Breaking News

ಕುಕನೂರು: ಐಟಿಐ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

Kukanur: Application Invitation for ITI Admission

ಕೊಪ್ಪಳ ಜುಲೈ 17 (ಕರ್ನಾಟಕ ವಾರ್ತೆ): ಕುಕನೂರಿನ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ 2023-24ನೇ ಸಾಲಿನ ಪ್ರವೇಶಕ್ಕಾಗಿ ಆಫ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.
ಸಂಸ್ಥೆಯಲ್ಲಿ ಪ್ರಸಕ್ತ ಸಾಲಿಗೆ ಮೆರಿಟ್ ಕಂ ರಿಸರ್ವೇಷನ್ ಆಧಾರಿತ ನಡೆದಂತಹ ಆನ್‌ಲೈನ್ ಪ್ರವೇಶ ಪ್ರಕ್ರಿಯೆಯು ಮುಗಿದ ನಂತರ ವಿವಿಧ ವೃತ್ತಿಗಳಲ್ಲಿ ಉಳಿದ ಖಾಲಿ ಸ್ಥಾನಗಳಿಗೆ ಜುಲೈ 17ರಿಂದ ಆಗಸ್ಟ್ 03ರವರೆಗೆ ವೃತ್ತಿಗಳ ಅನುಸಾರವಾಗಿ 8ನೇ ತರಗತಿ ಅಥವಾ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ 14 ವರ್ಷ ಮೇಲ್ಪಟ್ಟ ವಯೋಮಿತಿಯ ಅರ್ಹ ಆಸಕ್ತ ಅಭ್ಯರ್ಥಿಗಳು ವಿವಿಧ ತಾಂತ್ರಿಕ, ತಾಂತ್ರಿಕೇತರ ವೃತ್ತಿಗಳಿಗೆ ಆಫ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು.
ಆಯಾ ದಿನದಂದು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಮಾರನೇ ದಿನದಂದು ಉಳಿದ ಖಾಲಿ ಸ್ಥಾನಗಳಿಗೆ ಪ್ರವೇಶ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9481718859, 9164198246, 9945789400, 9964247098ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಜಾಹೀರಾತು

About Mallikarjun

Check Also

ಜಿಲ್ಲಾ ಮಟ್ಟದ ಯುವ ಉತ್ಸವ, ವಿವಿಧ ಸ್ಪರ್ಧೆ: ಭಾಗವಹಿಸಲು ಹೆಸರು ನೋಂದಾಯಿಸಿ

District Level Youth Festival, Various Competition: Register to participate ಕೊಪ್ಪಳ ಆಗಸ್ಟ್ 24 (ಕರ್ನಾಟಕ ವಾರ್ತೆ): ಭಾರತ …

Leave a Reply

Your email address will not be published. Required fields are marked *