Celebrating International Democracy Day with recitation of the Constitution with children

ಗಂಗಾವತಿ:ದಿ15.09.2023 ರಂದು ಮಕ್ಕಳೊಂದಿಗೆ ಸಂವಿಧಾನ ಪೀಠಿಕೆ ವಾಚನದೊಂದಿಗೆ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಸಂಭ್ರಮಾಚರಣೆ ಕಾರ್ಯಕ್ರಮ ನಿಮಿತ್ಯ ಮಾನ್ಯ ತಹಶೀಲ್ದಾರರು ಹಾಗೂ ತಾಲೂಕ ದಂಡಾಧಿಕಾರಿಗಳು ಗಂಗಾವತಿ ರವರ ಅಧ್ಯಕ್ಷತೆಯಲ್ಲಿ ಇಂದು ತಹಶೀಲ್ದಾ ಕಾರ್ಯಲಯದಲ್ಲಿ ಪೂರ್ವಭಾವಿ ಸಭೆಯನ್ನು ಎರ್ಪಡಿಸಲಾಯಿತು. ಕಾರ್ಯಕ್ರಮದ ಬಗ್ಗೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ಸರ್ಕಾರದ ಶಿಷ್ಟಾಚಾರದನ್ವಯ ಎಲ್ಲಾ ಜನಪ್ರತಿನಿದಿಗಳಿಗೆ ಸಂಘ ಸಂಸ್ಥೆಗಳಿಗೆ ಸಮಾಜದ ಮುಖಂಡರಗೆ ಆಯಾ ಇಲಾಖೆವತಿಯಿಂದ ಆಮಂತ್ರಣವನ್ನು ನೀಡಲು ಸೂಚಿಸಿದರು. ಜೂನಿಯರ್ ಕಾಲೇಜ್ ಆವರಣದಲ್ಲಿ ಆಯೋಜನೆಯಾಗಿರುವ ಕಾರ್ಯಕ್ರಮದಲ್ಲಿ ತಾಲೂಕಿನ ಎಲ್ಲಾ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸೂಚಿಸಿದರು. ಸಭೆಯಲ್ಲಿ ಕಛೇರಿ ಅಧೀಕ್ಷಕರು ತಾಲೂಕ ಪಂಚಾಯತ್, ತಾಲೂಕ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ತಾಲೂಕ ಅಧಿಕಾರಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು, ಗಂಗಾವತಿ ರವರು ಸಭೆಯಲ್ಲಿ ಉಪಸ್ಥಿತರಿದ್ದರು.
ಎಲ್ಲಾ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಪತ್ರಿಕಾ ಮಾಧ್ಯಮ ಮಿತ್ರರು ಹಾಗೂ ಎಲ್ಲಾ ಸಾರ್ವಜನಿಕರು ಮತ್ತು ಜನ ಪ್ರತಿನಿದಿಗಳು ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂವಿಧಾನ ಓದು ಕಾರ್ಯಕ್ರಮ ಯಶಸ್ವಿಗೊಳಿಸಲು ಕೋರಲಾಗಿದೆ.