State level D.V. Hanumanthappa Andagi selected for Gundappa award
ಕೊಪ್ಪಳ : ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರು, ಕಂಚಿನ ಕಂಠದ ಜಾನಪದ ಹಾಡುಗಾರರು, ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಹನುಮಂತಪ್ಪ ಅಂಡಗಿ ಚಿಲವಾಡಗಿ ಅವರನ್ನು ರಾಜ್ಯಮಟ್ಟದ ಡಿ.ವಿ. ಗುಂಡಪ್ಪ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಧ್ರುವ ನ್ಯೂಸ್ ವಾರಪತ್ರಿಕೆಯ ಸಂಪಾದಕರಾದ ಸಿದ್ದು ಹಿರೇಮಠ ತಿಳಿಸಿದ್ದಾರೆ.
ಧ್ರುವ ನ್ಯೂಸ್ ವಾರಪತ್ರಿಕೆ ವತಿಯಿಂದ ೩೦.೦೭.೨೦೨೩ ರಂದು ಕೊಪ್ಪಳದ ತಾಲೂಕ ಪಂಚಾಯಿತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಹನುಮಂತಪ್ಪ ಅಂಡಗಿಯವರ ಸಾಹಿತ್ಯ ಕ್ಷೇತ್ರ, ಜಾನಪದ ಹಾಡುಗಾರಿಕೆ ಕ್ಷೇತ್ರ, ಶೈಕ್ಷಣಿಕ ಕ್ಷೇತ್ರವನ್ನು ಪರಿಗಣಿಸಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಕೊಪ್ಪಳದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು, ಹೆಬ್ಬಾಳ ಸಂಸ್ಥಾನ ಮಠದ ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಈ ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದಾರೆ. ಯಲಬುರ್ಗಾದ ಬಿಜೆಪಿಯ ಹಿರಿಯ ಮುಖಂಡರಾದ ಬಸಲಿಂಗಪ್ಪ ಭೂತೆ, ಕಾಂಗ್ರೆಸ್ ಪರಿಶಿಷ್ಟ ಜಾತಿ ಸಮಿತಿಯ ಜಿಲ್ಲಾಧ್ಯಕ್ಷರಾದ ಗಾಳೆಪ್ಪ ಪೂಜಾರ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ಕಾಂಗ್ರೆಸ್ ಯುವ ಮುಖಂಡರಾದ ಗೂಳಪ್ಪ ಹಲಗೇರಿ, ಸಮಾಜ ಸೇವಕರಾದ ಹನುಮಂತಪ್ಪ ಬೀಡನಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.