Bhagyanagar: Notice not to use banned plastic
ಕೊಪ್ಪಳ ಜುಲೈ 17 (ಕರ್ನಾಟಕ ವಾರ್ತೆ): ಭಾಗ್ಯನಗರ ಪಟ್ಟಣ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರು ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವಂತೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮನವಿ ಮಾಡಿದ್ದಾರೆ.
ಭಾಗ್ಯನಗರ ಪಟ್ಟಣವನ್ನು ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಲು ಪ್ಲಾಸ್ಟಿಕ್ ಬಳಕೆ ನಿಷೇಧದ ಬಗ್ಗೆ ತಿಳಿವಳಿಕೆ ನೀಡುವ ಸಲುವಾಗಿ ಇತ್ತೀಚೆಗೆ ಜಾಗೃತಿ ಮೂಡಿಸುವ ಜಾಥಾ ಕಾರ್ಯಕ್ರಮ ಹಮ್ಮಿಕೊಂಡು ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸುವ ಬಗ್ಗೆ, ಪ್ಲಾಸ್ಟಿಕ್ ವಸ್ತುಗಳನ್ನು ರೇಡ್ ಮಾಡುವ ಮೂಲಕ ಸಾರ್ವಜನಿಕರಿಗೆ ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಸುವುದನ್ನು ನಿಷೇಧಿಸಲು ತಿಳಿವಳಿಕೆ ನೀಡಲಾಗಿದೆ.
ಭಾಗ್ಯನಗರ ಪಟ್ಟಣದಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಹಾಗೂ ಬಳಕೆ ಮಾಡುವುದನ್ನು ನಿಷೇಧಿಸಲಾಗಿದ್ದು, ಎಲ್ಲಾ ಸಾರ್ವಜನಿಕರು ಸಿಂಗಲ್ ಯೂಸ್ ಪ್ಲಾಸ್ಟಿಕ್ ಬಳಸದೇ, ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಲು ಸಹಕರಿಸಲು ಅರಿವು ಮೂಡಿಸಲಾಯಿತು ಎಂದು ಭಾಗ್ಯನಗರ ಪಟ್ಟಣ ಪಂಚಾಯತ್ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.