Breaking News

ದೇಶ ಸೇವೆ ನಮ್ಮೆಲ್ಲರ ಹೊಣೆ-ಮಲ್ಲಿಕಾರ್ಜುನ ಪಾಟೀಲ

Serving the country is our responsibility – Mallikarjuna Patil

ಜಾಹೀರಾತು

ಚಿಟಗುಪ್ಪ: ದೇಶದ ಸರ್ವತೋಮುಖ ಅಭಿವೃದ್ಧಿಗೆ ಕಾಣಿಕೆ ನೀಡುವುದು. ದೇಶ ರಕ್ಷಣೆ ಮಾಡುವುದೇ ನಿಜವಾದ ದೇಶ ಪ್ರೇಮ, ದೇಶ ಸೇವೆ ಎಂದು ಮಲ್ಲಿಕಾರ್ಜುನ ಪಾಟೀಲ ನುಡಿದರು.

ನಗರದ ಸರ್ಕಾರಿ ಪದವಿ ಮಾಹಾವಿಧ್ಯಾಲಯದಲ್ಲಿ ಕರ್ನಾಟಕ ಜಾನಪದ ಪರಿಷತ್ತು ಚಿಟಗುಪ್ಪ ತಾಲೂಕು ಘಟಕ ಹಾಗೂ ದಕ್ಷಿಣ ಮಧ್ಯ ವಲಯ ಸಾಂಸ್ಕೃತಿ ಕೇಂದ್ರ ನಾಗಪುರ ರವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಸ್ವತಂತ್ರ ಅಮೃತ್ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ ನನ್ನ ಮಣ್ಣು, ನನ್ನ ದೇಶ ಸಮಾರಂಭದಲ್ಲಿ ಮಾತನಾಡಿದ ಅವರು ತಾಯಿ ಭಾರತಾಂಬೆಯ ಋಣ ತೀರಿಸಲು ಸರ್ವರೂ ಕಂಕಣಬದ್ಧರಾಗಬೇಕು. ದೇಶದ ಮೇಲೆ ಪ್ರತಿಯೊಬ್ಬರಿಗೂ ಅಭಿಮಾನ, ಗೌರವ, ಪ್ರೀತಿ ಸದಾ ಕಾಲ ಇರಬೇಕು ಎಂದರು.

ಕರ್ನಾಟಕ ಜಾನಪದ ಪರಿಷತ್ತು ಅಧ್ಯಕ್ಷ, ಸಾಹಿತಿ ಸಂಗಮೇಶ ಎನ್ ಜವಾದಿ ಯವರು ಮಾತನಾಡಿ ದೇಶಕ್ಕೆ ಸ್ವಾತಂತ್ರ್ಯ ಪಡೆಯಲು ದೇಶಭಕ್ತರು ಅವಿರತವಾಗಿ ಶ್ರಮಿಸಿದ್ದಾರೆ. ಪ್ರಾಣದ ಹಂಗು ತೊರೆದು, ಮನೆಮಠವನ್ನು ಕಳೆದುಕೊಂಡು ಹೋರಾಟ ಮಾಡಿದ್ದಾರೆ. ಅವರ ತ್ಯಾಗ, ಬಲಿದಾನದಿಂದ ನಮಗೆ ಸ್ವಾತಂತ್ರ್ಯದಕ್ಕಿದೆ ಎನ್ನುವುದು ಖಂಡಿತವಾಗಿಯೂ ನಾವ್ಯಾರೂ ಮರೆಯಬಾರದು. ನಾವೆಲ್ಲರೂ ಸದಾ ಕಾಲ ಅವರ ಸ್ಮರಣೆ ಮಾಡಬೇಕು. ಕೇವಲ ಒಂದು ದಿನ ಸ್ಮರಣೆ ಮಾಡಿದರೆ ಸಾಲದು, ವರ್ಷವಿಡಿ ಅವರುಗಳ ನಿಸ್ವಾರ್ಥ ಸೇವಾ ಕೈಂಕರ್ಯಗಳು ನೆನೆಯುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು. ಈ ಸಂದರ್ಭದಲ್ಲಿ
ದೇಶಕ್ಕಾಗಿ ಪ್ರಾಣ ತೆತ್ತ ವೀರಯೋಧರು, ಸ್ವಾತಂತ್ರ್ಯಕ್ಕಾಗಿ ಹೋರಾಡಿ ಪ್ರಾಣ ತ್ಯಾಗ ಮಾಡಿದ ಸ್ವಾತಂತ್ರ್ಯ ಸೇನಾನಿ ಹೋರಾಟಗಾರರಿಗೆ ಗೌರವ ನಮನಗಳು ಸಲ್ಲಿಸುತ್ತೇವೆ ಎಂದು ಹೇಳಿದರು.

