Breaking News
ಶ್ರೀ ಬಸವಣ್ಣ ದೇವರ ಗುಡಿಯಜೀರ್ಣೋದ್ಧಾರ ಹಾಗೂ ನೂತನ ಶ್ರೀ ಆಂಜನೇಯ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ

Restoration of Shree Basavanna Deity Temple and installation of new Shree Anjaneya Swami Murthy

ಲಿಂಗಸೂಗೂರು ನಗರದ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ, ಜೆಸ್ಕಾಂ ಹಾಗೂ ವಿದ್ಯುತ್ ಗುತ್ತಿಗೆದಾರರ ಸೇವಾ ಮಂಡಳಿ ಸಮಿತಿ ವತಿಯಿಂದ ಶ್ರೀ ಬಸವಣ್ಣ ದೇವರ ಗುಡಿಯ ಜೀರ್ಣೋದ್ಧಾರ ಹಾಗೂ ನೂತನ ಶ್ರೀ ಆಂಜನೇಯ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು.

ನೂತನ ಶ್ರೀ ಆಂಜನೇಯ ಸ್ವಾಮಿ ದೇವರ ಮೂರ್ತಿಯನ್ನು ಲಿಂಗಸೂಗೂರು ನಗರದ ಶ್ರೀ ದೊಡ್ಡ ಆಂಜನೇಯ ದೇವಸ್ಥಾನದಿಂದ ಪ್ರಮುಖ ರಸ್ತೆಗಳಲ್ಲಿ ಮಹಿಳೆಯರು ಕುಂಭ,ಕಳಸ,ಡೊಳ್ಳು ವಾದ್ಯಗಳೊಂದಿಗೆ ಮೆರವಣಿಗೆ ಮೂಲಕ ಇಂದು ಅದ್ದೂರಿಯಾಗಿ ನೆರವೇರಿತು.

ರವಿವಾರ ಬ್ರಾಹ್ಮೀ ಮುಹೂರ್ತದಲ್ಲಿ ಬೆಳಗ್ಗೆ 5ಗಂಟೆಗೆಯಿಂದ ಶ್ರೀ ಆಂಜನೇಯ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ, ಘನ ಹೋಮ,ನವಗ್ರಹ ಹೋಮ,ಕಳಸ ಅಭಿಷೇಕ, ಪುಷ್ಪಾಲಂಕಾರ,ನೈವೇದ್ಯ ಮಹಾ ಮಂಗಳಾರತಿ ಹಾಗೂ ಮಹಾಪ್ರಸಾದ ನಡೆಯಲಿದ್ದು ನಗರದ ಸಕಲ ಸದ್ಭಕ್ತರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆಂಜನೇಯ ದೇವಾಲಯ ಕೃಪೆಗೆ ಪಾತ್ರರಾಗಬೇಕೆಂದು ಸಮಿತಿಯ ಸದ್ಭಕ್ತ ಮಂಡಳಿಯ ಸದಸ್ಯರು ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ,ಜೆಸ್ಕಾಂ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಹಾಗೂ ವಿದ್ಯುತ್ ಗುತ್ತಿಗೆದಾರರು ಹಾಗೂ ಊರಿನ ಹಿರಿಯರು ಮಹಿಳೆಯರು, ಮಕ್ಕಳು ಭಾಗವಹಿಸಿದ್ದರು.

ವಿಶ್ವಕರ್ಮ ಜಯಂತಿ ಅಂಗವಾಗಿಪೂರ್ವಭಾವಿಸಭೆ ಶಾಸಕ ಎಮ್ ಆರ್ ಮಂಜುನಾಥ್

On the occasion of Vishwakarma Jayanti, MLA M R Manjunath.


