Birthday of Dr. Mahantha Shivayogi; Addiction Free Day is on August 01
ಕೊಪ್ಪಳ ಜುಲೈ 31 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ ಇವರ ಸಹಯೋಗದಲ್ಲಿ ಡಾ.ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಆಗಸ್ಟ್ 01ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಆಯೋಜಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರಾದ ಕರಡಿ ಸಂಗಣ್ಣ, ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ದೊಡ್ಡನಗೌಡ ಹನುಮಗೌಡ ಪಾಟೀಲ,
ಗಾಲಿ ಜನಾರ್ಧನರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ನಗರಸಭೆ ಅಧ್ಯಕ್ಷರಾದ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ವಸತಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ನವೀನ್ ರಾಜ್ ಸಿಂಗ್ ಅವರು ಭಾಗವಹಿಸಲಿದ್ದಾರೆ.
ಮಾನಸಿಕ ರೋಗ ತಜ್ಞರಾದ ಡಾ.ವಾದಿರಾಜ ಗೊರೆಬಾಳ ಅವರು ‘ಮದ್ಯಪಾನ, ಮಾದಕ ದ್ರವ್ಯ ಮತ್ತು ತಂಬಾಕು ಸೇವನೆಯಿಂದ ದುಷ್ಪರಿಣಾಮ” ಕುರಿತು ಹಾಗೂ ನಿವೃತ್ತ ಜಿಲ್ಲಾ ಆಯುಷ್ ಆರೋಗ್ಯಾಧಿಕಾರಿಗಳಾದ ಡಾ.ಸಂಗಮೇಶ ಕಲಹಾಳ ಅವರು `ವ್ಯಸನಮುಕ್ತ ಆಂದೋಲನದ ಹರಿಕಾರರು ಡಾ.ಮಹಾಂತ ಶಿವಯೋಗಿ’ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡುವರು.
ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ಸುನೀಲ್ ವಂಟಗೋಡಿ, ಬೆಂಗಳೂರಿನ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಕಾರ್ಯದರ್ಶಿಗಳಾದ ಎಸ್.ಶಂಕರಪ್ಪ ಉಪಸ್ಥಿತರಿರುವರು ಎಂದು ಜಿಲ್ಲಾ ವಾರ್ತಾಧಿಕಾರಿಗಳಾದ ಗವಿಸಿದ್ದ ಹೊಸಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.