Breaking News

ಗೃಹಲಕ್ಷ್ಮಿ ಯೋಜನೆ ಪ್ರಚಾರ ಕೈಗೊಳ್ಳಿಜಿಪಂ ಯೋಜನಾ ನಿರ್ದೇಶಕರು ಹಾಗೂ ತಾಲೂಕು ಆಡಳಿತ ಅಧಿಕಾರಿಗಳಾದ ಕೃಷ್ಣಮೂರ್ತಿ ಸೂಚನೆ

Krishnamurthy, the director of the project and the taluk administrative officers of the BJP, will carry out the campaign for the Grilahakshmi Yojana.

ತಾಪಂ ಸಭಾಂಗಣದಲ್ಲಿ ಸಾಮಾನ್ಯ ಸಭೆ

ಗಂಗಾವತಿ : ಗೃಹಲಕ್ಷ್ಮಿ ಯೋಜನೆ ಬಗ್ಗೆ ವ್ಯಾಪಕ ಪ್ರಚಾರ ಮೂಡಿಸಬೇಕು, ಯಾವ ಫಲಾನುಭವಿಗಳು ಯೋಜನೆಯಿಂದ ಹೊರಗುಳಿಯಬಾರದು ಎಂದು ಜಿಪಂ ಯೋಜನಾ ನಿರ್ದೇಶಕರು ಹಾಗೂ ತಾಲೂಕು ಆಡಳಿತ ಅಧಿಕಾರಿಗಳಾದ ಕೃಷ್ಣಮೂರ್ತಿ ಅವರು ಹೇಳಿದರು.

ಜಾಹೀರಾತು

ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಇತರೆ ಇಲಾಖೆ ಅಧಿಕಾರಿಗಳೊಂದಿಗೆ ಸಂಯೋಜಿಸಿಕೊಂಡು ಕಾರ್ಯನಿರ್ವಹಿಸಬೇಕು. ಅಧಿಕಾರಿಗಳು ಗ್ರಾಮೀಣ ಭಾಗದ ಗ್ರಾಮ್ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಫಲಾನುಭವಿಗಳ ನೋಂದಣಿ ಪ್ರಗತಿ ಪರಿಶೀಲಿಸಬೇಕು ಎಂದರು.

ಕೃಷಿ ಇಲಾಖೆ ಸಹಾಯಕ ನಿರ್ದೇಶಕರಾದ ಸಂತೋಷ ಪಟ್ಟದಕಲ್ಲು ಅವರು ಮಾತನಾಡಿ, ಮಳೆ ಆಗುತ್ತಿದ್ದರಿಂದ ಈಗಾಗಲೇ ಶೇ.80 ಬಿತ್ತನೆ ಬೀಜ ರೈತರು ಖರೀದಿಸಿದ್ದಾರೆ. ಹೆಚ್ಚಾಗಿ ರೈತರು ಸಜ್ಜೆ, ತೊಗರಿ, ನವಣೆ ಬೀಜ ಖರೀದಿಸಿದ್ದಾರೆ. ಬೋರ್ ವೆಲ್ ಆಶ್ರಿತ ರೈತರು ಮೆಕ್ಕೆಜೋಳ ಬಿತ್ತನೆ ಮಾಡುತ್ತಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು. ರೈತರಿಗೆ ಉಪಯೋಗ ಆಗುವ ಯೋಜನೆಗಳ ಬಗ್ಗೆ ಹೆಚ್ಚು ಪ್ರಚಾರ ಮಾಡಿ, ರೈತರನ್ನು ಯೋಜನೆಗಳತ್ತ ಕರೆತರಲು ಪ್ರಚಾರ ಕಾರ್ಯ ಹಮ್ಮಿಕೊಳ್ಳುವಂತೆ ಜಿಪಂ ಯೋಜನಾ ನಿರ್ದೇಶಕರು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಗ್ರಾಮೀಣ ಭಾಗದಲ್ಲಿ ನಿರ್ಮಾಣ ಹಂತದ ಅಂಗನವಾಡಿ, ಗ್ರಂಥಾಲಯ ಕಟ್ಟಡಗಳ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು, ತ್ವರಿತವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಪಿಆರ್ ಡಿ ಎಇಇ ಪಲ್ಲವಿ ಅವರಿಗೆ ಸೂಚಿಸಿದರು.

ತಾಲೂಕಿನ ವಸತಿ ನಿಲಯಗಳು ಹಾಗೂ ಅಮೃತ ಸರೋವರ ಸ್ಥಳಗಳಲ್ಲಿ ವನ ಮಹೋತ್ಸವ ಆಚರಿಸಿ, ಸಸಿ ನೆಡಬೇಕು‌. ಈ ಬಗ್ಗೆ ಅರಣ್ಯ ಇಲಾಖೆ ಎಚ್ಚೆತ್ತು ಕಾರ್ಯನಿರ್ವಹಿಸಬೇಕು ಎಂದರು.

ಕೆಕೆಆರ್ ಡಿಬಿಯಡಿ ಅನುದಾನದಡಿ ನಡೆಯುತ್ತಿರುವ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿ ಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದರು.

ವಿವಿಧ ಇಲಾಖೆಯ ತಾಲೂಕು ಅನುಷ್ಠಾನ ಅಧಿಕಾರಿಗಳು ಇಲಾಖೆ ವರದಿ ಒಪ್ಪಿಸಿದರು.

ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಮಹಾಂತಗೌಡ ಪಾಟೀಲ್ ಅವರು ಮಾತನಾಡಿ, ತೋಟಗಾರಿಕೆ, ಕೃಷಿ ಇಲಾಖೆ ಹಾಗೂ ಸಾಮಾಜಿಕ ವಲಯ ಅರಣ್ಯ ಇಲಾಖೆಯಿಂದ ನರೇಗಾ ಮಾನವ ದಿನಗಳ ಸೃಜನೆಯಾಗಬೇಕು. ರೈತರಿಗೆ ಯೋಜನೆ ಉಪಯೋಗಗಳನ್ನು ತಲುಪಿಸಬೇಕು ಎಂದರು.

ವಿವಿಧ ಇಲಾಖೆಯ ತಾಲೂಕು ಅನುಷ್ಠಾನ ಅಧಿಕಾರಿಗಳು, ತಾಪಂ ಸಿಬ್ಬಂದಿಗಳು ಇದ್ದರು.

About Mallikarjun

Check Also

ಸುಳ್ವಾಡಿ ವಿಷ ಪ್ರಸಾದ ಪ್ರಕರಣ ಸಾವಿಗೆ ಕಾರಣರಾದ :ಇಮ್ಮಡಿ ಮಹದೇವಸ್ವಾಮಿ ಜಾಮೀನು ಅರ್ಜಿ ಮತ್ತೆ ವಜಾ.

Sulvadi Visha Prasad case: Cause of death: Immadi Mahadevaswamy’s bail application dismissed again. ವರದಿ : …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.