Breaking News

ಸಾರಿಗೆ ಇಲಾಖೆಯ ನಿವೃತ್ತ ಅಧಿಕಾರಿ ಜೆ.ಬಿ. ಲಕ್ಷ್ಮಣಗೌಡ ಕಾಂಗ್ರೆಸ್ ಪಕ್ಷ ಸೇರ್ಪಡೆ 

Retired officer of Transport Department J.B. Laxman Gowda joins Congress party 

ಗಂಗಾವತಿ :ಸಾರಿಗೆ ಇಲಾಖೆಯ ನಿವೃತ್ತ ಅಧಿಕಾರಿ ಜೆ.ಬಿ. ಲಕ್ಷ್ಮಣಗೌಡ ಇವರು ಶುಕ್ರವಾರ ಮಾಜಿ ಸಚಿವ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಇಕ್ಬಾಲ್ ಅನ್ಸಾರಿ ಅವರನ್ನು ಭೇಟಿ ಮಾಡಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾದರು.

ಜಾಹೀರಾತು

 ಈ ಸಂದರ್ಭದಲ್ಲಿ  ಜೆ ಬಿ ಲಕ್ಷ್ಮಣಗೌಡ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ.ಜನರ ವಿಶ್ವಾಸ ಗಳಿಸಿ ಜನರ ಅಪೇಕ್ಷೆಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು 5 ಗ್ಯಾರಂಟಿಗಳನ್ನು ಅನುಷ್ಠಾನ ಮಾಡದಿದ್ದಾರೆ. ಗಂಗಾವತಿ ಕ್ಷೇತ್ರದ ಜನತೆಯು ಸಹ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಇಕ್ಬಾಲ್ ಅನ್ಸಾರಿ ಅವರಿಗೆ 59,000 ಮತಗಳನ್ನು ನೀಡಿದ್ದಾರೆ.  ಜನರ ಹಿತವನ್ನು ಕಾಪಾಡುವ ಜವಾಬ್ದಾರಿ ಅನ್ಸಾರಿ ಅವರಿಗಿದೆ. ರಾಜ್ಯ ಸರ್ಕಾರದ ಯೋಜನೆಗಳನ್ನು ಬಡವರಿಗೆ ತಲುಪಿಸುವ ಕಾರ್ಯವನ್ನು ಅನ್ಸಾರಿಯವರು ಮಾಡಲಿದ್ದು ಅನ್ಸಾರಿ ಯವರ ಕಾರ್ಯಗಳಲ್ಲಿ  ತಾವು ಸಹ ಸಹಕಾರ ನೀಡಲಿದ್ದು, ಮುಂಬರುವ ಎಲ್ಲಾ ಚುನಾವಣೆಗಳಲ್ಲೂ ಅವರಿಗಾಗಿ ದುಡಿಯುವುದಾಗಿ ತಿಳಿಸಿದರು.

 ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಮೋರಿ ದುರ್ಗಪ್ಪ ,ಕಲಗುಡಿ ಮರಿಯಪ್ಪ ,ದಳಪತಿ ಸ್ವಾಮಿ,ನೀಲಪ್ಪ ಅನೇಕರಿದ್ದರು.

About Mallikarjun

Check Also

ಕುಷ್ಟಗಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ: ನೋಂದಣಿಗೆ ಸೂಚನೆ

Kushtagi Taluk Level Dasara Games: Notice for registration ಕೊಪ್ಪಳ ಆಗಸ್ಟ್ 29 (ಕರ್ನಾಟಕ ವಾರ್ತೆ): 2025-26ನೇ ಸಾಲಿನ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.