Breaking News

ವಾಹನದಲ್ಲಿ ಸ್ತಬ್ದ‌ಚಿತ್ರ ಪ್ರದರ್ಶನ, ಜಾಗೃತಿ ಗೀತೆಗಳು ಜಾಗೃತಿ ಸಂದೇಶದ ಡೆಂಗೆ ರಥ ಯಾತ್ರೆಗೆ ಡಿಎಚ್ಓ ಡಾ.ಲಿಂಗರಾಜು ಟಿ ಚಾಲನೆ

DHO Dr. Lingaraju T drives for Dengue Rath Yatra with awareness song, still film show in vehicle.

ಜಾಹೀರಾತು

ಕೊಪ್ಪಳ ಜಿಲ್ಲಾದ್ಯಂತ ಎರಡು ತಿಂಗಳ ಸಂಚಾರ

ಜಾಗೃತಿ ಸಂದೇಶದ ಡೆಂಗೆ ರಥ ಯಾತ್ರೆಗೆ ಡಿಎಚ್ಓ ಡಾ.ಲಿಂಗರಾಜು ಟಿ ಚಾಲನೆ

ಕೊಪ್ಪಳ ಆಗಸ್ಟ್ 24 (ಕರ್ನಾಟಕ ವಾರ್ತೆ): ಸೊಳ್ಳೆಗಳಿಂದ ಹರಡುವ ಡೆಂಗೆ ಜ್ವರದ ಲಕ್ಷಣಗಳು, ಜ್ವರ ಹರಡುವಿಕೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಕೊಪ್ಪಳ ಜಿಲ್ಲೆಯಾದ್ಯಂತ ಜನಸಮುದಾಯದಲ್ಲಿ ಜಾಗೃತಿ ಮೂಡಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡ ಡೆಂಗೆ ರಥ ಜನ ಜಾಗೃತಿ ಯಾತ್ರೆಯ ಚಾಲನೆ ಕಾರ್ಯಕ್ರಮ ಆಗಸ್ಟ್ 23ರಂದು ನಗರದ ಹಳೆ ಜಿಲ್ಲಾಸ್ಪತ್ರೆ ಆವರಣದಲ್ಲಿ ನಡೆಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಲಿಂಗರಾಜು ಟಿ ಅವರು ಡೆಂಗೆ ರಥ ಜನ ಜಾಗೃತಿ ಯಾತ್ರೆಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ರಾಜ್ಯ ಸರ್ಕಾರದ ನಿರ್ದೇಶನದ ಮೇರೆಗೆ ಈ ವರ್ಷ ಡೆಂಗೆ ರಥ ಕಾರ್ಯಕ್ರಮ ಆಯೋಜಿಸಲಾಗಿದ್ದು, ಡೆಂಗೆ ಪ್ರಸಾರದ ಅವಧಿಯ ಎರಡು ತಿಂಗಳು ಡೆಂಗಿ ರಥ ಜಿಲ್ಲೆಯಾಧ್ಯಂತ ಸಂಚರಿಸಲಿದೆ. ಸೊಳ್ಳೆಗಳಿಂದ ಹರಡುವ ರೋಗಗಳ ಬಗ್ಗೆ ಅದರಲ್ಲೂ ಮುಖ್ಯವಾಗಿ ಡೆಂಗೆ ಜ್ವರದ ಲಕ್ಷಣಗಳು, ಹರಡುವಿಕೆ ಹಾಗೂ ಮನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತದೆ ಎಂದರು.
ಜಿಲ್ಲೆಯಲ್ಲಿ ಡೆಂಗೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಡೆಂಗೆ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಿಂದ ಎಲ್ಲಾ ಸೂಕ್ತ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದೆ. ಡೆಂಗೆ ಜ್ವರಕ್ಕೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಇಲ್ಲದಿದ್ದರೂ ಜನರೂ ಭಯಪಡುವ ಅವಶ್ಯಕತೆ ಇಲ್ಲ. ಲಕ್ಷಣಗಳನ್ನಾಧರಿಸಿ ಚಿಕಿತ್ಸೆ ನೀಡಲಾಗುವುದು. ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ಮತ್ತು ಉಚಿತ ಪ್ರಯೋಗಾಲಯ ಪರೀಕ್ಷೆ ಮಾಡಲಾಗುತ್ತಿದ್ದು ಜನರು ಅನಗತ್ಯ ಭಯಕ್ಕೆ ಒಳಗಾಗದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬೇಕು. ಡೆಂಗೆ ನಿಯಂತ್ರಣದಲ್ಲಿ ಕ್ಷೇತ್ರ ಸಿಬ್ಬಂದಿ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ನಿರೀಕ್ಷಣಾಧಿಕಾರಿಗಳು ಮತ್ತು ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿಗಳ ಪಾತ್ರ ಬಹುಮುಖ್ಯವಾಗಿದ್ದು, ಕ್ಷೇತ್ರ ಭೇಟಿ ಸಂದರ್ಭದಲ್ಲಿ ಗುಣಮಟ್ಟದ ಲಾರ್ವಾ ಸಮೀಕ್ಷೆ ಹಾಗೂ ಸೊಳ್ಳೆ ಉತ್ಪತ್ತಿತಾಣಗಳ ನಿರ್ಮೂಲನೆಗೆ ಕ್ರಮ ಕೈಗೊಳ್ಳಬೇಕು. ಜೊತೆಗೆ ಜನರಿಗೆ ಅರಿವು ಮೂಡಿಸಬೇಕು ಎಂದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ವೆಂಕಟೇಶ್ ಕೆ ಅವರು ಮಾತನಾಡಿ, ಡೆಂಗೆ ಜ್ವರವು ಈಡಿಸ್ ಜಾತಿಯ ಸೊಳ್ಳೆಗಳ ಕಚ್ಚುವಿಕೆಯಿಂದ ಹರಡುತ್ತದೆ ಹಾಗೂ ಇದು ಹಗಲು ಹೊತ್ತಿನಲ್ಲಿಯೇ ಕಚ್ಚುತ್ತವೆ. ಈಡಿಸ್ ಸೊಳ್ಳೆಗಳು ನೀರು ಶೇಖರಣೆ ಸಲಕರಣೆಗಳಲ್ಲಿ, ಶುದ್ಧ ನೀರಿನಲ್ಲಿಯೇ ಸಂತಾನಾಭಿವೃದ್ಧಿ ಮಾಡುತ್ತವೆ. ಆದ್ದರಿಂದ ನೀರು ಶೇಖರಣೆ ಸಲಕರಣೆಗಳನ್ನು ಸದಾಕಾಲ ಮುಚ್ಚಿಡಬೇಕು ಹಾಗೂ ಮನೆಯ ಒಳಗೆ ಮತ್ತು ಹೊರಗೆ ನೀರು ನಿಲ್ಲದಂತೆ ಎಚ್ಚರವಹಿಸಿ ಸೊಳ್ಳೆ ಉತ್ಪತ್ತಿ ತಡೆಗಟ್ಟಲು, ಮನೆಗಳ ಸುತ್ತಲು ಸ್ವಚ್ಛತೆ ಕಾಪಾಡಬೇಕು. ಈಡೀಸ್ ಲಾರ್ವಾ ಸಮೀಕ್ಷೆಗಾಗಿ ಮನೆ ಮನೆಗೆ ಭೇಟಿ ನೀಡುವ ಆರೋಗ್ಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತರಿಗೆ ಎಲ್ಲಾ ಸಾರ್ವಜನಿಕರು ಸಹಕಾರ ನೀಡಬೇಕು ಎಂದರು.
ಜಿಲ್ಲಾ ವಿ.ಬಿ.ಡಿ ಸಲಹೆಗಾರರಾದ ರಮೇಶ್ ಕೆ ಅವರು ಮಾತನಾಡಿ, ಮಳೆಗಾಲ ಮತ್ತು ನಂತರದ ಸಂದರ್ಭದಲ್ಲಿ ಅತಿ ಹೆಚ್ಚಿನ ಸೊಳ್ಳೆ ಉತ್ಪತ್ತಿ ತಾಣಗಳು ಉಂಟಾಗಿ ಮತ್ತು ಕೆಲವು ಸಲಕರಣೆಗಳಲ್ಲಿ ನೀರು ಶೇಖರಣೆಯಾಗಿ ಸೊಳ್ಳೆ ಉತ್ಪತ್ತಿಯಾಗಿ ಸೊಳ್ಳೆಗಳ ಸಾಂದ್ರತೆ ಹೆಚ್ಚಾಗುತ್ತದೆ. ಅದರಲ್ಲೂ ಡೆಂಗೆ ಹರಡುವ ಈಡಿಸ್ ಸೊಳ್ಳೆಗಳು ಮನೆಯ ಒಳಗಡೆ ಕಚ್ಚುವುದರಿಂದ ಡೆಂಗೆ ಹರಡುವ ಸಾಧ್ಯತೇ ಇರುತ್ತದೆ. ಕಾರಣ ಯಾವುದೇ ಜ್ವರವಿರಲಿ ಶೀಘ್ರವೇ ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ರಕ್ತ ಪರೀಕ್ಷೆ ಮಾಡಿಸಿ ಉಚಿತ ಚಿಕಿತ್ಸೆ ಪಡೆಯಲು ಹಾಗೂ ಮಲಗುವಾಗ ಸೊಳ್ಳೆಪರದೆ ಬಳಸಲು ಹಾಗೂ ವಾರಕ್ಕೊಮ್ಮೆ ನೀರು ಶೇಖರಣ ಸಲಕರಣೆಗಳನ್ನು ಖಾಲಿ ಮಾಡಿ ಸ್ವಚ್ಚಗೊಳಿಸಿ ನೀರು ತುಂಬಿ ಮುಚ್ಚಿಡಲು ಹಾಗೂ ಸೊಳ್ಳೆ ಕಡಿತದಿಂದ ದೂರವಿರಲು ಸಾಧ್ಯವಾದ ಎಲ್ಲಾ ಸ್ವಯಂ ರಕ್ಷಣ ವಿಧಾನಗಳನ್ನು ಸಾರ್ವಜನಿಕರು ಅನುಸರಿಸಬೇಕು. ಡೆಂಗೆ ಜ್ವರ ನಿಯಂತ್ರಣಕ್ಕೆ ಜನಸಮುದಾಯದ ಸಹಕಾರ, ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆ ಹಾಗೂ ಜನಜಾಗೃತಿಯೊಂದೇ ಪರಿಹಾರ ಮಾರ್ಗ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ರವೀಂದ್ರ, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಡಾ.ಪ್ರಕಾಶ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳಾದ ಡಾ ನಂದಕುಮಾರ್, ತಾಲೂಕು ಆರೋಗ್ಯಾಧಿಕಾರಿಗಳಾದ ಡಾ ರಾಮಾಂಜನೇಯ ಹಾಗೂ ಡಾ. ರಚನಾ, ತಾಲೂಕ ಆರೋಗ್ಯ ಶಿಕ್ಷಣಾಧಿಕಾರಿ ಗಂಗಮ್ಮ ಸೇರಿದಂತೆ ಕೊಪ್ಪಳ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಚೇರಿಯ, ತಾಲೂಕ ಆರೋಗ್ಯಾಧಿಕಾರಿಗಳ ಕಚೇರಿಯ ಮತ್ತು ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿ ಉಪಸ್ಥಿತರಿದ್ದರು.
ಎರಡು ತಿಂಗಳು ಸಂಚಾರ: ಮೊದಲ ದಿನ ಕೊಪ್ಪಳ ನಗರದಾದ್ಯಂತ ಸಂಚರಿಸಿದ ಡೆಂಗಿ ರಥ ವಾಹನದಲ್ಲಿ ಡೆಂಗೆ ಸ್ತಬ್ಧ ಚಿತ್ರಗಳನ್ನು ಹಾಗೂ ಡೆಂಗೆ ಜಾಗೃತಿ ಸಂದೇಶ ಮತ್ತು ಗೀತೆಗಳನ್ನು ಬಿತ್ತರಿಸಲಾಯಿತು. ಡೆಂಗೆ ಜಾಗೃತಿ ಕರಪತ್ರಗಳನ್ನು ಹಂಚುವುದರ ಮೂಲಕ ಹಾಗೂ ಬಿತ್ತಿಪತ್ರಗಳನ್ನು ಪ್ರದರ್ಶಿಸುವುದ ಮೂಲಕ ನಗರದಲ್ಲಿ ಜಾಗೃತಿ ಕಾರ್ಯವನ್ನು ಯಶಸ್ವಿಯಾಗಿ ಕೈಗೊಳ್ಳಲಾಯಿತು. ಈ ಡೆಂಗಿ ರಥ ವಾಹನವು ಎರಡು ತಿಂಗಳ ಕಾಲ ಜಿಲ್ಲೆಯಾದ್ಯಂತ ಸಂಚರಿಸಿ ಜನರಲ್ಲಿ ಜಾಗೃತಿ ಮೂಡಿಸಲಿದೆ.

About Mallikarjun

Check Also

ಕುಷ್ಟಗಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ: ನೋಂದಣಿಗೆ ಸೂಚನೆ

Kushtagi Taluk Level Dasara Games: Notice for registration ಕೊಪ್ಪಳ ಆಗಸ್ಟ್ 29 (ಕರ್ನಾಟಕ ವಾರ್ತೆ): 2025-26ನೇ ಸಾಲಿನ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.