ನಾಳೆ ಜು.24 ರಂದು ಜಿಲ್ಲೆಯಎಲ್ಲಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಒಂದು ದಿನ ರಜೆ ನೀಡಿ, ಹಾವೇರಿ ಜಿಲ್ಲಾಧಿಕಾರಿ ಆದೇಶ.

Mallikarjun
1 Min Read
ಜಾಹೀರಾತು
Haveri District Collector ordered to give one day holiday to all primary, high school and undergraduate colleges in the district tomorrow on June 24.

ಹಾವೇರಿ(ಕ.ವಾ) ಜು.23: ಹಾವೇರಿ ಜಿಲ್ಲೆ ಆದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವದರಿಂದ ನಾಳೆ ಜುಲೈ 24 ರಂದು ಜಿಲ್ಲೆಯ ಎಲ್ಲ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಒಂದು ದಿನದ ರಜೆ ಘೋಷಿಸಿ, ಜಿಲ್ಲಾಧಿಕಾರಿ ಅವರು ಇಂದು ಸಂಜೆ ಆದೇಶಿಸಿದ್ದಾರೆ.

ಜಾಹೀರಾತು

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕಳೆದ ಎರಡಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಮಕ್ಕಳ ರಕ್ಷಣೆ ಹಿತದೃಷ್ಟಿಯಿಂದ ನಾಳೆ ಒಂದು ದಿನ ಮಾತ್ರ ಜಿಲ್ಲೆಯ ಎಲ್ಲ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಗಳಿಗೆ ರಜೆ ನೀಡಲಾಗಿದೆ.
ಈ ರಜಾ ದಿನವನ್ನು ಮುಂದಿನ ಆಗಸ್ಟ್ 5ರ ಶನಿವಾರದಂದು ಪೂರ್ಣ ದಿನ ಶಾಲೆ ನಡೆಸುವ ಮೂಲಕ ಜುಲೈ 24 ರ ರಜೆ ಹೊಂದಾಣಿಕೆ ಮಾಡಿಕೋಳ್ಳಬೇಕು. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಜಿಲ್ಲೆಯ ಎಲ್ಲ ಶಾಲಾ ಮುಖ್ಯಸ್ಥರಿಗೆ ಮಾಹಿತಿ ನೀಡಿ, ಸೂಕ್ತ ಕ್ರಮವಹಿಸಬೇಕೆಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

Total Views: 0
Share This Article