GPM CEO Shri Rahul Ratnam Pandey visited Vaddarahatti village and observed the preparatory work
ಗಂಗಾವತಿ : ರಾಜ್ಯ ಸರಕಾರದ ಗೃಹಲಕ್ಷ್ಮಿ ಯೋಜನೆ ಕುರಿತು ಫಲಾನುಭವಿಗಳು ಅಭಿಪ್ರಾಯ ಹಂಚಿಕೊಳ್ಳಲು ಆಯ್ಕೆಯಾದ ವಡ್ಡರಹಟ್ಟಿ ಗ್ರಾಮಕ್ಕೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಾಹುಲ್ ರತ್ನಂ ಪಾಂಡೆಯ ಅವರು ಮಂಗಳವಾರ ಭೇಟಿ ನೀಡಿ ಸಿದ್ಧತಾ ಕಾರ್ಯ ವೀಕ್ಷಣೆ ಮಾಡಿದರು. ನಂತರ ಅವರು ಮಾತನಾಡಿ, ಜಿಲ್ಲೆಯಲ್ಲಿ ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳು ತಮ್ಮ ಅಭಿಪ್ರಾಯ ಹಂಚಿಕೊಳ್ಳಲು ವಡ್ಡರಹಟ್ಟಿ ಗ್ರಾಮ ಪಂಚಾಯತ್ ಆಯ್ಕೆಯಾಗಿದೆ. ಫಲಾನುಭವಿಗಳು ಮಾನ್ಯ ಮುಖ್ಯಮಂತ್ರಿಗಳ ಜೊತೆ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ. ಗೃಹಲಕ್ಷ್ಮಿ ಯೋಜನೆ ಚಾಲನೆ ಕಾರ್ಯಕ್ರಮ ವೀಕ್ಷಣೆಗೆ ಗ್ರಾಪಂ ಮಟ್ಟದಲ್ಲಿ ಟಿ.ವಿ./ಎಲ್ ಇಡಿ ಪರದೆ ವ್ಯವಸ್ಥೆ ಮಾಡಲಾಗಿದೆ. ಹೆಚ್ಚಿನ ಫಲಾನುಭವಿಗಳು ಕಾರ್ಯಕ್ರಮಕ್ಕೆ ಆಗಮಿಸಿ ನೇರಪ್ರಸಾರ ವೀಕ್ಷಣೆ ಮಾಡಬೇಕು ಎಂದರು. ಈ ವೇಳೆ, ತಹಸೀಲ್ದಾರರಾದ ಶ್ರೀ ಮಂಜುನಾಥ, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಮತಿ ಲಕ್ಷ್ಮೀದೇವಿ, ತಾಪಂ ಸಹಾಯಕ ನಿರ್ದೇಶಕರಾದ ಶ್ರೀ ಮಹಾಂತಗೌಡ ಪಾಟೀಲ್, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳಾದ ಕಾಶೀನಾಥ ಹಂಚಿನಾಳ, ಕಾರ್ಯದರ್ಶಿಗಳಾದ ಈಶಪ್ಪ, ಡಿ.ಪಿ.ಎಂ. ರಾಜೇಶ, ತಾಪಂ ಸಿಬ್ಬಂದಿಗಳಾದ ನಾಗರಾಜ ಗಂಗನಾಳ, ಐಇಸಿ ಸಂಯೋಜಕರಾದ ಬಾಳಪ್ಪ ತಾಳಕೇರಿ, ಗ್ರಾಪಂ ಸರ್ವ ಸದಸ್ಯರು, ಸಿಬ್ಬಂದಿಗಳು ಇದ್ದರು.