Breaking News

ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೋವರ್ ಘಟಕದ ಸಂಯುಕ್ತಾಶ್ರಯದಲ್ಲಿರಾಷ್ಟ್ರೀಯ ಸದ್ಬಾವನ ದಿನಾಚರಣೆ ಮತ್ತು ದಿವಂಗತ ಡಿ,ದೇವರಾಜು ಅರಸು ಅವರ೧೦೮ನೇ ಜನ್ಮ ದಿನಾಚರಣೆ

National Peace Day Celebration and 108th Birth Anniversary of Late D, Devaraj Arasu at the Joint Shelter of National Service Planning Unit and Krantiveera Sangolli Rayanna Rover Unit

ಗಂಗಾವತಿ: ಇಂದು ರವಿವಾರ ದಿನಾಂಕ ೨೦.೦೮.೨೦೨೩ರ ಬೆಳಗಿನ ಅವಧಿಯಲ್ಲಿ ಕಾಲೇಜಿನಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಸದ್ಭಾವನ ದಿನಾಚರಣೆ ಮತ್ತು ದಿವಂಗತ ಡಿ. ದೇವರಾಜು ಅರಸು ಅವರ ಜನ್ಮ ದಿನಾಚರಣೆ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ರಾಜೀವ್ ಗಾಂಧಿ ಅವರ ಜೀವನ ಮತ್ತು ಸಾಧನೆಯನ್ನು ಕುರಿತು ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿಗಳಾದ ಶ್ರೀ ಸೋಮಶೇಖರಗೌಡ ಮಾತಾಡುತ್ತಾ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರು ರಾಷ್ಟçಕ್ಕಾಗಿ ತಮ್ಮ ತನುಮನ ಧನವನ್ನು ಅರ್ಪಿಸಿದ ಮಹನೀಯರು. ಅತಿ ಕಿರಿಯ ವಯಸ್ಸಿನಲ್ಲಿ ರಾಷ್ಟçದ ಚುಕ್ಕಾಣಿಯನ್ನು ಹಿಡಿದು ರಾಷ್ಟ್ರೀಯ ಶಿಕ್ಷಣ ನೀತಿ, ರಕ್ಷಣೆ, ತಂತ್ರಜ್ಞಾನ, ವಿಮಾನಯಾನ, ಸಾರಿಗೆ, ಕೃಷಿ ಮತ್ತಿತರ ಕ್ಷೇತ್ರಗಳಲ್ಲಿ ಹಲವಾರು ಸುಧಾರಣೆಗಳನ್ನು ಮಾಡಿ ರಾಷ್ಟçದಲ್ಲಿ ಹೆಸರಾದವರು ಎಂದು ಹೇಳಿದರು. ಅವರ ಸವಿನೆನಪಿನ ದಿನವಾಗಿ ಸದ್ಭಾವನ ದಿನವನ್ನಾಗಿ ಆಚರಿಸುತ್ತಿರುವುದರ ಮೂಲಕ ಯುವಕರಲ್ಲಿ ಜೀವನ ಮೌಲ್ಯಗಳು ಬೆಳೆಸುವ ನಿಟ್ಟಿನಲ್ಲಿ ಈ ದಿನ ಅರ್ಥಪೂರ್ಣವಾಗಿದೆ ಎಂದು ಹೇಳಿದರು.
ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಯಾಗಿ ಹಿಂದುಳಿದ ವರ್ಗಗಳ ಪರಿವರ್ತನೆಯ ಹರಿಕಾರನಾಗಿ, ಉಳುವವನೇ ಭೂಮಿಯ ಒಡೆಯ, ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ಹಾಸ್ಟೆಲ್ ಸೌಲಭ್ಯ, ನೀರಾವರಿ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಹಲವಾರು ಸಾಧನೆಗಳನ್ನು ಮಾಡಿದ ದಿವಂಗತ ಡಿ. ದೇವರಾಜ ಅರಸು ಅವರ ಸಾಧನೆಗಳನ್ನು ಗ್ರಂಥಪಾಲಕರಾದ ರಮೇಶ ಗಬ್ಬೂರ್‌ರವರು ವಿವರವಾದ ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಪ್ರಾಚಾರ್ಯರಾದ ಬಸಪ್ಪ ನಾಗೋಲಿ ಅವರು ಮಾತಾಡುತ್ತಾ, ಕಾಲೇಜಿನ ಎನ್.ಎಸ್.ಎಸ್ ಮತ್ತು ರೋವರ್ ಘಟಕಗಳು ಇಂಥ ಒಂದು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವದರ ಮೂಲಕ ಯುವಕರಲ್ಲಿ ಉತ್ತಮ ಮೌಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಜಾಗೃತವಾಗಿವೆ, ಇದು ಒಂದು ಒಳ್ಳೆಯ ಕೆಲಸ. ಈ ದಿನದಂದು ಉತ್ತಮ ವಿಚಾರಗಳನ್ನು ಆಲಿಸುವ ಮೂಲಕ ವಿದ್ಯಾರ್ಥಿಗಳಾದ ನೀವು ಉತ್ತಮ ನಾಗರಿಕರಾಗಿ ಬೆಳೆಯುವಲ್ಲಿ ಇವು ಸಹಕಾರಿಯಾಗುತ್ತವೆ ಎಂದು ಹೇಳಿದರು.
ಕಾರ್ಯಕ್ರಮ ಅಧಿಕಾರಿಗಳಾದ ಸೋಮಶೇಖರಗೌಡ ರವರು ಸದ್ಭಾವನಾ ದಿನದ ಅಂಗವಾಗಿ ರಾಷ್ಟಿçÃಯ ಸದ್ಭಾವನ ಪ್ರಮಾಣ ವಚನವನ್ನು ಬೋಧಿಸಿದರು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಡು ಮತ್ತು ಸದ್ಭಾವನ ಗೀತೆಯನ್ನು ಹಾಡಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಇಂಗ್ಲೀಷ್ ಉಪನ್ಯಾಸಕರಾದ ಮಹೇಶ್‌ರವರು ಉಪಸ್ಥಿತರಿದ್ದರು. ಕೊನೆಯಲ್ಲಿ ಉಪನ್ಯಾಸಕರಾದ ನಾಗಪ್ಪ ರವರು ಎಲ್ಲರಿಗೂ ವಂದಿಸಿದರು.

About Mallikarjun

Check Also

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ. ಅಪಾರ ಪ್ರಮಾಣದಲ್ಲಿ ನಷ್ಟ.

ತಿಪಟೂರು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಕುಪ್ಪಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಟ್ಟಿಗೆಹಳ್ಳಿ ಗ್ರಾಮದ ದಲಿತ ಸಮುದಾಯದ ಕೆಂಪರಾಮಯ್ಯ ಸನ್ ಆಫ್ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.