಿಸಲಾಗಿರುವುದರಿಂದ, ರೈತ ಮಹಿಳೆಯರು ಸಹ ಅರ್ಜಿ ಸಲ್ಲಿಸಬಹುದು.
ಕೃಷಿ ಪಂಡಿತ ಪ್ರಶಸ್ತಿಗೆ ಭಾಗವಹಿಸುವವರು ಸಮಗ್ರ ಕೃಷಿ ಸದ್ಧತಿ, ಬೆಳೆ ವೈವಿದ್ಯತೆ, ಸಾವಯವ ಕೃಷಿ, ಕೃಷಿ ಯಂತ್ರೋಪಕರಣಗಳ ಅಭಿವೃದ್ಧಿ ನೀರಿನ ಸಮರ್ಪಕ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹಸಿರು ಮನೆ ಅಳವಡಿಕೆ, ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು, ಕುರಿ, ಮೊಲ ಸಾಕಾಣಿಕೆ ಹಾಗೂ ಇನ್ನಿತರೆ ಯಾವುದಾದರೂ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿದವರು ತಮ್ಮ ಹತ್ತಿರದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಿಂದ ಅಥವಾ ರೈತ ಸಂಪರ್ಕ ಕೇಂದ್ರಗಳಲ್ಲಿ ನಿಗದಿತ ಅರ್ಜಿಯನ್ನು ಪಡೆದು ಜುಲೈ 24ರೊಳಗಾಗಿ ಸಂಬಂಧಿಸಿದ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.
ಈ ಹಿಂದೆ ಕೃಷಿ ಪಂಡಿತ ಪ್ರಶಸ್ತಿಯಲ್ಲಿ ಪ್ರಥಮ, ದ್ವೀತಿಯ, ತೃತೀಯ ಹಾಗೂ ಉದಯೋನ್ಮುಖ ಪ್ರಶಸ್ತಿ ಪಡೆದವರು ಮತ್ತೆ ಸ್ಪರ್ಧಿಸುವಂತಿಲ್ಲ ಎಂದು ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.