ವರದಿ :ಬಂಗಾರಪ್ಪ ಸಿ .
ಹನೂರು :ನಮ್ಮ ಕ್ಷೇತ್ರದಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷವು ವಿಶ್ವ ಕರ್ಮ ಜಯಂತಿ ಯನ್ನು ಅ.1ರಂದು ಪಟ್ಟಣದಲ್ಲಿ ಸಡಗರ ಸಂಭ್ರಮದಿಂದ ಅರ್ಥಪೂರ್ಣ ಆಚರಣೆ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಶಾಸಕ ಎಂ. ಆರ್. ಮಂಜುನಾಥ್ ತಿಳಿಸಿದರು.
ಪಟ್ಟಣದ ಲೋಕೋಪಯೋಗಿ ಇಲಾಖೆ ಅತೀಥಿ ಗೃಹದಲ್ಲಿ ವಿಶ್ವಕರ್ಮ ಜಯಂತಿ ಅಂಗವಾಗಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕರೆಯಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು
ಮಹನೀಯರ ಹಾಗೂ ಹಿರಿಯರನ್ನು ಗೌರವಿಸುವುದು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಇದೀಗ ವಿಶ್ವಕರ್ಮ ಜಯಂತಿಯನ್ನು ಸಹ ಆಚರಣೆ ಮಾಡಲಾಗುತ್ತಿದ್ದು ಸಮುದಾಯದ ಮುಖಂಡರುಗಳ ಜೊತೆ ಚರ್ಚೆ ನಡೆಸಿ ನಿಗದಿಪಡಿಸಲಾಗಿರುವ ದಿನಾಂಕದಂದು ಬೆಳಿಗ್ಗೆ 9ಗಂಟೆಗೆ ಆರ್. ಎಂ. ಸಿ ಆವರಣದಲ್ಲಿ ಚಾಲನೆ ನೀಡಲಾಗುವುದು. ಬಳಿಕ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿ ಪಟ್ಟಣದಲ್ಲಿ ವೇದಿಕೆ ಕಾರ್ಯಕ್ರಮ ಮೂಲಕ
ಜಯಂತಿಯಲ್ಲಿ ಯಾವುದೇ ರೀತಿಯ ಲೋಕದೋಷವಾಗದಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮವನ್ನು ನಡೆಸಬೇಕು ಇದಕ್ಕಾಗಿ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ತಹಸೀಲ್ದಾರ್ ಗುರು ಪ್ರಸಾದ್, ಸಿ.ಡಿ.ಪಿ.ಓ ನಂಜಮಣಿ ಗ್ರಾಮ ಆಡಳಿತ ಅಧಿಕಾರಿ ಶೇಷಣ್ಣ, ದೈಹಿಕ ಪರಿವೀಕ್ಷಕ ಮಹದೇವ್, ಅಗ್ನಿ ಶಾಮಕ ದಳ ಸಿಬ್ಬಂದಿ ಮಹೇಶ್,ಮುಖಂಡರಾದ ಮುತ್ತು, ವೀರಚಾರಿ, ಆರ್. ರಾಚಪ್ಪಾಜಿ, ತಮ್ಮಯಚಾರಿ, ಮುತ್ತುರಾಜು, ದೊರೆ, ರಾಮಾಚಾರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇತರರು ಹಾಜರಿದ್ದರು.

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

District In-charge Minister’s Tour

ಕೊಪ್ಪಳ ಸೆಪ್ಟೆಂಬರ್ 16 (ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಸೆಪ್ಟೆಂಬರ್ 17ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.


ಅಂದು ಬೆಳಗ್ಗೆ 8 ಗಂಟೆಗೆ ಕಾರಟಗಿಯಿಂದ ನಿರ್ಗಮಿಸಿ ಬೆಳಗ್ಗೆ 9ಕ್ಕೆ ಕೊಪ್ಪಳ ನಗರಕ್ಕೆ ಆಗಮಿಸಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ 76ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ-2023ರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾಗುವರು.
ಬಳಿಕ 10 ಗಂಟೆಗೆ ನಗರದ ಎಂ.ಪಿ.ಪ್ಯಾಲೇಸ್‌ನಲ್ಲಿ ಕೊಪ್ಪಳ ಖಾಸಗಿ ಶಾಲೆಗಳ ಒಕ್ಕೂಟ ಆಯೋಜಿಸಿರುವ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗುವರು.
ಬಳಿಕ ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನ ಬಳಕೆಯ ಕುರಿತಾಗಿ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗಿಯಾಗುವರು. ಮಧ್ಯಾಹ್ನ 1 ಗಂಟೆಗೆ ಕೊಪ್ಪಳ ನಗರದಿಂದ ನಿರ್ಗಮಿಸಿ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆ ವ್ಯವಸ್ಥೆಯ ಆ ಗರ ವಾದ ಗಂಗಾವತಿ ಕೇಂದ್ರ ಬಸ್ ನಿಲ್ದಾಣ, ಸ್ವಚ್ಛತೆಗೆ ಮುಂದಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ

Central Bus Stand, the central bus stand of that system, warning of protest if not cleaned.

