Application Invitation for Post Matric Scholarship
ಕೊಪ್ಪಳ ಜುಲೈ 20 (ಕರ್ನಾಟಕ ವಾರ್ತೆ): ಸಮಾಜ ಕಲ್ಯಾಣ ಇಲಾಖೆಯಿಂದ 2022-23ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನವಾಗಿದ್ದು, ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಇಲಾಖಾ ವೆಬ್‌ಸೈಟ್ www.sw.kar.nic.in ನಲ್ಲಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಇಲಾಖಾ ವೆಬ್‌ಸೈಟ್ www.tw.kar.nic.in ನಲ್ಲಿ ಅರ್ಜಿ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಸ್ವೀಕೃತವಾಗುವ ಮ್ಯಾನುವಲ್‌ನ ಯಾವುದೇ ಅರ್ಜಿ, ಕೋರಿಕೆಗಳನ್ನು ಪರಿಗಣಿಸಲು ಅವಕಾಶವಿರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ ಮತ್ತು ವಿವಿಧ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಪ್ಪಳ, ಗಂಗಾವತಿ, ಯಲಬುರ್ಗಾ, ಕುಷ್ಟಗಿ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳಾದ ಗಂಗಾವತಿ ಮತ್ತು ಕುಷ್ಟಗಿ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.