Breaking News

ಸೊಳ್ಳೆಯಿಂದ ಹರಡುವ ಕಾಯಿಲೆಗಳು ಹಾಗೂ ನಿಯಂತ್ರಣದ ಕುರಿತಾಗಿ ತರಬೇತಿ ಕಾರ್ಯಕ್ರಮ

Training program on mosquito borne diseases and control

ಗಂಗಾವತಿ: ಇಂದು ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ,
ಗಂಗಾವತಿ ಕಾರಟಗಿ ಕನಕಗಿರಿ ತಾಲೂಕಿನ ಸರ್ಕಾರಿ ಹಾಗೂ ಖಾಸಗಿ ಅನುದಾನಿತ ಪ್ರೌಢಶಾಲೆಗಳ ವಿಜ್ಞಾನ ಶಿಕ್ಷಕರಿಗೆ ಸೊಳ್ಳೆಯಿಂದ ಹರಡುವ ಕಾಯಿಲೆಗಳು ಹಾಗೂ ನಿಯಂತ್ರಣದ ಕುರಿತಾಗಿ ತರಬೇತಿ ಕಾರ್ಯಕ್ರಮವನ್ನ ಸಾರ್ವಜನಿಕ ಆಸ್ಪತ್ರೆಯ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು.

ಜಾಹೀರಾತು

ಕಾರ್ಯಕ್ರಮವನ್ನು ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿಗಳಾದ ಡಾ. ವೆಂಕಟೇಶ್ ಉದ್ಘಾಟಿಸಿ ಮಾತನಾಡಿ ಕಾರ್ಯಕ್ರಮವನ್ನು ಹಮ್ಮಿಕೊಂಡ ಉದ್ದೇಶ ಭಾರತ ಸರ್ಕಾರ ದೇಶದಲ್ಲಿ 2030 ನೇ ಇಸವಿಗೆ ಮಲ್ಲೇರಿ ಮುಕ್ತ ದೇಶವನ್ನಾಗಿ ಮಾಡಬೇಕು ಎಂದು ಗುರಿಯೊಂದಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಆದ್ದರಿಂದ ಸೊಳ್ಳೆಯಿಂದ ಹರಡುವ ಕಾಯಿಲೆಗಳ ಬಗ್ಗೆ ಒಬ್ಬರಿಂದ ಒಬ್ಬರಿಗೆ ಹೆಚ್ಚಿನ ಪ್ರಮಾಣದಲ್ಲಿ ಪ್ರಚಾರ ಮಾಡಬೇಕಾಗಿದ್ದು ಸರ್ಕಾರದ ಗುರಿಯಾಗಿದೆ ಎಂದು ತಿಳಿಸಿದರು ಆದ್ದರಿಂದ ಈ ಸದರಿ ಕಾರ್ಯಕ್ರಮದ ಮೂಲಕ ಎಲ್ಲಾ ಶಿಕ್ಷಕರು ತಮ್ಮ ತಮ್ಮ ಶಾಲೆಗಳಲ್ಲಿ ಬರುವ ಎಲ್ಲ ವಿದ್ಯಾರ್ಥಿಗಳಿಗೆ ಕಾಯಿಲೆಗಳ ಕುರಿತು ಹಾಗೂ ಮುಂಜಾಗ್ರತೆ ಕುರಿತು ಮಾಹಿತಿ ನೀಡಲಿ ಸಾರ್ವಜನಿಕರ ಸಹಭಾಗಿತ್ವದಲ್ಲಿ ಕರ್ನಾಟಕ ರಾಜ್ಯವನ್ನು 2025 ನೇ ಇಸವಿಗೆ ಮಲೇರಿ ಮುಕ್ತ ರಾಜ್ಯವನ್ನಾಗಿ ಮಾಡಲು ಕೈಜೋಡಿಸಬೇಕೆಂದು ಕರೆಕೊಟ್ಟರು.

ಕಾರ್ಯಕ್ರಮದಲ್ಲಿ ಮೂರು ತಾಲೂಕಿನ ಶಿಕ್ಷಕರಿಗೆ ಜಿಲ್ಲಾ ಮಲ್ಲೇರಿಯಾ ಕಾರ್ಯಾಲಯದ ಕನ್ಸಲ್ಟೆಂಟ್ ಆದ ರಮೇಶ್ ಹಾಗೂ ಶಿಕ್ಷಕರ ಪಾತ್ರದ ಕುರಿತು ವಿವರಣೆ ನೀಡಿದರು.

ರಾಜ್ಯ ದಿಂದ ಕಾರ್ಯಕ್ರಮ ಪ್ರತಿನಿಧಿಯಾಗಿ ಆಗಮಿಸಿದ ತರಬೇತುದಾರರು ಆದ ಛತ್ರಪ್ಪ ಶಿಕ್ಷಕರು ಹಾಗೂ ಸಿದ್ದಲಿಂಗೇಶ್ವರ ಶಿಕ್ಷಕರು ಶಿಬಿರಾರ್ಥಿಗಳಿಗೆ ತರಬೇತಿ ನೀಡಿದರು.

ಕಾರ್ಯಕ್ರಮದಲ್ಲಿ ದೇವಿಂದ್ರ ಗೌಡ ತಾಲೂಕು ಮೇಲ್ವಿಚಾರಕರು ಮಾತನಾಡಿ ಸೊಳ್ಳೆಯಿಂದ ಆಡುವ ರೋಗಗಳ ಬಗ್ಗೆ ಸಾರ್ವಜನಿಕರ ಪಾತ್ರಗಳ ಹಾಗೂ ಅಂತರ ಇಲಾಖೆಗಳ ಪಾತ್ರಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಸುಮಾರು 120 ವಿಜ್ಞಾನ ಶಿಕ್ಷಕರ ಭಾಗವಹಿಸಿದ್ದರು. ಸದರಿ ಸಮಯದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ಗುರುರಾಜ್ ಹಿರೇಮಠ ರಮೇಶ್ ಸುನಿಲ್ ಗುರು ಉಪಸ್ಥಿತರಿದ್ದರು

About Mallikarjun

Check Also

ಕಂದಾಯ ದಿನಾಚರಣೆ ಕಾರ್ಯಕ್ರಮ

Revenue Day Program ಕೊಟ್ಟೂರು:. ತಾಲೂಕು ಕಛೇರಿ, ಈದಿನ ಕಂದಾಯ ದಿನಾಚರಣೆಯನ್ನು ಆಚರಿಸಲಾಯಿತು. ತಹಶೀಲ್ದಾರರಾದ ಅಮರೇಶ್.ಜಿ.ಕೆ ಇವರು ಕಂದಾಯ ಇಲಾಖೆಯ …

Leave a Reply

Your email address will not be published. Required fields are marked *