Applications invited for the posts of Library, Information Center Supervisor
ಕೊಪ್ಪಳ ಸೆಪ್ಟೆಂಬರ್ 06 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ 21 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಿದ್ದು, ಈ ಗ್ರಾಮ ಪಂಚಾಯತಿ ಗ್ರಂಥಾಲಯಗಳಿಗೆ ಪ್ರಸ್ತುತ ಖಾಲಿ ಇರುವ ಪ್ರತಿ ಗ್ರಾಮ ಪಂಚಾಯತಿಗೆ ಒಂದರಂತೆ ಒಟ್ಟು 21 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಖಾಲಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 25ರ ಸಾಯಂಕಾಲ 5.30ರ ವರೆಗೆ ಅವಕಾಶವಿದ್ದು, ಅರ್ಜಿಯನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ, ಜಿಲ್ಲಾ ಪಂಚಾಯತ್, ಕೊಪ್ಪಳ ಹಾಗೂ ಎಲ್ಲಾ ತಾಲೂಕ ಪಂಚಾಯತಿ, ಸಂಬAಧಿಸಿದ 21 ಗ್ರಾಮ ಪಂಚಾಯತಿಗಳಲ್ಲಿ ಮತ್ತು ಹೆಚ್ಚಿನ ಮಾಹಿತಿಗಾಗಿ ಕೊಪ್ಪಳ ಜಿಲ್ಲೆಯ ವೆಬ್‌ಸೈಟ್ www.koppal.nic.in ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು. ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9480871001 ನ್ನು ಸಂಪರ್ಕಿಸಬಹುದು.
ಅರ್ಜಿ ಸಲ್ಲಿಸುವ ಸ್ಥಳ: ನಿಗದಿತ ನಮೂನೆಯಲ್ಲಿ ಭರ್ತಿಮಾಡಿ ಅರ್ಜಿಯನ್ನು ದೃಢೀಕರಿಸಿದ ಅಗತ್ಯ ದಾಖಲೆಗಳನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ “ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಉಪ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯತ್, ಜಿಲ್ಲಾ ಆಡಳಿತ ಭವನ, ಹೊಸಪೇಟೆ ರೋಡ್ ಕೊಪ್ಪಳ” ಈ ವಿಳಾಸಕ್ಕೆ ಮಾತ್ರ ಸಲ್ಲಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.