Application Invitation for First PUC Admission in Advanced Residential Schools
ಕೊಪ್ಪಳ ಜುಲೈ 27 (ಕರ್ನಾಟಕ ವಾರ್ತೆ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿಗಾಗಿ ಉನ್ನತೀಕರಿಸಿದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಪ್ರಥಮ ಪಿ.ಯು.ಸಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಿರ್ವಹಣೆಯಾಗುತ್ತಿರುವ ಕೊಪ್ಪಳ ಜಿಲ್ಲೆಯಲ್ಲಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಇಂಟಿಗ್ರೇಟೆಡ್ ಶಾಲೆಗಳನ್ನಾಗಿ ಉನ್ನತೀಕರಿಸಿ 2023-24ನೇ ಸಾಲಿನಲ್ಲಿ ಪ್ರಥಮ ಪಿ.ಯು.ಸಿ ಪ್ರಾರಂಭಿಸಲಾಗಿರುತ್ತದೆ. ಜಿಲ್ಲೆಯ ವಿವಿಧ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗ (ಪಿಸಿಎಂಬಿ) ಮತ್ತು ವಾಣಿಜ್ಯ ವಿಭಾಗ (ಸಿಇಬಿಎ) ತರಗತಿಗಳಿಗೆ ಉಚಿತವಾಗಿ ಪ್ರವೇಶ ಪಡೆಯಬಹುದು.
ಅರ್ಜಿ ಸಲ್ಲಿಸುವ ವಸತಿ ಶಾಲೆಗಳ ವಿವರ: ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಾದ ಕುಕನೂರು ತಾಲೂಕಿನ ಕುಕನೂರು ವಸತಿ ಶಾಲೆ ಮೊ.ಸಂ: 9844040035, ತಳಕಲ್ ವಸತಿ ಶಾಲೆ ಮೊ.ಸಂ: 6361118478 ಹಾಗೂ ಕುದರಿಮೋತಿ ವಸತಿ ಶಾಲೆ ಮೊ.ಸಂ: 9740702035, ಕೊಪ್ಪಳ ತಾಲೂಕಿನ ಟಣಕನಕಲ್ ವಸತಿ ಶಾಲೆ ಮೊ.ಸಂ: 9902690349, ಗಂಗಾವತಿ ತಾಲೂಕಿನ ಹಿರೇಬೆಣಕಲ್-1 ವಸತಿ ಶಾಲೆ ಮೊ.ಸಂ: 8150924173 ಮತ್ತು ಹಿರೇಬೆಣಕಲ್ ವಸತಿ ಶಾಲೆ ಮೊ.ಸಂ: 9731864636, ಈ ಆರು ವಸತಿ ಶಾಲೆಗಳಲ್ಲಿ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಭೇಟಿನೀಡಿ ಜುಲೈ 31ರೊಳಗಾಗಿ ಉಚಿತವಾಗಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು 10ನೇ ತರಗತಿಯಲ್ಲಿ ವಿದ್ಯಾರ್ಥಿಗಳು ಉತ್ತೀರ್ಣರಾಗಿರಬೇಕು. ಪ್ರವೇಶ ಸ್ಥಾನಗಳನ್ನು ಶೇ 75ರಷ್ಟು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮತ್ತು ಶೇ 25ರಷ್ಟು ಇತರೆ ವರ್ಗದವರಿಗೆ ಮೀಸಲಿಡಲಾಗಿದೆ. ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ಮತ್ತು ಹಿಂದುಳಿದ ವರ್ಗಗಳಾದ 2ಎ, 2ಬಿ, 3ಎ, 3ಬಿ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನವು ರೂ. 1 ಲಕ್ಷಗಳಿಗೆ ಮೀರಿರಬಾರದು. ಪ್ರವರ್ಗ-1 ವಿದ್ಯಾರ್ಥಿಗಳ ಹಾಗೂ ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ವರಮಾನವು ರೂ. 2.50 ಲಕ್ಷಗಳಿಗೆ ಮೀರಿರಬಾರದು.
ಭರ್ತಿ ಮಾಡಿದ ಅರ್ಜಿಯೊಂದಿಗೆ ಕಂದಾಯ ಇಲಾಖೆಯ ತಹಶೀಲ್ದಾರ ನೀಡಿದ ಜಾತಿ ಮತ್ತು ಆದಾಯ ದೃಢೀಕರಣ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ, ಆಧಾರ ಕಾರ್ಡ್ ಹಾಗೂ ವಿದ್ಯಾರ್ಥಿ ಪಾಸ್ ಪೋರ್ಟ್ ಅಳತೆಯ ಇತ್ತೀಚಿನ ನಾಲ್ಕು ಭಾವಚಿತ್ರಗಳೊಂದಿಗೆ ನಿಗದಿ ಪಡಿಸಿದ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು. ಅಪೂರ್ಣವಾದ ಮತ್ತು ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿ ಹಾಗೂ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಕೊಪ್ಪಳ ದೂ.ಸಂ: 08539-225070, 8088892549 ಮತ್ತು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಾದ ಮೊ.ಸಂ: 9972524670, ಕುಷ್ಟಗಿ ಮೊ.ಸಂ: 8861610578, ಯಲಬುರ್ಗಾ ಮೊ.ಸಂ: 9620522537ಗೆ ಸಂಪರ್ಕಿಸುವಂತೆ ಕೊಪ್ಪಳ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸುರೇಶ ಕೋಕರೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.