Supply of Electric Fodder Cutting Machines: Invitation for Applications
ಕೊಪ್ಪಳ ಜುಲೈ 28 (ಕರ್ನಾಟಕ ವಾರ್ತೆ): ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ 2023-24ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ 2ಹೆಚ್.ಪಿ ಸಾಮರ್ಥ್ಯದ ವಿದ್ಯುತ್ ಚಾಲಿತ ಮೇವು ಕತ್ತರಿಸುವ ಯಂತ್ರ(2ಹೆಚ್.ಪಿ ಎಲೆಕ್ಟ್ರಿಕ್ ಮೋಟರ್ ಚಾಫ್ ಕಟ್ಟರ್)ಗಳನ್ನು ವಿತರಿಸಲು ಅರ್ಹ ಫಲಾನುಭವಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿಯಡಿ ಆಯ್ಕೆಯಾದ ಪ್ರತಿ ಫಲಾನುಭವಿಗಳಿಗೆ 2ಹೆಚ್.ಪಿ ಸಾಮರ್ಥ್ಯದ ವಿದ್ಯುತ್ ಚಾಲಿತ ಮೇವು ಕತ್ತರಿಸುವ ಯಂತ್ರಗಳನ್ನು ವಿತರಣೆ ಮಾಡಲಾಗುವುದು. ಈ ಕಾರ್ಯಕ್ರಮದಡಿ ಘಟಕದ ವೆಚ್ಚ ರೂ. 33,000 ಇದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಸಾಮಾನ್ಯ ಸೇರಿ ಎಲ್ಲ ಫಲಾನುಭವಿಗಳಿಗೆ ಶೇ.50ರಷ್ಟು ರೂ. 16,500 ಗಳ ಸಹಾಯಧನ ಮತ್ತು ಉಳಿದ ಶೇ.50 ರೂ. 16,500 ಗಳ ಫಲಾನುಭವಿಗಳ ವಂತಿಕೆಯೊಂದಿಗೆ ಯೋಜನೆ ಅನುಷ್ಟಾನಗೋಳಿಸಲಾಗುವುದು.
ಅರ್ಜಿ ಸಲ್ಲಿಸಲು ಅರ್ಜಿದಾರರು ಫ್ರೂಟ್ಸ್ ಐಡಿ (ಗುರುತಿನ ಸಂಖ್ಯೆ) ಹೊಂದಿರಬೇಕು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳು ಜಾತಿ ಪ್ರಮಾಣ ಪತ್ರವನ್ನು ಹೊಂದಿರಬೇಕು (ಪ್ರಮಾಣ ಪ್ರತದಲ್ಲಿ ಆರ್.ಡಿ ನಂ.ಇರಬೇಕು). ವಿಶೇಷ ಚೇತನರಾಗಿದ್ದಲ್ಲಿ ಪ್ರಮಾಣ ಪತ್ರ ಹೊಂದಿರುವುದು ಕಡ್ಡಾಯ. ಸರ್ಕಾರದ ನಿಯಮಗಳಂತೆ ಮಹಿಳೆಯರಿಗೆ ಶೇ.33.3 ರಷ್ಟು, ಅಲ್ಪಸಂಖ್ಯಾತರಿಗೆ ಶೇ.15 ಮತ್ತು ವಿಶೇಷ ಚೇತನರಿಗೆ ಶೇ.3 ರಷ್ಟು ಆಧ್ಯತೆ ನೀಡಲಾಗುವುದು.
ಅರ್ಜಿ ಸಲ್ಲಿಸಲು ಆಗಸ್ಟ್ 11 ಕೊನೆಯ ದಿನವಾಗಿದ್ದು, ಅರ್ಜಿಗಳಿಗಾಗಿ ಮತ್ತು ಹೆಚ್ಚಿನ ಮಾಹಿತಿಗಾಗಿ ತಾಲೂಕುಗಳ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ), ಮುಖ್ಯ ಪಶುವೈದ್ಯಾಧಿಕಾರಿಗಳು, ಪಶು ಆಸ್ಪತ್ರೆ ಕೊಪ್ಪಳ, ಗಂಗಾವತಿ, ಯಲಬುರ್ಗಾ, ಕುಷ್ಟಗಿ, ಕುಕನೂರು, ಕಾರಟಗಿ ಅಥವಾ ಕನಕಗಿರಿ ಕಚೇರಿಗಳಿಗೆ ಸಂಪರ್ಕಿಸಲು ಮತ್ತು ಜಿಲ್ಲೆಯ ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ಡಾ ಪಿ.ಎಂ.ಮಲ್ಲಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ವಿದ್ಯುತ್ ಚಾಲಿತ ಮೇವು ಕತ್ತರಿಸುವ ಯಂತ್ರಗಳ ವಿತರಣೆ: ಅರ್ಜಿ ಆಹ್ವಾನ
—-