Acceptance of people's report every Tuesday, statement of BJP CEO Rahul Ratnam Pandey
ಗಂಗಾವತಿ : ತಾಲೂಕು ಪಂಚಾಯತ್ ಮಂಥನ ಸಭಾಂಗಣದಲ್ಲಿ ಜಿಪಂ ಸಿಇಓ ರಾಹುಲ್ ರತ್ನಂ ಪಾಂಡೆಯ ಅವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕರ ಕುಂದುಕೊರತೆ (ಅಹವಾಲು) ಸ್ವೀಕಾರ ಸಭೆ ಮಂಗಳವಾರ ನಡೆಯಿತು.
ಜಿಪಂ ಸಿಇಓ ರಾಹುಲ್ ರತ್ನಂ ಪಾಂಡೆಯ ಅವರು, ಅಹವಾಲು ಸಲ್ಲಿಕೆಗೆ ಬಂದ ಜನರನ್ನು ಒಬ್ಬೊಬ್ಬರನ್ನಾಗಿ ಸಭೆಗೆ ಕರೆದು ಸಮಾಧಾನದಿಂದ ಜನರ ಸಮಸ್ಯೆ ಆಲಿಸಿ, ಈಡೇರಿಸುವ ಭರವಸೆ ನೀಡಿದರು.
ವಿವಿಧ ಗ್ರಾಮಗಳಿಂದ ಬಂದಿದ್ದ ಸಾರ್ವಜನಿಕರು ಕುಡಿವ ನೀರಿನ ಸಮಸ್ಯೆ, ಆರ್ ಓ ಪ್ಲಾಂಟ್ ಗಳ ದುರಸ್ತಿ, ಚರಂಡಿ ಸಮಸ್ಯೆ, ಸಾರಿಗೆ ಬಸ್ ಸಮಸ್ಯೆ, ಶಾಲಾ ಅಭಿವೃದ್ಧಿ ಕಾಮಗಾರಿಗಳು, ರಸ್ತೆ ಸಮಸ್ಯೆ, ಕುಡಿವ ನೀರಿನ ಸಮಸ್ಯೆ, ಉದ್ಯಾನ ವನ ಅಭಿವೃದ್ಧಿ ಪಡಿಸುವುದು, ವಸತಿ ಸಮಸ್ಯೆ, ವೈಯಕ್ತಿಕ ಜಾಗದ ಸಮಸ್ಯೆ, ಸ್ಮಶಾನಕ್ಕೆ ದಾರಿ ಹಾಗೂ ವಿಕಲಚೇತನರ ಯುಡಿ ಐಡಿ ಕಾರ್ಡ್ ವಿತರಣೆ ಕೇಂದ್ರವನ್ನು ಕನಕಗಿರಿ ಹಾಗೂ ಕಾರಟಗಿಯಲ್ಲಿ ತೆರೆಯುವುದು ಸೇರಿ ಇತರೆ ಸಮಸ್ಯೆಗಳ ಕುರಿತು ಅಹವಾಲು ಸಲ್ಲಿಸಿದರು.
ಸಭೆಯಲ್ಲಿ ಇದ್ದ ತಾಲೂಕು ಮಟ್ಟದ ಅನುಷ್ಠಾನ ಅಧಿಕಾರಿಗಳಿಗೆ ಆಯಾ ಇಲಾಖೆ ಅಧಿಕಾರಿಗಳು ಸಾರ್ವಜನಿಕರ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಸೂಚಿಸಿದರು.
ವಿಕಲ ಚೇತನರಿಗೆ ಉಚಿತ ಆರೋಗ್ಯ ಶಿಬಿರ
ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವಿಕಲಚೇತನರಿಗೆ ಉಚಿತ ಆರೋಗ್ಯ ಶಿಬಿರ ನಡೆಸಲಾಗುವುದು. ಎಲ್ಲ ವಿಕಲಚೇತನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಪಂ ಸಿಇಓ ರಾಹುಲ್ ರತ್ನಂ ಪಾಂಡೆಯ ಅವರು ಮಾಹಿತಿ ನೀಡಿದರು.
ಹೆಚ್ಚಿನ ಕಾಯಿಲೆ ಅಥವಾ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ವಿಕಲ ಚೇತನರಿಗೆ ಹೆಚ್ಚಿನ ಚಿಕಿತ್ಸೆಗೆ ಕ್ರಮವಹಿಸಲಾಗುವುದು ಎಂದರು.
ಗ್ರಾಪಂ ಗಳ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಗ್ರಾಪಂ ಪಿಡಿಓಗಳಿಗೆ ಸೂಚಿಸಿದರು.
ಸಾರ್ವಜನಿಕರ ಮೆಚ್ಚುಗೆ
ಜಿಲ್ಲಾ ಪಂಚಾಯತ ಸಿಇಓ ರಾಹುಲ್ ರತ್ನಂ ಪಾಂಡೆಯ ಅವರು ಪ್ರತಿ ಮಂಗಳವಾರ ಒಂದು ತಾಲೂಕಿಗೆ ಭೇಟಿ ನೀಡಿ, ಜನರ ಸಮಸ್ಯೆ ಆಲಿಸುತ್ತಿರುವುದಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.
ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ, ಸಹಾಯಕ ನಿರ್ದೇಶಕರಾದ ಮಹಾಂತಗೌಡ ಪಾಟೀಲ್, ಯೋಜನಾಧಿಕಾರಿಗಳು,
ತಾಲೂಕು ಮಟ್ಟದ ಎಲ್ಲ ಅನುಷ್ಠಾನ ಅಧಿಕಾರಿಗಳು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ವಿಷಯ ನಿರ್ವಾಹಕರು, ನರೇಗಾ, ಎಸ್ ಬಿಎಂ, ಎನ್ ಆರ್ ಎಲ್ ಎಂ ಸಿಬ್ಬಂದಿಗಳು ಇದ್ದರು.