ಗಂಗಾವತಿ, ನಗರದ ಕೇಂದ್ರ ಬಸ್ ನಿಲ್ದಾಣ ಕಸ ಕಡ್ಡಿ ನೀರು ಪ್ಲಾಸ್ಟಿಕ್ ಇತ್ಯಾದಿಗಳಿಂದ ತುಂಬಿ ತುಳುಕುತ್ತಿದ್ದು ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳು ಇವೆ, ಇದಕ್ಕೆ ಸಂಬಂಧಪಟ್ಟಂತೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷ ಪಂಪಣ್ಣ ನಾಯಕ್ ಪ್ರತಿಕ್ರಿಯೆ ವ್ಯಕ್ತಪಡಿಸಿ ಮೂರು ದಿನದೊಳಗೆ ಸಾರಿಗೆ ಸಂಸ್ಥೆಯ ಘಟ್ಟ ವ್ಯವಸ್ಥಾಪಕರು ಹಾಗೂ ಬಸ್ ನಿಲ್ದಾಣದಲ್ಲಿರುವ ಕಂಟ್ರೋಲರ್ ಸ್ವಚ್ಛತೆಗೆ ಮುಂದಾಗದೆ ಇದ್ದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಶೆಟ್ಟಿ ಬಣದ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದೆಂದು ಎಚ್ಚರಿಕೆ ನೀಡಿದ್ದಾರೆ, ಶಕ್ತಿ ಯೋಜನೆಯ ಅಡಿಯಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದ್ದರು ಸ್ವಚ್ಛತೆ ಮಾತ್ರ ಮರೀಚಿಕೆಯಾಗಿ ಕಂಡು ಬಂದಿದೆ, ಪಕ್ಕದ ನೆರೆ ರಾಜ್ಯದಲ್ಲಿ ಭಯಂಕರ ಸಾಂಕ್ರಾಮಿಕ ರೋಗ ಕಂಡುಬಂದಿದ್ದು ಸಾವು ನೋವುಗಳ ಸಂಖ್ಯೆ ಹಾಗೂ ಸಾಂಕ್ರಾಮಿಕವಾಗಿ ರೋಗ ಉಲ್ಬಳಗೊಳ್ಳುವ ಸಾಧ್ಯತೆಗಳು ಇವೆ, ಈ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆ ಸೇರಿದಂತೆ ಸಂಬಂಧಪಟ್ಟಂತಹ ಅಧಿಕಾರಿ ವರ್ಗದವರು ಸಾರ್ವಜನಿಕ ಪ್ರಯಾಣಿಕರ ಹಿತ ದೃಷ್ಟಿಯಿಂದ ಮುಂಜಾಗ್ರತಿ ಕ್ರಮಗಳನ್ನು ತೆಗೆದುಕೊಂಡು ಸ್ವಚ್ಛತೆಗೆ ಮುಂದಾಗಬೇಕೆಂದು ಒತ್ತಾಯಿಸಿದ್ದಾರೆ, ರೋಗಗಳು ಹರಡೋಕುoತ್ತ ಮುಂಚೆ ರೋಗ ಹರಡದಂತೆ ಎಚ್ಚರಿಕೆ ವಹಿಸಬೇಕು, ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಜಾಗೃತಿ, ಉಸ್ತುವಾರಿ ಸಮಿತಿಗೆ ಅಧಿಕಾರೇತರ ಸದಸ್ಯರ ನೇಮಕಕ್ಕೆ ಅರ್ಜಿ ಆಹ್ವಾನ

Application invitation for appointment of Non-Official Members to Awareness, Stewardship Committee

