Public should take advantage of government facilities – Prashant Banapur

ಗಂಗಾವತಿ: ಕಾಂಗ್ರೆಸ್ ಪಕ್ಷದ ಮಹತ್ವಕಾಂಕ್ಷಿ ಗೃಹಲಕ್ಷ್ಮಿ ಯೋಜನೆಗೆ ಇಂದು ಕೇಸರಹಟ್ಟಿ ಗ್ರಾಮ ಪಂಚಾಯಿತಿಯಲ್ಲಿ ಚಾಲನೆ ನೀಡಲಾಯಿತು, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷ ನೇತ್ರಾವತಿ, ಮಾಜಿ ಅಧ್ಯಕ್ಷರಾದ ಬಸವರಾಜ ಹಳ್ಳಿ, ಸದಸ್ಯರಾದ ನಿರುಪಾದಿಗೌಡ, ಬಸವರಾಜ್ ಜೇಕಿನ್, ಯಮನೂರಪ್ಪ, ಗಂಗಮ್ಮ,C.D.P. O. ಲಕ್ಷ್ಮಿ ದೇವಿ, ಕಾರ್ಯದರ್ಶಿ ಪ್ರಶಾಂತ್ ಬಾನಾಪುರ್, ಸಿಬ್ಬಂದಿಗಳಾದ ಬಸಮ್ಮ,ಶರಣಪ್ಪ, ಈರಣ್ಣ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯ ಮತ್ತು ಫಲಾನುಭವಿ ಮಹಿಳೆಯರು ಉಪಸ್ಥಿತರಿದ್ದರು. ಕಾರ್ಯಕ್ರಮ ಉದ್ದೇಶಿಸಿ ಮಾಜಿ ಅಧ್ಯಕ್ಷರಾದ ಬಸವರಾಜ ಹಳ್ಳಿಯವರು ಗೃಹ ಲಕ್ಷ್ಮಿ ಯೋಜನೆ ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು ಚುನಾವಣೆ ಪೂರ್ವದಲ್ಲಿ ಭರವಸೆ ಕೊಟ್ಟಂತೆ ಮೂರು ಗ್ಯಾರಂಟಿ ಯೋಜನೆಗಳನ್ನು ಈಗಾಗಲೇ ಅನುಷ್ಠಾನಗೊಳಿಸಲಾಗಿದ್ದು, ಇಂದು ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಮತ್ತು ಸಚಿವರು ಮೈಸೂರಿನಲ್ಲಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ, ಇಂದು ನಮ್ಮ ಪಂಚಾಯಿತಿಯಲ್ಲಿ ಚಾಲನೆ ನೀಡಲಾಗಿದೆ, ಸಾರ್ವಜನಿಕರು ಸರ್ಕಾರದ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮಾತನಾಡಿದರು, ನಂತರ ಪ್ರಶಾಂತ್ ಬಾಣಾಪುರ್ ರವರು ಯೋಜನೆ ಬಗ್ಗೆ ವಿವರಿಸಿದರು ಎಂದು ವಿಶ್ವನಾಥ ಮಾಲಿಪಾಟೀಲ್ ತಿಳಿಸಿದ್ದಾರೆ.
Kalyanasiri Kannada News Live 24×7 | News Karnataka
