Breaking News

ಅತಿ ಹಿಂದುಳಿದ ವರ್ಗಗಳ ಸಮಾನ ಮನಸ್ಕರ ಪೂರ್ವಭಾವಿ ಸಭೆಯ ಸ್ವಾಗತ ಸಮಿತಿ

Reception Committee of Preparatory Meeting of Like Minded Most Backward Classes

ಜಾಹೀರಾತು

ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿದ್ದೂ ಅವಕಾಶ ವಂಚಿತವಾಗಿರುವ ಅತಿ ಹಿಂದುಳಿದ ಸಮುದಾಯಗಳ ಸಮಸ್ಯೆಗಳ ಪರಿಹಾರಕ್ಕಾಗಿ ಸಂಘಟಿತವಾದ ಹೋರಾಟವೊಂದನ್ನು ರೂಪಿಸುವುದು ಅನಿವಾರ್ಯವಾಗಿದೆ. ಈ ದಿಸೆಯಲ್ಲಿ ಇರಿಸಬೇಕಾದ ಹೆಜ್ಜೆಗಳ ಕುರಿತು ಸಮಾಲೋಚನೆಗಾಗಿ ಸೆಪ್ಟೆಂಬರ್‌ 9ರಂದು ಬೆಂಗಳೂರಿನ ಅರಮನೆ ಮೈದಾನದ ವೈಟ್‌ ಪೆಟಲ್ಸ್‌ ಸಭಾಂಗಣದಲ್ಲಿ ಅತಿ ಹಿಂದುಳಿದ ವರ್ಗಗಳ ಸಮಾನ ಮನಸ್ಕರ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ. ಅತಿ ಹಿಂದುಳಿದ ಸಮುದಾಯಗಳನ್ನು ಪ್ರತಿನಿಧಿಸುವ ಹಲವು ಮಠಾಧೀಶರು, ರಾಜಕೀಯ ನಾಯಕರು ಸಭೆಯಲ್ಲಿಜಿ ಹಾಗೂ ಪಾಲ್ಗೊಳ್ಳಲಿದ್ದಾರೆ.

ಸಮಾನ ಮನಸ್ಕರ ಪೂರ್ವಭಾವಿ ಸಭೆಯ ಸಿದ್ಧತೆಗಳು ಹಾಗೂ ಕಾರ್ಯಸೂಚಿ ಕುರಿತು ಮಾಹಿತಿ *ಹಂಚಿಕೊಳ್ಳಲು ದಿನಾಂಕ: 07/09/2023ರ ಗುರುವಾರ ಮಧ್ಯಾಹ್ನ 4ಗಂಟೆಗೆ ಅರಮನೆ ಮೈದಾನದ ವೈಟ್ ಪೆಟಲ್ಸ್ ಸಭಾಂಗಣದ ಆವರಣದಲ್ಲಿ ಪತ್ರಿಕಾಗೋಷ್ಠಿ ಆಯೋಜಿಸಲಾಗಿದೆ. ಅತಿ ಹಿಂದುಳಿದ ವರ್ಗಗಳ ಸಮಾನ ಮನಸ್ಕರ ಪೂರ್ವಭಾವಿ ಸಭೆಯ ಸ್ವಾಗತ ಸಮಿತಿಯ ಅಧ್ಯಕ್ಷರಾಗಿರುವ ವಿಧಾನ ಪರಿಷತ್‌ ಮಾಜಿ ಸದಸ್ಯ ಶ್ರೀ ಎಚ್.ಆರ್‌. ಶ್ರೀನಾಥ್‌, ರಾಷ್ಟ್ರೀಯ ಈಡಿಗ ಮಹಾಮಂಡಳಿ ಅಧ್ಯಕ್ಷರಾದ ಶ್ರೀ ಪ್ರಣವಾನಂದ ಸ್ವಾಮೀಜಿ ಹಾಗೂ ಇತರ ಪ್ರಮುಖರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಲಿದ್ದಾರೆ.

ತಮ್ಮ ದಿನಪತ್ರಿಕೆ/ ಸುದ್ದಿವಾಹಿನಿಯ ವರದಿಗಾರರು ಮತ್ತು ಛಾಯಾಗ್ರಾಹಕರನ್ನು ಪತ್ರಿಕಾಗೋಷ್ಠಿಗೆ ನಿಯೋಜಿಸಿ, ವರದಿ ಪ್ರಕಟಿಸುವಂತೆ ಮನವಿ ಮಾಡುತ್ತೇವೆ.

ಇಂತಿ ತಮ್ಮ ವಿಶ್ವಾಸಿ

ಅತಿ ಹಿಂದುಳಿದ ವರ್ಗಗಳ ಸಮಾನ ಮನಸ್ಕರ ಪೂರ್ವಭಾವಿ ಸಭೆಯ ಸ್ವಾಗತ ಸಮಿತಿಯ ಪರವಾಗಿ

ಹೆಚ್ಚಿನ ಮಾಹಿತಿಗಾಗಿ ಸಂಪರ್ಕ:9916748859

About Mallikarjun

Check Also

ವಾರ್ಡ್ ಶಿಬಿರಗಳಲ್ಲಿ ಆನ್‌ಲೈನ್ ತಂತ್ರಾಂಶದ ಮೂಲಕ ನಮೂನೆ-3ನ್ನು ಪಡೆದುಕೊಳ್ಳಿ:ನಾಗೇಶ್,

Obtain form-3 through online software in ward camps : Nagesh,, ಯಲಬುರ್ಗಾ : ಇ-ಆಸ್ತಿ ತಂತ್ರಾಶವನ್ನು ಸರಳೀಕರಣಗೊಳಿಸಿ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.