In the 6th State Karate Championship The students of BL Bulls Karate Institute have done a great job
ಗಂಗಾವತಿ: ಡ್ರೀಮ್ ವರ್ಲ್ಡ್ ಮಾರ್ಷಲ್ ಆರ್ಟ್ವತಿಯಿಂದ ೬ನೇ ರಾಷ್ಟçಮಟ್ಟದ ಕರಾಟೆ ಚಾಂಪಿಯನ್‌ಶಿಪ್ ಕಾರ್ಯಕ್ರಮವನ್ನು ದಿನಾಂಕ: ೨೨-೦೭-೨೦೨೩ ಗಂಗಾವತಿ ಸಿ.ಬಿ.ಎಸ್ ಕಲ್ಯಾಣ ಮಂಟಪದಲ್ಲಿ ನಡೆಸಲಾಯಿತು.
ಈ ಒಂದು ಸ್ಪರ್ಧೆಯಲ್ಲಿ ೬೦೦ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿವಿಧ ಜಿಲ್ಲೆಯ ವಿವಿಧ ತಾಲೂಕಿನ ಕ್ರೀಡಾಪಟುಗಳು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ಭತ್ತದ ನಾಡು ಗಂಗಾವತಿಯ ಬಿ.ಎಲ್ ಬುಲ್ಸ್ ಕರಾಟೆ ಸಂಸ್ಥೆಯ ೧೨ ವಿದ್ಯಾರ್ಥಿಗಳು ಭಾಗವಹಿಸಿ. ವಿಜಯ ಶಾಲಿಗಳಾಗಿದ್ದಾರೆ. ಸಿರಾಜ್ ಮತ್ತು ಎಂ.ಡಿ ಜೈನ್ ಕಟಾ ಮತ್ತು ಕುಮುಟೆ ವಿಭಾಗದಲ್ಲಿ ಪ್ರಥಮ ಸ್ಥಾನ, ಮೀನಾಕ್ಷಿ, ಸೃಜನಾ, ಕುಮುಟೆ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ವಾಹಿದ್, ಶಿವರಾಜ್, ಶ್ರೀ ವಸ್ತ, ಕೃಷ್ಣ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಸ್ಥಾನ, ವಾಜಿದ್ ಕುಮುಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ, ಎಂ.ಡಿ ನಿಹಾಲ್ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ, ಹಾಗೂ ಕುಮಟೆ ವಿಭಾಗದಲ್ಲಿ ದ್ವಿತೀಯ ಸ್ಥಾನ, ನಿಂಗರಾಜ್ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ಕುಮುಟೆ ವಿಭಾಗದಲ್ಲಿ ತೃತೀಯ ಸ್ಥಾನ, ಪ್ರೀತಮ್ ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನ ಕುಮುಟೆ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದು ಸಂಸ್ಥೆಗೆ ಕೀರ್ತಿ ಹೆಚ್ಚಿಸಿದ್ದಾರೆ.
ಒಟ್ಟಾರೆಯಾಗಿ ೧೭ ಪ್ರಶಸ್ತಿಗಳನ್ನು ಮುಡುಗೇರಿಸಿಕೊಂಡಿದ್ದಾರೆ. ಸಂಸ್ಥೆಯ ಅಧ್ಯಕ್ಷರಾದ ಚಂದ್ರೇಗೌಡ ಪೊಲೀಸ್ ಪಾಟೀಲ್ ಹಾಗೂ ಕರಾಟೆ ತರಬೇತುದರಾದ ಮಂಜುನಾಥ್ ರಾಠೋಡ್ ಹಾಗೂ ಕರಾಟೆ ಶಿಕ್ಷಕರಾದ ಫಯಾಜ್, ಶಿಲ್ಪಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.