Save and Cultivate Indian Culture, Sumathi, MR.
ವರದಿ :ಬಂಗಾರಪ್ಪ ಸಿ ಹನೂರು.
ಚಾಮರಾಜನಗರ : . ಪ್ರತಿಯೊಬ್ಬ ವಿದ್ಯಾರ್ಥಿನಿಯರು ಭಾರತೀಯ ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜ್ ಪ್ರಾಂಶುಪಾಲ ಪ್ರೊ ಎಂ ಆರ್ ಸುಮತಿ ಕರೆ ನೀಡಿದರು
ನಗರದ ಜೋಡಿ ರಸ್ತೆಯಲ್ಲಿರುವ. ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಪದವಿ ವಿದ್ಯಾರ್ಥಿನಿಯರಿಗೆ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಸಂಭ್ರಮ ಸಾರಿ ಡೇ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು. ಮಹಿಳೆಯರು ವಿದ್ಯಾರ್ಥಿನಿಯರಿಗೆ ಸೀರೆ ಧರಿಸುವುದು ನಮ್ಮ ಭಾರತದ ಸಂಸ್ಕೃತಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು, ಸರ್ಕಾರ ಮಹಿಳೆಯರಿಗೆ ವಿಶೇಷ ಸೌಲಭ್ಯ ಕಲ್ಪಿಸಿರುವ ಹಿನ್ನೆಲೆ. ಎಲ್ಲಾ ಸೌಲಭ್ಯಗಳನ್ನು ಬಳಸಿಕೊಂಡು ವಿದ್ಯಾರ್ಥಿನಿಯರು ಮುಖ್ಯ ವಾಹಿನಿಗೆ ಬರಬೇಕು ಎಂದು ಕರೆ ನೀಡಿದರು.
ಕಾಲೇಜಿನ ಉಪನ್ಯಾಸಕಿ ಕುಸುಮ ಮಾತನಾಡಿ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ವಿದ್ಯಾಭ್ಯಾಸ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿನಿಯರು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆ ಸಾಂಸ್ಕೃತಿಕ. ಸೇವಾ ಮನೋಭಾವ ಬೆಳೆಸಿಕೊಂಡು ಗುರುಹಿರಿಯರು ಹಾಗೂ ಪೋಷಕರ ಮಾರ್ಗದರ್ಶನದಲ್ಲಿ ಉತ್ತಮ ಪರಿಸರದ ನಡುವೆ. ಉನ್ನತ ಮಟ್ಟದ ವಿದ್ಯಾಭ್ಯಾಸ ಕಲಿತಿದ್ದಾರೆ ಎಂದು ವಿದ್ಯಾರ್ಥಿಗಳ ಬಗ್ಗೆ ಮೆಚ್ಚಿಗೆ ವ್ಯಕ್ತಪಡಿಸಿದರು.
ಕಾಲೇಜಿನ ವಿದ್ಯಾರ್ಥಿನಿಯರು. ಮಹಾಲಕ್ಷ್ಮಿ. ದೀಪು. ಶಂಭಾವಿ. ಕಾವ್ಯ. ತಮ್ಮ ಅನಿಸಿಕೆ ವ್ಯಕ್ತಪಡಿಸಿ. ಇಂದು ಸ್ಯಾರಿ ಡೇ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಹಾಗೂ ಉಪನ್ಯಾಸಕರ ಜೊತೆ ಡ್ಯಾನ್ಸ್ ಮಾಡಿರೋದು ನನಗೆ ತುಂಬಾ ಖುಷಿ ತಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಉಪನ್ಯಾಸಕರಾದ. ಪ್ರಭಾವತಿ , ರುಕ್ಮಿಣಿ. ಸಾಕಮ್ಮ ಸೇರಿದಂತೆ. ಇತರ ಉಪನ್ಯಾಸಕರು. 500ಕ್ಕೂ ಹೆಚ್ಚು ವಿದ್ಯಾರ್ಥಿಗಳು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು