Breaking News

ಸೆಪ್ಟೆಂಬರ್ 17ರಂದು ಕೊಪ್ಪಳದಲ್ಲಿ 76ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ

76th Kalyana Karnataka Utsav Day celebration at Koppal on 17th September

ಜಾಹೀರಾತು

ಕೊಪ್ಪಳ ಸೆಪ್ಟೆಂಬರ್ 15 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾಡಳಿತದಿಂದ 76ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಕಾರ್ಯಕ್ರಮ ಸೆಪ್ಟೆಂಬರ್ 17ರಂದು ಬೆಳಿಗ್ಗೆ 9ಕ್ಕೆ ನಗರದ ಗದಗ ರಸ್ತೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಧ್ವಜಾರೋಹಣ ನೆರವೇರಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಕರಡಿ ಸಂಗಣ್ಣ, ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ದೊಡ್ಡನಗೌಡ ಹನುಮಗೌಡ ಪಾಟೀಲ ಹಾಗೂ ಜಿ.ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ನಗರಸಭೆ ಅಧ್ಯಕ್ಷರಾದ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ವಸತಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ನವೀನ್ ರಾಜ್ ಸಿಂಗ್ ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ಸುನೀಲ್ ವಂಟಗೋಡಿ ಅವರು ಉಪಸ್ಥಿತರಿರುವರು.
ಕಲ್ಯಾಣ ಕರ್ನಾಟಕ ಉತ್ಸವ ಅಂಗವಾಗಿ ರಾಷ್ಟ್ರಧ್ವಜಾರೋಹಣದ ಬಳಿಕ ಪಥಸಂಚಲನ, ಸನ್ಮಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.

ತಿಳಿಸಿದ್ದಾರೆ.

About Mallikarjun

Check Also

ಎಸ್ಸಿ ಎಸ್ಟಿ ಮೀನುಗಾರರಿಗೆ ವಾಹನ ಖರೀದಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

Applications invited for subsidy for SC/ST fishermen to purchase vehicles ಕೊಪ್ಪಳ ಆಗಸ್ಟ್ 30 (ಕರ್ನಾಟಕ ವಾರ್ತೆ): …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.