Breaking News

ಜಿಲ್ಲಾ ಮಟ್ಟದ ಯುವ ಉತ್ಸವ, ವಿವಿಧ ಸ್ಪರ್ಧೆ: ಭಾಗವಹಿಸಲು ಹೆಸರು ನೋಂದಾಯಿಸಿ

District Level Youth Festival, Various Competition: Register to participate

ಕೊಪ್ಪಳ ಆಗಸ್ಟ್ 24 (ಕರ್ನಾಟಕ ವಾರ್ತೆ): ಭಾರತ ಸರ್ಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ ಆದೇಶದ ಮೇರೆಗೆ, ಕೊಪ್ಪಳ ನೆಹರು ಯುವ ಕೇಂದ್ರದಿಂದ ಜಿಲ್ಲಾ ಮಟ್ಟದ ಯುವ ಉತ್ಸವ ಕಾರ್ಯಕ್ರಮ ಹಾಗೂ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಭಾಗವಹಿಸಲಿಚ್ಛಿಸುವ ಯುವಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.
ಜಿಲ್ಲಾ ಮಟ್ಟದ ಯುವ ಉತ್ಸವ ಕಾರ್ಯಕ್ರಮ: ಜಿಲ್ಲಾ ಮಟ್ಟದ ಯುವ ಉತ್ಸವ ಕಾರ್ಯಕ್ರಮವನ್ನು ಸೆಪ್ಟೆಂಬರ್ 01ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸದರಾದ ಸಂಗಣ್ಣ ಕರಡಿ ಅವರು ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಶಾಸಕರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಕಾಧಿಕಾರಿಗಳು, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಹಾಗೂ ಮತ್ತಿತರ ಗಣ್ಯರು ಪಾಲ್ಗೊಳ್ಳುವರು.
ಜಿಲ್ಲಾ ಮಟ್ಟದ ಯುವ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಯುವಜನರಿಗೆ ಅವಕಾಶವಿದ್ದು, ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ಮತ್ತು ಪ್ರಮಾಣ ಪತ್ರ ನೀಡಲಾಗುವುದು.
ಸ್ಪರ್ಧೆಗಳ ವಿವರ: ಗುಲಾಮ ಗಿರಿ ಚಿಂತನೆಯಿಂದ ಮುಕ್ತಿ' ಎಂಬ ವಿಷಯದ ಯುವ ಬರಹಗಾರರ ಸ್ಪರ್ಧೆ,ಅಭಿವೃದ್ಧಿ ಹೊಂದಿದ ಭಾರತದ ಮಾನದಂಡಗಳು’ ಎಂಬ ವಿಷಯದ ಯುವ ಕಲಾಕಾರರ ಸ್ಪರ್ಧೆ ಮತ್ತು ಭಾರತದ ಹೆಮ್ಮೆಯ ಪರಂಪರೆ' ಎಂಬ ವಿಷಯದ ಫೋಟೊಗ್ರಾಫಿ, ಈ ಮೂರು ಸ್ಪರ್ಧೆಗಳಿಗೆ ತಾಲಾ 30 ಜನರು ಭಾಗವಹಿಸಬಹುದಾಗಿದ್ದು, ವಿಜೇತರಿಗೆ ಪ್ರಥಮ ರೂ.1000, ದ್ವಿತೀಯ ರೂ.750 ಹಾಗೂ ತೃತೀಯ ರೂ.500 ಬಹುಮಾನವಿರುತ್ತದೆ.