Breaking News

ಶಿಶು ಪಾಲನಾ ಕೇಂದ್ರದಲ್ಲಿ ಒಳ್ಳೆಯ ವಾತಾವರಣ ನಿರ್ಮಿಸಿ-ತಾಪಂ ಇಓ ಲಕ್ಷ್ಮೀದೇವಿ ಸಲಹೆ

Create a good environment in the child care center-Tampam EO Lakshmidevi advises

ಶಿಶು ಪಾಲನಾ ಕೇಂದ್ರಗಳ ಮಹಿಳಾ ಕೇರ್ ಟೇಕರ್ಸ್ ಅವರ ತರಬೇತಿ ಕಾರ್ಯಾಗಾರಕ್ಕೆ ಚಾಲನೆ

ಜಾಹೀರಾತು

ಗಂಗಾವತಿ : ತಾಲೂಕು ಪಂಚಾಯತ್ ಮಂಥನ ಸಭಾಂಗಣದಲ್ಲಿ ನರೇಗಾ ಯೋಜನೆಯಡಿ ಆರಂಭವಾಗುತ್ತಿರುವ ಶಿಶು ಪಾಲನಾ ಕೇಂದ್ರದ ಗಂಗಾವತಿ, ಕನಕಗಿರಿ ಹಾಗೂ ಕಾರಟಗಿ ಮಹಿಳಾ ಕೇರ್ ಟೇಕರ್ಸ್ ಅವರಿಗೆ ಬುಧವಾರ ಆಯೋಜಿಸಿದ್ದ ನಾಲ್ಕು ದಿನಗಳ ತರಬೇತಿ ಕಾರ್ಯಾಗಾರವನ್ನು ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ ಅವರು ಸಸಿಗೆ ನೀರೆರೆದು ಉದ್ಘಾಟಿಸಿದರು.

ನಂತರ ತಾಪಂ ಇಓ ಲಕ್ಷ್ಮೀದೇವಿ ಅವರು ಮಾತನಾಡಿ, ಆ.15 ರಿಂದ ಗ್ರಾಪಂ ವ್ಯಾಪ್ತಿಯಲ್ಲಿ ಶಿಶು ಪಾಲನಾ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಈ ಕೇಂದ್ರಗಳಿಗೆ 3 ತಿಂಗಳಿಗೆ ಇಬ್ಬರಂತೆ ವರ್ಷಕ್ಕೆ 8 ಜನ ಕೇರ್ ಟೇಕರ್ಸ್ ಇರುತ್ತಾರೆ. ಕೇಂದ್ರಕ್ಕೆ ಬರುವ ಮಕ್ಕಳನ್ನು ಚೆನ್ನಾಗಿ ಆರೈಕೆ ಮಾಡಬೇಕು. ಕೇಂದ್ರದಲ್ಲಿ ಮಗುವಿಗೆ ಒಳ್ಳೆಯ ವಾತಾವರಣ ನಿರ್ಮಾಣ ಮಾಡಬೇಕು. ಕಾರ್ಯಾಗಾರದ ಸದುಪಯೋಗ ಪಡೆಯುವಂತೆ ಸಲಹೆ ನೀಡಿದರು.

ನರೇಗಾ ವಿಷಯ ನಿರ್ವಾಹಕರಾದ ಶಿವಮೂರ್ತಯ್ಯ ಕಂಪಾಪೂರ ಮಠ್, ಮಹಿಳಾ ಮತ್ತು ಕಲ್ಯಾಣ ಇಲಾಖೆಯ ಮೇಲ್ವಿಚಾರಕರು ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ಸುಕನ್ಯಾ, ವಿದ್ಯಾವತಿ ಹಾಗೂ ತಾಂತ್ರಿಕ ಸಂಯೋಜಕರಾದ ಬಸವರಾಜ ಜಟಗಿ, ಎಂಐಎಸ್ ಸಂಯೋಕರಾದ ನಾಗರಾಜ ಗಂಗನಾಳ, ಗಂಗಾವತಿ ಐಇಸಿ ಸಂಯೋಜಕರಾದ ಬಾಳಪ್ಪ ತಾಳಕೇರಿ, ಕನಕಗಿರಿ ಐಇಸಿ ಸಂಯೋಜಕರಾದ ಶಿವಕುಮಾರ್ ಕೆ,
ಕಾರಟಗಿ ತಾಲೂಕು ಐಇಸಿ ಸಂಯೋಜಕರಾದ ಸೋಮನಾಥ ನಾಯಕ ಸೇರಿ ಇತರೆ ಸಿಬ್ಬಂದಿಗಳು ಇದ್ದರು.

About Mallikarjun

Check Also

ತೆಲಗಿ ಮಾದರಿಯಲ್ಲಿ ಮತ್ತೊಂದು ಭಾರೀ ನಕಲಿ ಛಾಪಾ ಕಾಗದ ಹಗರಣ

Another massive fake printing paper scam on the Telugu model ಕಾನೂನು ಬಾಹಿರ ಫ್ರಾಂಕಿಂಗ್ ಮೂಲಕ ಸರ್ಕಾರದ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.