Breaking News

ಸರಕಾರಿ ಯೋಜನೆಗಳ ಸದುಪಯೋಗ ಪಡೆಯಿರಿಮಹಿಳೆಯರಿಗೆ ಶಾಸಕ ಜನಾರ್ಧನ ರೆಡ್ಡಿಸಲಹೆ

MLA Janardhana Reddy’s advice to women

ಜಾಹೀರಾತು

ಗಂಗಾವತಿ : ಎಲ್ಲ ಕುಟುಂಬಗಳ ಯಜಮಾನಿ ಮಹಿಳೆಯರು ಗೃಹಲಕ್ಷ್ಮೀ ಯೋಜನೆಯಿಂದ ಬರುವ ಹಣವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶಾಸಕ ಜನಾರ್ಧನ ರೆಡ್ಡಿ ಅವರು ಹೇಳಿದರು.

ತಾಲೂಕಿನ ವಡ್ಡರಹಟ್ಟಿ ಕ್ಯಾಂಪ್ ನ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಭಾಂಗಣದಲ್ಲಿ ಜಿಲ್ಲಾಡಳಿತ, ತಾಲೂಕಾಡಳಿತ, ಶಿಶು ಅಭಿವೃದ್ಧಿ ಇಲಾಖೆ, ತಾ.ಪಂ., ಗ್ರಾ.ಪಂ.ನಿಂದ ಬುಧವಾರ ಆಯೋಜಿಸಿದ್ದ ಗೃಹಲಕ್ಷ್ಮೀ ಯೋಜನೆ ಚಾಲನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರಾಜ್ಯ ಸರಕಾರದ ಗೃಹಲಕ್ಷ್ಮೀ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ತಿಂಗಳು ಎರಡು ಸಾವಿರ ಹಣ ಬರುತ್ತದೆ. ಸರಕಾರದ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ಮಹಿಳೆಯರು ಮಕ್ಕಳಿಗೆ ಉತ್ತಮ ಶಿಕ್ಷಣ, ಸಂಸ್ಕಾರ ನೀಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಳ್ಳೆಯ ಯೋಜನೆ ಜಾರಿ ತಂದಿದ್ದಾರೆ ಎಂದು ಶ್ಲಾಘಿಸಿದರು.

ಗ್ರಾಪಂ ಅಧ್ಯಕ್ಷರಾದ ಮಂಜುಳಾ ಹತ್ತಿಮರದ ಅವರು ಮಾತನಾಡಿ, ಮಹಿಳೆಯರು ಆರ್ಥಿಕವಾಗಿ ಬಲವರ್ಧನೆ ಆಗಲು ಗೃಹಲಕ್ಷ್ಮೀ ಯೋಜನೆ ಬುನಾದಿ ಆಗಲಿದೆ. ಎಲ್ಲ ಮಹಿಳೆಯರು ಯೋಜನೆಯ ಲಾಭ ಪಡೆದುಕೊಳ್ಳಬೇಕು ಎಂದರು.

ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಭಾಂಗಣದಲ್ಲಿಆಯೋಜಿಸಿದ್ದ ಗೃಹಲಕ್ಷ್ಮೀ ಯೋಜನೆ ನೇರಪ್ರಸಾರ ಕಾರ್ಯಕ್ರಮವನ್ನು ಶಾಸಕರು, ಅಧಿಕಾರಿಗಳು, ಫಲಾನುಭವಿಗಳು ವೀಕ್ಷಣೆ ಮಾಡಿದರು.

ಗ್ರಾಪಂ ಅಧ್ಯಕ್ಷರಾದ ಮಂಜುಳಾ ಹತ್ತಿಮರದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಉಪಾಧ್ಯಕ್ಷರಾದ ಗೌಸ್ ಸಾಬ್, ಜಿಪಂ ಉಪ ಕಾರ್ಯದರ್ಶಿಗಳಾದ ತಾಳಕೇರಿ, ತೊದಲಬಾಗಿ, ತಹಸೀಲ್ದಾರರಾದ ಮಂಜುನಾಥ ಭೋಗಾವತಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ, ನೋಡಲ್ ಅಧಿಕಾರಿಗಳು ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳಾದ ಸುರೇಶ ಕೊರೆ, ಶಿಶು ಅಭಿವೃದ್ಧಿ ಅಧಿಕಾರಿಗಳಾದ ರೋಹಿಣಿ ಕೊಟಗಾರ್, ತಾಪಂ ಸಹಾಯಕ ನಿರ್ದೇಶಕರಾದ ಮಹಾಂತಗೌಡ ಪಾಟೀಲ್, ಗ್ರಾಪಂ ಪಿಡಿಓ ಕಾಶೀನಾಥ್ ಹಂಚಿನಾಳ ಹಾಗೂ ಸರ್ವ ಸದಸ್ಯರು, ಗ್ರಾಪಂ ಸಿಬ್ಬಂದಿಗಳು ಇದ್ದರು. ಸಹಿಪ್ರಾ ಶಾಲೆ ಶಿಕ್ಷಕಿ ಉಮಾದೇವಿ ಕೆ. ಅವರು ನಿರೂಪಣೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಎನ್ ಆರ್ ಎಲ್ ಎಂ ಸಿಬ್ಬಂದಿಗಳು ಇದ್ದರು‌.

About Mallikarjun

Check Also

ಕುಷ್ಟಗಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ: ನೋಂದಣಿಗೆ ಸೂಚನೆ

Kushtagi Taluk Level Dasara Games: Notice for registration ಕೊಪ್ಪಳ ಆಗಸ್ಟ್ 29 (ಕರ್ನಾಟಕ ವಾರ್ತೆ): 2025-26ನೇ ಸಾಲಿನ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.