Breaking News

ಸೆ.15ರಂದು ಸಂವಿಧಾನ ಪೀಠಿಕೆ ಓದು: ಕಾರ್ಯಕ್ರಮದಲ್ಲಿ ಭಾಗವಹಿಸಲು ಮನವಿ

Read the Preamble of the Constitution on September 15: Request to participate in the program

ಜಾಹೀರಾತು
ಜಾಹೀರಾತು

ಕೊಪ್ಪಳ ಸೆಪ್ಟೆಂಬರ್ 13 (ಕರ್ನಾಟಕ ವಾರ್ತೆ): ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’ ಅಂಗವಾಗಿ ಭಾರತದ ಸಂವಿಧಾನ ಪೀಠಿಕೆಯನ್ನು ಓದುವ ಕಾರ್ಯಕ್ರಮವು ಸೆಪ್ಟೆಂಬರ್ 15ರಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ರಾಜ್ಯದ ಮುಖ್ಯಮಂತ್ರಿಯವರು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಮೊಟ್ಟ ಮೊದಲ ಬಾರಿಗೆ ಜಾಗತಿಕ ಮಟ್ಟದಲ್ಲಿ “ಭಾರತ ಸಂವಿಧಾನ ಪೀಠಿಕೆಯ ಜಾಗತಿಕ ವಾಚನ” ಕಾರ್ಯಕ್ರಮವನ್ನು ಸೆ. 15ರಂದು ಬೆಳಗ್ಗೆ 10 ಗಂಟೆಗೆ ಭವ್ಯ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಹಮ್ಮಿಕೊಂಡಿರುತ್ತಾರೆ. ಸರ್ಕಾರದ ನಿರ್ದೇಶನದಂತೆ ಈ ಕಾರ್ಯಕ್ರಮವನ್ನು ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ಅಂದು ಬೆಳಗ್ಗೆ 10 ಗಂಟೆಗೆ ಸಂವಿಧಾನ ಪೀಠಿಕೆ ಓದುವ ಮೂಲಕ ಆಚರಿಸಲಾಗುತ್ತಿದೆ.
ಈ ಕಾರ್ಯಕ್ರಮದಲ್ಲಿ ಶಾಲಾ ಕಾಲೇಜ್‌ನ ವಿದ್ಯಾರ್ಥಿಗಳು, ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಮತ್ತು ಸಾರ್ವಜನಿಕರು ಸೇರಿದಂತೆ ಸುಮಾರು 2000 ಜನರು ಪಾಲ್ಗೊಳ್ಳಲಿದ್ದಾರೆ. ಕಾರಣ ವಿವಿಧ ಸಮುದಾಯಗಳ ಮುಖಂಡರು, ಸಂಘ-ಸಂಸ್ಥೆಗಳ ಮುಖಂಡರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬೆಳಗ್ಗೆ 9.30 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶ್ವಸಿಗೊಳಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

ನ್ಯಾಯಾಲಯಗಳಲ್ಲಿ ಕನ್ನಡ ಭಾಷಾ ಅನುಷ್ಠಾನ ರಾಜ್ಯ ಸಮಿತಿ ಉದ್ಘಾಟನಾ ಸಮಾರಂಭ.

Inaugural ceremony of the State Committee for Implementation of Kannada Language in Courts. ಬೆಂಗಳೂರು ಮಾರ್ಚ್ …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.