Demand to appoint Tungabhadra Save Movement Committee President as KADA President.
ಗಂಗಾವತಿ: ತುಂಗಭದ್ರಾ ಜಲಾಶಯದ ಬಗ್ಗೆ ಸಂಪೂರ್ಣ ಮಾಹಿತಿ ಇರುವ ತುಂಗಭದ್ರಾ ಉಳಿಸಿ ಆಂದೋಲನ ಸಮಿತಿಯ ಅಧ್ಯಕ್ಷರಾದ ಎಂ.ಆರ್. ವೆಂಕಟೇಶ ಇವರನ್ನು ಕಾಡಾ ಅಧ್ಯಕ್ಷರನ್ನಾಗಿ ನೇಮಿಸಲು ಒತ್ತಾಯಿಸಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಶಿವರಾಜ ತಂಗಡಗಿಯವರಿಗೆ ಮನವಿ ಸಲ್ಲಿಸಲಾಯಿತು ಎಂದು ಸಮಿತಿಯ ಗೌರವಾಧ್ಯಕ್ಷರಾದ ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಪ್ಪತ್ತು ವರ್ಷಗಳಿಂದ ತುಂಗಭಧ್ರಾ ಜಲಾಶಯದ ಬಗ್ಗೆ ಹೋರಾಟ ಮಾಡುತ್ತಿರುವ ಎಂ.ಆರ್. ವೆಂಕಟೇಶ ಅವರು ಕಾಡಾ ಅಧ್ಯಕ್ಷ ಸ್ಥಾನಕ್ಕೆ ಅರ್ಹ ವ್ಯಕ್ತಿಯಾಗಿದ್ದಾರೆ. ಬಳ್ಳಾರಿ, ವಿಜಯನಗರ, ರಾಯಚೂರು ಹಾಗೂ ಕೊಪ್ಪಳ ಕಾಂಗ್ರೆಸ್ ಪಕ್ಷದ ಶಾಸಕರು ಇವರನ್ನು ಬೆಂಬಲಿಸಿ ಮುಖ್ಯಮಂತ್ರಿಗಳಿಗೆ ಬರೆಯಲು ಕೇಳಿಕೊಳ್ಳುತ್ತೇವೆ. ಈ ವಿಷಯದಲ್ಲಿ ನಾಲ್ಕು ಜಿಲ್ಲೆಯ ಕಾಂಗ್ರೆಸ್ ಶಾಸಕರು, ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಎಲ್ಲರನ್ನೂ ಭೇಟಿಯಾಗಿ ಎಂ.ಆರ್. ವೆಂಕಟೇಶ ಇವರಿಗೆ ತುಂಗಭಧ್ರಾ ಜಲಾಶಯದ ಬಗ್ಗೆ ಇರುವ ಮಾಹಿತಿ, ಅನುಭವಗಳನ್ನು ತಿಳಿಸಲಾಗುವುದು.
ಮುಂದಿನ ೨-೩ ದಿನಗಳಲ್ಲಿ ನಾಲ್ಕು ಜಿಲ್ಲೆಗಳ ಉಸ್ತುವಾರಿ ಸಚಿವರನ್ನು ಭೇಟಿಯಾಗಿ ಎಂ.ಆರ್. ವೆಂಕಟೇಶ ಇವರನ್ನು ಕಾಡಾ ಅಧ್ಯಕ್ಷರನ್ನಾಗಿಸಲು ಮನವಿ ಮಾಡಲಾಗುವುದು.
ಕಾಡಾ ಅಭಿವೃದ್ಧಿಯಾಗಬೇಕಾದರೆ ಎಂ.ಆರ್. ವೆಂಕಟೇಶರವರAತಹ ಅನುಭವದ ವ್ಯಕ್ತಿ ಬೇಕಾಗಿದೆ. ತುಂಗಭಧ್ರಾ ಉಳಿಸಿ ಆಂದೋಲನ ಸಮಿತಿ ಈ ನಿಟ್ಟಿನಲ್ಲಿ ಕೆಲಸ ಮಾಡಲಿದೆ ಎಂದು ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.