Prof. as a guest of the week on Chandana channel. BK Ravi
ಕೊಪ್ಪಳ ಜುಲೈ 27 (ಕರ್ನಾಟಕ ವಾರ್ತೆ): ಕರ್ನಾಟಕದ ಪ್ರತಿಷ್ಠಿತ ಚಂದನ ವಾಹಿನಿಯ ‘ವಾರದ ಅತಿಥಿ’ ಕಾರ್ಯಕ್ರಮದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಪ್ರಥಮ ಕುಲಪತಿಗಳಾದ ಪ್ರೊ. ಬಿ.ಕೆ.ರವಿ ಅವರು ಅತಿಥಿಗಳಾಗಿ ಕಾಣಿಸಿಕೊಳ್ಳಲಿದ್ದಾರೆ.
ಜುಲೈ 28ರ ಶುಕ್ರವಾರದಂದು ಸಂಜೆ 8 ಗಂಟೆಗೆ ಪ್ರಸಾರವಾಗಲಿರುವ ಕಾರ್ಯಕ್ರಮದಲ್ಲಿ ತಮ್ಮ 30 ವರ್ಷಗಳ ಸುದೀರ್ಘ ಶೈಕ್ಷಣಿಕ, ಸಂಶೋಧನಾ ಅನುಭವಗಳನ್ನು ಹಾಗೂ ಪ್ರಚಲಿತ ವಿದ್ಯಮಾನಗಳ ಕುರಿತು ವಿಷಯಗಳನ್ನು ಹಂಚಿಕೊಳ್ಳಲಿದ್ದಾರೆ.
ವಿವಿಧ ಕ್ಷೇತ್ರಗಳಲ್ಲಿ ಗುರುತರ ಸೇವೆ ನೀಡುತ್ತ ಬಂದಿರುವ ಸಾಧಕರನ್ನು ಚಂದನ ವಾಹಿನಿಯು ಗುರುತಿಸಿ ಅವರನ್ನು ‘ವಾರದ ಅತಿಥಿ’ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದು, ಅವರ ಸೇವಾನುಭಗಳನ್ನು ನಾಡಿನ ಜನರಿಗೆ ತಲುಪಿಸುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
ಇದೇ ಕಾರ್ಯಕ್ರಮವು ಜುಲೈ 30ರ ಭಾನುವಾರದಂದು ಮಧ್ಯಾಹ್ನ 3 ಗಂಟೆಗೆ ಮರುಪ್ರಸಾರಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.