Breaking News

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಪೂರ್ವಭಾವಿ ಸಭೆ ಮಾಡಿದ ಶಾಸಕ ಎಮ್ ಆರ್ ಮಂಜುನಾಥ್

MLA M R Manjunath held a preliminary meeting on the occasion of Independence Day


ವರದಿ :ಬಂಗಾರಪ್ಪ ಸಿ ಹನೂರು .
ಹನೂರು: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪೂರ್ವಭಾವಿ ಸಭೆಯನ್ನು ಪಟ್ಟಣದ ಲೋಕೋಪಯೋಗಿ ವಸತಿ ಗೃಹ ಸಭಾಂಗಣದಲ್ಲಿ ಶಾಸಕ ಎಂ.ಆರ್. ಮಂಜುನಾಥ್ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು
ದ್ವಜಾರೋಹಣ, ಪಥ ಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ವಿದ್ಯಾರ್ಥಿಗಳ ಅನುಕೂಲಕ್ಕೆ ಶಾಮಿಯಾನ ವ್ಯವಸ್ಥೆ, ಉಪಹಾರ, ಕುಡಿಯುವ ನೀರು ಒದಗಿಸುವುದು, ಸರ್ಕಾರಿ ಕಟ್ಟಡಗಳಿಗೆ ವಿದ್ಯುತ್ ಅಲಂಕಾರ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ಚರ್ಚಿಸಲಾಯಿತು.
ನಂತರ ಮಾತನಾಡಿದ ಅವರು ನಮ್ಮ ದೇಶಕ್ಕೆ ಸ್ವಾತಂತ್ರ್ಯ ಬಂದ ದಿನವನ್ನು ಸಂಭ್ರಮ ಸಡಗರದಿಂದ ಆಚರಿಸುವ ನಿಟ್ಟಿನಲ್ಲಿ ಎಲ್ಲಾ ಇಲಾಖೆ ಅಧಿಕಾರಿಗಳು ತಮಗೆ ವಹಿಸಲಾಗಿರುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೆಕಾಗಿದೆ , ಕಾರ್ಯಕ್ರಮಕ್ಕೆ ಮೆರಗು ತರುವ ನಿಟ್ಟಿನಲ್ಲಿ ವಿನೂತನ ಕಾರ್ಯಕ್ರಮಗಳನ್ನು ಕೈಗೊಳ್ಳುವುದಾದರೆ ಅಳವಡಿಸಿಕೊಳ್ಳಲು ಸಲಹೆ ನೀಡಿದರು.
ಸಭೆಯಲ್ಲಿ ಹಾಜರಿದ್ದ
ತಹಶೀಲ್ದಾರ್ ಮಾತನಾಡಿದ ಅವರು ಕಳೆದ ವರುಷ ಕೈಗೊಳ್ಳಲಾಗಿದ್ದ ಕಾರ್ಯಕ್ರಮದ ವಿವರಗಳನ್ನು ತಿಳಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು ಅವರು ತಮ್ಮ ಇಲಾಖೆ ವತಿಯಿಂದ ವಿದ್ಯಾರ್ಥಿಗಳು, ಶಿಕ್ಷಕರ ಸಹಭಾಗಿತ್ವದ ಬಗ್ಗೆ ವಿವರವಾಗಿ ತಿಳಿಸಿದರು.

ಜಾಹೀರಾತು

ಕೊಂಗನಹಳ್ಳಿ ಗ್ರಾಮ ಪಂಚಾಯಿತಿ ಕಾಮಗೆರೆ ಮುಖ್ಯ ರಸ್ತೆ ಹಾಗೂ ಮಂಗಲ ಗ್ರಾಮದ ಮುಖ್ಯರಸ್ತೆಯಲ್ಲಿ ಬಾಕಿ ಉಳಿದಿರುವ ಮನೆ ಅಂಗಡಿಗಳನ್ನು ತೆರವು ಮಾಡಿ ರಸ್ತೆ ಅಭಿವೃದ್ಧಿ ಬೇಗನೆ ಮಾಡಬೇಕು
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಗತ್ಯ
ಮೂಲ ಸೌಕರ್ಯ ಬಗ್ಗೆ ಗಮನವಹಿಸುವಂತೆ ಹಾಗೂ
ಗ್ರಾಮ ಪಂಚಾಯಿತಿ ಪಿಡಿಒ ಅವರು ತೆರವು ಮಾಡಬೇಕಾಗಿರುವ ಮನೆ ಅಂಗಡಿಗಳ ಸರಿಯಾದ ದಾಖಲಾತಿಗಳನ್ನು ನೀಡಿ ಅವರಿಗೆ ಬರಬೇಕಾದ ಪರಿಹಾರವನ್ನು ಕೊಡಿಸಲು ಕ್ರಮ ಕೈಗೊಳ್ಳುವಂತೆ ಶಾಸಕರು ಸೂಚಿಸಿದರು..
ಈ ಸಂದರ್ಭ ದಲ್ಲಿ ಜಲಜೀವನ್ ಮಿಷನ್ ಯೋಜನೆಯ ಇಂಜಿನಿಯರ್ ಅಧಿಕಾರಿಗಳು ಹಾಗೂ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಮಹೇಶ್ ಕುಮಾರ್, ಪಿಡಿಒ ಮಹೇಂದ್ರ,ನೊಂದಣಾಧಿಕಾರಿಗಳು ಸೇರಿದಂತೆ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಸೇರಿದಂತೆ ಇನ್ನಿತರರು ಹಾಜರಿದ್ದರು.

About Mallikarjun

Check Also

ಕುಷ್ಟಗಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ: ನೋಂದಣಿಗೆ ಸೂಚನೆ

Kushtagi Taluk Level Dasara Games: Notice for registration ಕೊಪ್ಪಳ ಆಗಸ್ಟ್ 29 (ಕರ್ನಾಟಕ ವಾರ್ತೆ): 2025-26ನೇ ಸಾಲಿನ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.