Breaking News

ಆಗಸ್ಟ್-೨೭ ರಂದು ಜಿಲ್ಲಾ ಮಟ್ಟದ ಗಂಗಾಮತ ಪ್ರತಿಭಾ ಪುರಸ್ಕಾರ ಸಮಾರಂಭ

District Level Gangama Pratibha Puraskar Ceremony on August-27

ಜಾಹೀರಾತು

ಗಂಗಾವತಿ: ಕೊಪ್ಪಳ ಜಿಲ್ಲಾ ಗಂಗಾಮತ ನೌಕರರ ಸಂಘದ ವತಿಯಿಂದ ಜಿಲ್ಲಾ ಗಂಗಾಮತ ಸಮಾಜದ ಆಶ್ರಯದಲ್ಲಿ ದಿನಾಂಕ: ೨೭.೦೮.೨೦೨೩ ರ ಭಾನುವಾರದಂದು ಗಂಗಾವತಿ ನಗರದ ಐ.ಎಂ.ಎ ಭವನದಲ್ಲಿ ಗಂಗಾಮತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಆಯೋಜಿಸಲಾಗುತ್ತಿದೆಯೆಂದು ಗಂಗಾವತಿ ತಾಲೂಕ ಗಂಗಾವತಿ ಸಮಾಜ, ತಾಲೂಕ ಗಂಗಾಮತ ನೌಕರರ ಸಂಘದ ಪ್ರಮುಖರು ತಿಳಿಸಿದ್ದಾರೆ.
೨೦೨೨-೨೩ನೇ ಶೈಕ್ಷಣಿಕ ವರ್ಷದಲ್ಲಿ ಶೇಕಡಾವಾರು ೮೫ ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿ.ಯು.ಸಿ ಯ ಕೊಪ್ಪಳ ಜಿಲ್ಲಾ ಗಂಗಾಮತ ಸಮುದಾಯದ ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ಸನ್ಮಾನಿಸಲು ಉದ್ದೇಶಿಸಲಾಗಿದ್ದು, ಇದೇ ಸಮಾರಂಭದಲ್ಲಿ ವಿಶೇಷ ಸಾಧಕರು ಹಾಗೂ ನಿವೃತ್ತ ನೌಕರರಿಗೆ ಸನ್ಮಾನಿಸಲಾಗುವುದು.
ಕರ್ನಾಟಕ ರಾಜ್ಯ ಗಂಗಾವತಿ ನೌಕರರ ಸಂಘದ ಅಧ್ಯಕ್ಷರು, ಕೊಪ್ಪಳ ಜಿಲ್ಲಾ ಗಂಗಾಮತ ಸಮಾಜದ ಅಧ್ಯಕ್ಷರ ನೇತೃತ್ವದಲ್ಲಿ ೨೭ ರಂದು ಬೆಳಿಗ್ಗೆ ೯:೩೦ಕ್ಕೆ ಸರಿಯಾಗಿ ಆರಂಭವಾಗಲಿರುವ ಈ ಸಮಾರಂಭದಲ್ಲಿ ಪಾಲ್ಗೊಳ್ಳಲು ಅರ್ಹ ವಿದ್ಯಾರ್ಥಿಗಳು ದಿನಾಂಕ: ೨೫.೦೮.೨೦೨೩ ರೊಳಗೆ ಈ ಕೆಳಕಂಡ ಮೊಬೈಲ್‌ಗಳಿಗೆ ಕೆರೆಮಾಡಿ ಸೂಕ್ತ ದಾಖಲೆಗಳೊಂದಿಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕೆAದು ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: ೯೪೮೦೨೪೨೮೩೫, ೯೦೬೦೦೨೨೮೦೨, ೮೬೬೦೫೩೦೭೫೭, ೯೪೮೦೩೦೭೭೯೯ ಗಳಿಗೆ ಸಂಪರ್ಕಿಸಿ.

About Mallikarjun

Check Also

76 ಮೈಲ್ ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ಅನ್ನದಾತರ ಹೋರಾಟ ಒಣಗುವ ಸ್ಥಿತಿಯಲ್ಲಿರುವ ಜೋಳ ಬೆಳೆ ಉಳಿಸಿಕೊಡಿ ಎಂದ ರೈತರು.

The farmers have demanded that the 76-mile canal be drained of water, and the farmers …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.