Geetha Konapura selected for district level in javelin throw
ಕೊಪ್ಪಳ: ಕೊಪ್ಪಳ ತಾಲೂಕಿನ ಹಿರೇಸಿಂದೋಗಿಯ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಕುಮಾರಿ ಗೀತಾ ಕೋನಾಪೂರ ಅವರು ಜಾವಲಿನ್ ಎಸೆತದಲ್ಲಿ ತಾಲೂಕ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಮಹಾವಿದ್ಯಾಲಯದ ಪ್ರಾಚಾರ್ಯರಾದ ಹನುಮಂತಪ್ಪ ಅಂಡಗಿ ಚಿಲವಾಡಗಿ ಅವರು ತಿಳಿಸಿದ್ದಾರೆ. ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾಮಿ ವಿವೇಕಾನಂದ ಪದವಿಪೂರ್ವ ಮಹಾವಿದ್ಯಾಲಯದವರು ಹಮ್ಮಿಕೊಂಡ ತಾಲೂಕ ಮಟ್ಟದ ಕ್ರೀಡಾಕೂಟದಲ್ಲಿ ಜಾವಲಿನ್ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