ಕೊಪ್ಪಳ ಸೆಪ್ಟೆಂಬರ್ 16 (ಕರ್ನಾಟಕ ವಾರ್ತೆ): ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ದೌರ್ಜನ್ಯ ನಿಯಂತ್ರಣ) ನಿಯಮಗಳು 1995ರ ನಿಯಮ 17 ರೀತ್ಯಾ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯನ್ನು ರಚಿಸಲು
3 ಪರಿಶಿಷ್ಟ ಜಾತಿ, 02 ಪರಿಶಿಷ್ಟ ಪಂಗಡದ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡೇತರ ಎನ್.ಜಿ.ಓ.ಗಳ 03 ಜನ ಅಧಿಕಾರೇತರ ಸದಸ್ಯರುಗಳನ್ನು ನೇಮಕ ಮಾಡಬೇಕಾಗಿರುತ್ತದೆ.
ಈ ಸಮಿತಿಯನ್ನು ಪುನರ್ ರಚಿಸಬೇಕಾಗಿರುವುದರಿಂದ ಈ ಸದಸ್ಯರ ನೇಮಕಕ್ಕೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆದಕಾರಣ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಸಮುದಾಯದ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡೇತರ ಎನ್.ಜಿ.ಓಗಳ ಆಸಕ್ತ ಸದಸ್ಯರು ಸೆಪ್ಟೆಂಬರ್ 25 ರೊಳಗಾಗಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ತಾಲೂಕು ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಅವರಿಂದ ಪಡೆದು ಆಯಾ ತಾಲೂಕು ಸಮಾಜ ಕಲ್ಯಾಣ ಇಲಾಖಾ ಕಚೇರಿಗೆ ಸಲ್ಲಿಸಬೇಕು ಎಂದು ಉಪವಿಭಾಗ ಮಟ್ಟದ ಜಾಗೃತಿ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಗ್ರೇಡ್-1 ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಫಾಯಿಕರ್ಮಚಾರಿಗಳ ಜಾಗೃತಿ ಸಮಿತಿಗೆ ನಾಮನಿರ್ದೇಶನ: ಅರ್ಜಿ ಆಹ್ವಾನ

Nomination for Safai Karmachari Awareness Committee: Application Invitation

55ಕೊಪ್ಪಳ ಸೆಪ್ಟೆಂಬರ್ 16 (ಕರ್ನಾಟಕ ವಾರ್ತೆ): ಸಫಾಯಿ ಕರ್ಮಚಾರಿಗಳ ಉಪವಿಭಾಗ ಮಟ್ಟದ ಜಾಗೃತ ಸಮಿತಿಗೆ ನಾಮನಿರ್ದೇಶಿತ ಸದಸ್ಯರ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಮ್ಯಾನ್ಯುವಲ್ ಸ್ಕ್ಯಾವೆಂಜರ್‌ಗಳ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಕಾಯ್ದೆ-2013ರ ಸೆಕ್ಷನ್-24ರ ಪ್ರಕಾರ ಜಿಲ್ಲೆಯಲ್ಲಿ ಮ್ಯಾನ್ಯುವಲ್ ಸ್ಕ್ಯಾವೆಂಜರ್‌ಗಳ ಕೆಲಸವನ್ನು ನಿಷೇಧಿಸುವುದಕ್ಕಾಗಿ ಮತ್ತು ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳ ಪುನರ್ವಸತಿಗಾಗಿ ಕೆಲಸ ಮಾಡುತ್ತಿರುವವರನ್ನು ಒಳಗೊಂಡು ಸಫಾಯಿ ಕರ್ಮಚಾರಿಗಳ ಉಪವಿಭಾಗ ಮಟ್ಟದ ಜಾಗೃತ ಸಮಿತಿಗೆ (ವಿಜಿಲೆನ್ಸ್ ಕಮಿಟಿ) 04 ಜನ ನಾಮನಿರ್ದೇಶಿತ ಸದಸ್ಯರನ್ನು (2-ಪುರುಷ ಹಾಗೂ 2-ಮಹಿಳಾ) ನೇಮಕ ಮಾಡಬೇಕಾಗಿದೆ.
ಅರ್ಜಿಯನ್ನು ಸೆಪ್ಟೆಂಬರ್ 25 ರೊಳಗಾಗಿ ನಿಗದಿತ‌ ನಮೂನೆಯಲ್ಲಿ ಸಂಬಂಧಿಸಿದ ತಾಲೂಕಾ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ರವರಿಂದ ಪಡೆದು ಆಯಾ ತಾಲೂಕಾ ಸಮಾಜ ಕಲ್ಯಾಣ ಇಲಾಖಾ ಕಚೇರಿಗೆ ಸಲ್ಲಿಸಬೇಕು ಎಂದು ಉಪವಿಭಾಗ ಮಟ್ಟದ ಸಫಾಯಿ ಕರ್ಮಚಾರಿಗಳ ಜಾಗೃತಿ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಕೊಪ್ಪಳ ಸಮಾಜ ಕಲ್ಯಾಣ ಇಲಾಖೆ ಗ್ರೇಡ್-1 ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗೌರಿ ಗಣೇಶ ಹಬ್ಬ, ಈದ್ ಮಿಲಾದ್: ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ಇಲಾಖೆಯಿಂದ ಶಾಂತಿ ಸಭೆ

