Distribution of 50,000 note books in first phase by Maruti Medical Bangalore, owner of Mahindra Munnote chain.
ಗಂಗಾವತಿ, 4:ತಾಲೂಕಿನ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ವಿತರಿಸಲು ಶ್ರೀ ಮಹೇಂದ್ರ ಮುನ್ನೋಟ್ ಜೈನ್. ಮಾಲೀಕರು. ಮಾರುತಿ ಮೆಡಿಕಲ್ಸ್ ಬೆಂಗಳೂರು. ಇವರು ಉಚಿತವಾಗಿ ಮೊದಲ ಹಂತದಲ್ಲಿ ನೀಡಿರುವ 50000 ನೋಟ್ ಬುಕ್ ಗಳನ್ನು ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ವೆಂಕಟೇಶ್ ರಾಮಚಂದ್ರಪ್ಪ ಸರ್ ಹಾಗೂ ಸಮನ್ವಯಾಧಿಕಾರಿಗಳಾದ ಶ್ರೀ ಮಂಜುನಾಥ ವಸ್ತ್ರದ ಸರ್ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸರಕಾರದ ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸುವ ಕಾರ್ಯ ಪ್ರತಿಯೊಬ್ಬರು ಮುಂದಾಗಬೇಕು ಸರ್ಕಾರದ ಹಲವು ಶೈಕ್ಷಣಿಕ ಯೋಜನೆಗಳನ್ನು ವಿದ್ಯಾರ್ಥಿಗಳು ಪಡೆದುಕೊಳ್ಳುವುದರ ಮೂಲಕ ಗುಣಮಟ್ಟದ ಶಿಕ್ಷಣವನ್ನು ಪಡೆದುಕೊಳ್ಳಲು ಮುಂದಾಗಬೇಕು ಶಿಕ್ಷಣ ಪ್ರತಿಯೊಂದು ಮಗುವಿನ ಮೂಲಭೂತ ಹಕ್ಕಾಗಿದ್ದು ಯಾವುದೇ ಮಗು ಶಿಕ್ಷಣ ಸೌಲಭ್ಯದಿಂದ ವಂಚಿತರಾಗಬಾರದು ಎಂದು ಹೇಳಿದರು ಈ ಸಂದರ್ಭದಲ್ಲಿ ಸಮನ್ವಯ ಅಧಿಕಾರಿಗಳಾದ ಮಂಜುನಾಥ್ ವಸ್ತ್ರದ ಉಪಸ್ಥಿತರಿದ್ದರು