Visit program to Tamam office continued: GPAM CEO available in Karatagy on Wednesday
ಕೊಪ್ಪಳ ಆಗಸ್ಟ್ 21 (ಕರ್ನಾಟಕ ವಾರ್ತೆ): ಜಿಲ್ಲಾ ಪಂಚಾಯತಗೆ ಸಂಬಂಧಿಸಿದಂತೆ ಕುಂದು ಕೊರತೆಗಳ ಕುರಿತು ಸಾರ್ವಜನಿಕರಿಂದ ಹಾಗೂ ಜನ ಪ್ರತಿನಿಧಿಗಳಿಂದ ಅಹವಾಲು ಆಲಿಸಲು ಪ್ರತಿ ಮಂಗಳವಾರ ಆಯಾ ತಾಲೂಕು ಪಂಚಾಯತ್ ಕಾರ್ಯಾಲಯಗಳಿಗೆ ಭೇಟಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆ ಅವರು ಬರುವ ಬುಧವಾರ ಆಗಸ್ಟ್ 23ರಂದು ಕಾರಟಗಿ ತಾಲೂಕಿಗೆ ಭೇಟಿ ನೀಡಲಿದ್ದಾರೆ. ಅಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ನವಲಿ ರಸ್ತೆಯಲ್ಲಿರುವ ಕಾರಟಗಿ ತಾಲೂಕಿನ ತಾಪಂ ಕಾರ್ಯಾಲಯದಲ್ಲಿ ಹಾಜರಿದ್ದು ಕಾರಟಗಿ ತಾಲೂಕು ವ್ಯಾಪ್ತಿಯ ಸಾರ್ವಜನಿಕರಿಂದ ಹಾಗೂ ಜನಪ್ರತಿನಿಧಿಗಳಿಂದ ಅಹವಾಲುಗಳ ಕುರಿತು ಚರ್ಚಿಸಲಿದ್ದಾರೆ. ಆದ್ದರಿಂದ ಕಾರಟಗಿ ತಾಲೂಕಿನ ವ್ಯಾಪ್ತಿಗೆ ಬರುವ ಸಾರ್ವಜನಿಕರು ಹಾಗೂ ಜನ ಪ್ರತಿನಿಧಿಗಳು ಜಿಪಂ ಸಿಇಓ ಅವರನ್ನು ಭೇಡಿ ಮಾಡಿ ತಮ್ಮ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೃಷ್ಣಮೂರ್ತಿ ಪಿ ಅವರು ತಿಳಿಸಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…