Tour Program of District In-charge Secretaries
ಕೊಪ್ಪಳ ಜುಲೈ 24 (ಕರ್ನಾಟಕ ವಾರ್ತೆ): ವಸತಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ನವೀನ್ ರಾಜ್ ಸಿಂಗ್ ಅವರು ಜುಲೈ 28ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಹಮ್ಮಿಕೊಂಡಿದ್ದಾರೆ.
ಅಂದು ಬೆಳಿಗ್ಗೆ 06 ಗಂಟೆಗೆ ನಿರ್ಗಮಿಸಿ 11 ಗಂಟೆಗೆ ಕೊಪ್ಪಳ ನಗರಕ್ಕೆ ಆಗಮಿಸುವರು. 11.30ಕ್ಕೆ ಜಿಲ್ಲಾಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಳೆಹಾನಿ, ಕೋವಿಡ್ ಹಾಗೂ ಇತರೆ ಇಲಾಖೆಗಳಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸುವರು.
ಸಂಜೆ 4ರಿಂದ 5 ಗಂಟೆವರೆಗೆ ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ವಿವಿಧ ಇಲಾಖೆಯ ವಿಷಯಗಳ ಕುರಿತು ಚರ್ಚಿಸುವರು. ಬಳಿಕ ಕೊಪ್ಪಳದಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಆಪ್ತ ಕಾರ್ಯದರ್ಶಿ (ಗ್ರೇಡ್-2) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.