ಗೃಹಲಕ್ಷ್ಮೀ ಯೋಜನೆಗೆ ಚಾಲನೆ
A government that is committed to empowering women: b. Rudresha
ಕಾರಟಗಿ: ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆಗೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರ ನೇತೃತ್ವದಲ್ಲಿ ಚಾಲನೆ ನೀಡಿದ್ದು, ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರ ನುಡಿದಂತೆ ನಡೆದಿದೆ ಎಂದು ಗ್ರಾಮ ಪಂಚಾಯಿತಿ ಒಕ್ಕೂಟದ ಗೌರವ ಅಧ್ಯಕ್ಷರು ಬಿ ರುದ್ರೇಶ್ ಸಿಂಗನಾಳ ಅವರು ಹೇಳಿದರು.
ಗುಂಡೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಗೃಹಲಕ್ಷ್ಮೀ ಅನುಷ್ಠಾನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯ ಸರಕಾರದ ಗೃಹಲಕ್ಷ್ಮೀ ಯೋಜನೆಯಡಿ ಫಲಾನುಭವಿ ಗಳಿಗೆ ಪ್ರತಿ ತಿಂಗಳು ಎರಡು ಸಾವಿರ ಹಣ ಬರುತ್ತದೆ. ಸರಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ಮಹಿಳೆಯರು ಮಕ್ಕಳಿಗೆ ಉತ್ತಮ ಶಿಕ್ಷಣ, ಸಂಸ್ಕಾರ ನೀಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಳ್ಳೆಯ ಯೋಜನೆ ಜಾರಿ ತಂದಿದ್ದಾರೆ ಎಂದರು.
ಗೃಹಲಕ್ಷ್ಮೀ ಯೋಜನೆ ನೇರಪ್ರಸಾರ ಕಾರ್ಯಕ್ರಮವನ್ನು ಗ್ರಾ.ಪಂ ಸದಸ್ಯರು, ಅಧಿಕಾರಿಗಳು, ಸಿಬ್ಬಂಧಿಗಳು, ಫಲಾನುಭವಿಗಳು ವೀಕ್ಷಣೆ ಮಾಡಿದರು.
ಗ್ರಾ.ಪಂ ಅಧ್ಯಕ್ಷೆ ಮಂಗಳಮ್ಮ ಯಲ್ಲಪ್ಪ, ಉಪಾಧ್ಯಕ್ಷೆ ಸತ್ಯವತಿ ಶ್ರೀನಿವಾಸ್, ಗ್ರಾ.ಪಂ. ಸರ್ವಸದಸ್ಯರು ಆಶಾ ಕಾರ್ಯಕರ್ತರು ಅಂಗನವಾಡಿ ಕಾರ್ಯಕರ್ತರು ಗೃಹಲಕ್ಷ್ಮಿಯ ಮಹಿಳಾ ಫಲಾನುಭವಿಗಳು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಎನ್ ನಾಗಪ್ಪ ಸಿಂಗನಾಳ್, ಗ್ರಾಮ ಪಂಚಾಯತಿ ಪಿಡಿಒ ಕನಕಪ್ಪ ಸೇರಿದಂತೆ ಇತರರಿದ್ದರು.