Incessant rain: District Collector orders holiday for schools and colleges on July 27

ಕೊಪ್ಪಳ ಜುಲೈ 26 (ಕ.ವಾ.):ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಸತತವಾಗಿ ಮಳೆಯಾಗುತ್ತಿದೆ ಮತ್ತು ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಮಳೆ ಸುರಿಯುವುದಾಗಿ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹಾಗೂ ಮಕ್ಕಳು ಮತ್ತು ವಿದ್ಯಾರ್ಥಿಗಳ
ಹಿತದೃಷ್ಟಿಯಿಂದಾಗಿ ಜುಲೈ 27ರಂದು ಕೊಪ್ಪಳ ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲೆಗಳು, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ಆದೇಶ ಹೊರಡಿಸಿದ್ದಾರೆ.