ಗಂಗಾವತಿ : ಅರ್ಹ ಫಲಾನುಭವಿಗಳು ಅಗತ್ಯ ದಾಖಲೆ ನೀಡಿ ಗೃಹಲಕ್ಷ್ಮೀ ಯೋಜನೆ ಲಾಭ ಪಡೆದುಕೊಳ್ಳಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಹಾಂತಗೌಡ ಪಾಟೀಲ್ ಹೇಳಿದರು.
ತಾಲೂಕಿನ ಕೇಸರಹಟ್ಟಿ ಗ್ರಾಪಂ ಕಾರ್ಯಾಲಯದಲ್ಲಿ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆ ಆದೇಶ ಪ್ರತಿಗಳನ್ನು ವಿತರಿಸಿ ಸೋಮವಾರ ಮಾತನಾಡಿದರು.
ಗ್ರಾಮ ಪಂಚಾಯತಿ ಕಚೇರಿ ಹಾಗೂ ಗ್ರಾಮ್ ಓನ್ ಕೇಂದ್ರಗಳಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಲು ಅವಕಾಶ ಇದೆ. ಗ್ರಾ.ಪಂ. ವ್ಯಾಪ್ತಿಯ ಎಲ್ಲ ಗ್ರಾಮದ ಫಲಾನುಭವಿಗಳು ಸಿಬ್ಬಂದಿಗಳಿಗೆ ಸಹಕಾರ ನೀಡಿ ಯೋಜನೆ ಉಪಯೋಗ ಪಡೆದುಕೊಳ್ಳಬೇಕು ಎಂದರು.
ಗ್ರಾಪಂ ಉಪಾಧ್ಯಕ್ಷರಾದ ವಿರುಪಮ್ಮ ವೀರೇಶ, ಸದಸ್ಯರಾದ ನಿರುಪಾದಿಗೌಡ, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಕೃಷ್ಣ ಎಚ್, ಎಸ್ ಡಿಎ ಪ್ರಶಾಂತ, ತಾಂತ್ರಿಕ ಸಂಯೋಜಕರಾದ ಬಸವರಾಜ ಜಟಗಿ, ಐಇಸಿ ಸಂಯೋಜಕರಾದ ಬಾಳಪ್ಪ ತಾಳಕೇರಿ, ಗ್ರಾಪಂ ಸಿಬ್ಬಂದಿಗಳು ಇದ್ದರು.