Breaking News

ಸೆ.16ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ

Dialogue meeting of electricity consumers on September 16

ಜಾಹೀರಾತು

ಕೊಪ್ಪಳ ಸೆಪ್ಟೆಂಬರ್ 15 (ಕರ್ನಾಟಕ ವಾರ್ತೆ): ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಕೊಪ್ಪಳ ಕಾರ್ಯ ಮತ್ತು ಪಾಲನಾ ವಿಭಾಗದಿಂದ ವಿದ್ಯುತ್ ಗ್ರಾಹಕರ ಸಂವಾದ ಸಭೆ ಸೆಪ್ಟೆಂಬರ್ 16ರಂದು ಕೊಪ್ಪಳ, ಮುನಿರಾಬಾದ್ ಹಾಗೂ ಯಲಬುರ್ಗಾದಲ್ಲಿ ಏರ್ಪಡಿಸಲಾಗಿದೆ.
ವಿದ್ಯುತ್‌ಗೆ ಸಂಬಂಧಿಸಿದ ಕುಂದು ಕೊರತೆಗಳನ್ನು ಪರಿಹರಿಸುವ ಉದ್ದೇಶದಿಂದ ಮೇಲಾಧಿಕಾರಿಗಳ ನಿರ್ದೇಶನದನ್ವಯ ಹಾಗೂ ಸ್ಟ್ಯಾಂಡರ್ಡ್ ಆಫ್ ಪರ್ಫಾಮೇನ್ಸ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಅಧೀಕ್ಷಕ ಅಭಿಯಂತರರು, ಕಾರ್ಯನಿರ್ವಾಹಕ ಅಬಿಯಂತರರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿರುತ್ತದೆ. ಅದರಂತೆ ಕೊಪ್ಪಳ ಉಪ ವಿಭಾಗದ ವಿದ್ಯುತ್ ಗ್ರಾಹಕರ ಸಂವಾದ ಸಭೆಯು ಕೊಪ್ಪಳ ಜೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಮುನಿರಾಬಾದ್ ಉಪ ವಿಭಾಗದ ಸಭೆಯು ಮುನಿರಾಬಾದ್ ಕಚೇರಿಯಲ್ಲಿ ಮತ್ತು ಯಲಬುರ್ಗಾ ಉಪ ವಿಭಾಗದ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಯಲಬುರ್ಗಾ ಕಚೇರಿಯಲ್ಲಿ ಸೆ.16ರಂದು ಬೆಳಿಗ್ಗೆ 11ಕ್ಕೆ ನಡೆಯಲಿದೆ.
ಆಯಾ ಉಪವಿಭಾಗ ವ್ಯಾಪ್ತಿಯ ಎಲ್ಲಾ ವಿದ್ಯುತ್ ಗ್ರಾಹಕರು ಸಭೆಗೆ ಹಾಜರಾಗಿ, ಯಶಸ್ವಿಗೊಳಿಸಬೇಕು ಎಂದು ಗುವಿಸಕಂನಿ ಕಾರ್ಯ ಮತ್ತು ಪಾಲನಾ ವಿಭಾಗ ಕೊಪ್ಪಳ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

ಗುರುಪೌರ್ಣಮಿ ನಿಮಿತ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ: ಟಿ.ರಾಮಕೃಷ್ಣ

Special religious program on the occasion of Gurupournami: T. Ramakrishna ಗಂಗಾವತಿ, ಜು.08: ಹೊರವಲಯದ ಆನೆಗೊಂದಿ ರಸ್ತೆಯಲ್ಲಿರುವ …

Leave a Reply

Your email address will not be published. Required fields are marked *