Kottureswar English medium student K. Srijana is selected for the state level chess competition.
ಗಂಗಾವತಿ: ಗಂಗಾವತಿ ಪ್ರತಿಷ್ಠಿತ ಶ್ರೀ ಕೊಟ್ಟೂರೇಶ್ವರ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ಶ್ರೀ ಕೊಟ್ಟೂರೇಶ್ವರ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ೭ನೇ ತರಗತಿ ವಿದ್ಯಾರ್ಥಿನಿಯಾದ ಕೆ. ಸೃಜನಾ ತಂದೆ ಕೆ. ಮಂಜುನಾಥ ಇವರು ದಿನಾಂಕ: ೦೭.೦೯.೨೦೨೩ ರಂದು ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ ಎಂದು ಮುಖ್ಯೋಪಾಧ್ಯಾಯರಾದ ಶ್ರೀಮತಿ ಅನಿತಾ ಇವರು ಪ್ರಕಟಣೆಯಲ್ಲಿ ತಿಳಿಸಿದರು. ಶಾಲೆಯ ಈ ವಿದ್ಯಾರ್ಥಿನಿಯ ಸಾಧನಗೆ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಮ.ನಿ.ಪ್ರ. ಡಾ|| ಕೊಟ್ಟೂರು ಮಹಾಸ್ವಾಮಿಗಳು, ಕಾರ್ಯದರ್ಶಿಗಳಾದ ಶ್ರೀ ಶರಣೆಗೌಡ ಮಾಲಿಪಾಟೀಲ್, ಕೋಶಾಧ್ಯಕ್ಷರಾದ ಶ್ರೀ ಸುರೇಶ ಸಿಂಗನಾಳ ಹಾಗೂ ಆಡಳಿತ ಮಂಡಳಿಯ ಎಲ್ಲಾ ನಿರ್ದೇಶಕರುಗಳು ಮತ್ತು ಮಾರ್ಗದರ್ಶಕರಾದ ದೈಹಿಕ ಶಿಕ್ಷಕರು ಹಾಗೂ ಎಲ್ಲಾ ಶಿಕ್ಷಕರು ಅಭಿನಂದನೆಗಳನ್ನು ತಿಳಿಸಿ ರಾಜ್ಯಮಟ್ಟದಲ್ಲಿ ಉನ್ನತ ಸಾಧನೆಮಾಡಿ ರಾಷ್ಟçಮಟ್ಟಕ್ಕೆ ಆಯ್ಕೆ ಆಗಲೆಂದು ಶುಭಕೋರಿದ್ದಾರೆ.