ವಿಜ್ಞಾನ ಪರಿಷತ್ತು ಸದಸ್ಯ, ಕಜಾಪ ಗೌರವಾಧ್ಯಕ್ಷ ಮಾಹಾರುದ್ರಪ್ಪ ಅಣದೂರ ಮಾತನಾಡಿ ಜಾನಪದ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಜಾನಪದ ಪರಿಷತ್ತು ಹಗಲಿರುಳೆನ್ನದೆ ನಿಸ್ವಾರ್ಥದಿಂದ
ದುಡಿಯುತ್ತಿದೆ.ಇದಕ್ಕೆ ಎಲ್ಲರ ಸಹಕಾರ ಅಗತ್ಯ ಇದೆ ಎಂದರು.
ಮಾಹಾವಿಧ್ಯಾಲಯ ಪ್ರಾಚಾರ್ಯರಾದ ಡಾ.ಸುರೇಂದ್ರ ಸಿಂಗ್ ರವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿಕೊಂಡು ಮಾತನಾಡಿದ ಅವರು ಚಿಟಗುಪ್ಪ ತಾಲೂಕು ಜಾನಪದ ಪರಿಷತ್ತು ಅದ್ಭುತವಾಗಿ ಕೆಲಸ ಮಾಡುತ್ತಿದೆ. ಈ ದಿಕ್ಕಿನಲ್ಲಿ ಅನೇಕ ಜಾನಪದ ಕಾರ್ಯಕ್ರಮಗಳನ್ನು ಹಾಕಿಕೊಂಡು ಜಾನಪದದ ಅರಿವು ಮೂಡಿಸುತ್ತಿದೆ. ತಾಲೂಕಿನ ತುಂಬೆಲ್ಲ ಜಾನಪದ ಕಲೆ, ಸಾಹಿತ್ಯ, ಸಂಸ್ಕೃತಿ ಉಳಿಸಿ,ಬೆಳೆಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದು ಶ್ಲಾಘನೀಯ ಸೇವಾ ಕೆಲಸ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಉಪನ್ಯಾಸಕರಾದ ಡಾ.ವೀರಶೆಟ್ಟಿ ಮೈಲೂರಕರ್ ಕಾರ್ಯಕ್ರಮ ನಿರೂಪಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿದ್ಯಾರ್ಥಿಗಳು ಜಾನಪದ ಗೀತೆಗಳು ಹಾಡಿದರು.
ಸೋನಮ್ಮ ಜಾನಪದ ಕಲಾ ತಂಡದವರು ಜಾನಪದ ಗಾಯನ ನಡೆಸಿಕೊಟ್ಟರು.

ಸಮಾರಂಭದಲ್ಲಿ ಕ್ರೀಡಾ ನಿರ್ದೇಶಕ
ಡಾ.ಸತೀಶ ಡೊಂಗರೆ, ಉಪನ್ಯಾಸಕ ಮಲ್ಲಿಕಾರ್ಜುನ ತಿರ್ಲಾಪುರ, ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ವರ್ಗದವರು, ಪರಿಷತ್ತಿನ ಪದಾಧಿಕಾರಿಗಳು, ಸಂಗೀತ ಕಲಾವಿದರು, ಗಣ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

About Mallikarjun

Check Also

ಜೆಜೆಎಂ ಕಾಮಗಾರಿ ಅವೈಜ್ಞಾನಿಕ :ಮಳೆ ನೀರು ಗ್ರಾಮದೊಳಕ್ಕೆ ಸಾರ್ವಜನಿಕರಆಕ್ರೋಶ

JJM’s work is unscientific: Public outrage over rain water in the village ವರದಿ : ಪಂಚಯ್ಯ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.