ಏಕತೆಯ ಬಲ’ ಎಂಬ ವಿಷಯದ ಭಾಷಣ ಸ್ಪರ್ಧೆಗೆ 10 ಜನರು ಭಾಗವಹಿಸಬಹುದಾಗಿದ್ದು, ವಿಜೇತರಿಗೆ ಪ್ರಥಮ ರೂ.5000, ದ್ವಿತೀಯ ರೂ.2000 ಹಾಗೂ ತೃತೀಯ ರೂ.1000 ಬಹುಮಾನವಿರುತ್ತದೆ. `ರಾಷ್ಟ್ರೀಯತೆ ಹಾಗೂ ದೇಶಭಕ್ತಿಯನ್ನು ಬಿಂಬಿಸುವ ನೃತ್ಯಗಳು’ ಎಂಬ ವಿಷಯದ ಜಿಲ್ಲಾ ಸಾಂಸ್ಕೃತಿಕ ಹಬ್ಬ (4 ರಿಂದ 12 ಜನರನ್ನೊಳಗೊಂಡ ಗುಂಪು) ಸ್ಪರ್ಧೆಗೆ 100 ಗುರಿ ನಿಗದಿಪಡಿಸಲಾಗಿದ್ದು, ವಿಜೇತರಿಗೆ ಪ್ರಥಮ ರೂ.5000, ದ್ವಿತೀಯ ರೂ.2500 ಹಾಗೂ ತೃತೀಯ ರೂ.1250 ಬಹುಮಾನವಿರುತ್ತದೆ.
ಸ್ಪರ್ಧೆಗಳಲ್ಲಿ ಭಾಗವಹಿಸುವವರ ವಯಸ್ಸು 01-04-2023ಕ್ಕೆ 15ರಿಂದ 29 ವರ್ಷದೊಳಗಿರಬೇಕು. ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟ, ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಕನ್ನಡ, ಹಿಂದಿ, ಇಂಗ್ಲೀಷ್ ಭಾಷೆಗಳಲ್ಲಿ ಮಾತನಾಡಬಹುವುದು. ರಾಷ್ಟ್ರ ಮಟ್ಟಕ್ಕೆ ಹಿಂದಿ ಮತ್ತು ಇಂಗ್ಲೀಷನಲ್ಲಿ ಅವಕಾಶವಿದ್ದು, ತೀರ್ಪುಗಾರರ ತೀರ್ಮಾನವೆ ಅಂತಿಮವಾಗಿರುತ್ತದೆ. ಹೆಸರು ನೋಂದಣಿ ಮಾಡಿಕೊಳ್ಳಲು ಆಗಸ್ಟ್ 31 ಕೊನೆಯ ದಿನವಾಗಿದ್ದು, ಆಸಕ್ತರು ತಮ್ಮ ಆಧಾರ ಕಾರ್ಡ, ಎರಡು ಫೋಟೊ, ಜನ್ಮ ದಿನಾಂಕದ ದಾಖಲಾತಿ ವಿವರದೊಂದಿಗೆ ಗೂಗಲ್ ಶೀಟ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಗೂಗಲ್ ಲಿಂಕ್‌ಗಾಗಿ ಮೊ.ಸಂ: 8277075830ಗೆ ಸಂಪರ್ಕಿಸಬಹುದು. ಜಿಲ್ಲೆಯ ಯುವ ಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕೊಪ್ಪಳ ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಮಾಂಟು ಪಾತರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

ಖೊಟ್ಟಿ ದಾಖಲೆ ಸೃಷ್ಟಿಸಿ, ಬಿಪಿಎಲ್ ಪಡಿತರ ಚೀಟಿ ಪಡೆದಿದ್ದ ಬಿಜೆಪಿ ಮುಖಂಡನ ವಿರುದ್ಧ ದೂರು ದಾಖಲು, ದಂಡವಸೂಲಿ.

ಕಾರಟಗಿ: ತಾಲೂಕಿನ ಸಿದ್ಧಾಪುರ ಗ್ರಾಮದ ಬಿಜೆಪಿ ಮುಖಂಡ ಆಗಿರುವ ಮಹಿಬೂಬ್ ಸಾಬ್ ಮುಲ್ಲಾ (ಎಂ.ಡಿ.ಎಸ್) ತಂದೆ ಮೋದಿನ್ ಸಾಬ್ ಈತನು …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.