Gauri Ganesha Festival, Eid Milad: Peace meeting by District Administration, District Police Department

ಕೊಪ್ಪಳ ಸೆಪ್ಟೆಂಬರ್ 16 (ಕರ್ನಾಟಕ ವಾರ್ತೆ): ಸೌಹಾರ್ದತೆ ಸಂದೇಶದ ಗೌರಿ ಗಣೇಶ ಹಬ್ಬ ಮತ್ತು ಭಾವೈಕ್ಯತೆ ಸಂದೇಶದ ಈದ್ ಮಿಲಾದ್ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 16ರಂದು ಶಾಂತಿ ಸಭೆ ನಡೆಯಿತು.
ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆಯಿಂದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು, ನಾನಾ ಕಾರಣಗಳಿಂದ ದಿನೇದಿನೆ ಪರಿಸರವು ಮಾಲಿನ್ಯವಾಗುತ್ತಲೇ ಹೊರಟಿದೆ. ಇದರಿಂದಾಗಿ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮವಾಗುತ್ತಿದೆ. ನಾವು ಸೇವಿಸುವ ಗಾಳಿ, ನೀರು ವಿಷವಾಗುತ್ತಿದೆ. ಇದಕ್ಕೆ ಕಾರಣ ಏನು ಎಂಬುದನ್ನು ಪ್ರತಿಯೊಬ್ಬರು ಅರಿಯಬೇಕು. ಈ ನಿಟ್ಟಿನಲ್ಲಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಬೇಕು. ನಮ್ಮ ದೇಶವು ಶಾಂತಿಗೆ ಹೆಸರಾಗಿದೆ. ಇಲ್ಲಿ ಪ್ರತಿಯೊಂದು ಜಾತಿ ಧರ್ಮದ ಜನರು ಸಹೋದರರಂತೆ ಬಾಳುತ್ತಿದ್ದೇವೆ. ಹೀಗಾಗಿ ಈದ್ ಮಿಲಾದ್ ಮತ್ತು ಗಣೇಶ ಹಬ್ಬ ಎರಡನ್ನು ಎಲ್ಲರೂ ಸೇರಿ ಶಾಂತಿ ಸೌಹಾರ್ದತೆಯಿಂದ ಆಚರಿಸಲು ಕೊಪ್ಪಳ ಜಿಲ್ಲೆಯ ಜನರು ಸಹಕರಿಸಬೇಕು ಎಂದು ಮನವಿ ಮಾಡಿದರು.


ಸಮಾಜದಲ್ಲಿ ಪ್ರತಿಯೊಬ್ಬರು ಸಹ ಶಾಂತಿ, ಸಹನೆಯಿಂದ ಬಾಳಬೇಕು. ಪ್ರತಿಯೊಂದು ಹಬ್ಬಗಳ ಉದ್ದೇಶವು ಕೂಡ ಇದೆ ಆಗಿದೆ. ಗಣೇಶ ಹಬ್ಬದಲ್ಲಿ ಜನದಟ್ಟಣೆ ಸಹಜವಾಗಿರುವುದರಿಂದ ಮಕ್ಕಳು, ವಿದ್ಯಾರ್ಥಿಗಳು, ವೃದ್ಧರು ಸೇರಿದಂತೆ ಸಾರ್ವಜನಿಕರಿಗೆ ತೊಂದರೆಯಾಗದ ಹಾಗೆ ಹಬ್ಬ ಆಚರಿಸಬೇಕು. ಎರಡೂ ಹಬ್ಬಗಳು ಏಕಕಾಲಕ್ಕೆ ಬಂದಿರುವುದರಿಂದ ಎಲ್ಲರೂ ಪರಸ್ಪರ ಸ್ನೇಹ ಭಾವನೆಯಿಂದ ಕೂಡಿ ಹಬ್ಬ ಆಚರಿಸಬೇಕು. ಯಾವುದೇ ಕಡೆಗಳಲ್ಲಿ ಕೋಮು ಘಟನೆಗಳು ನಡೆಯದ ಹಾಗೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.
ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಎರಡೂ ಹಬ್ಬಗಳನ್ನು ದೇಶದೆಲ್ಲೆಡೆ ಅತ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಎಲ್ಲಾ ಕಡೆಗಳಲ್ಲಿ ಈ ಹಬ್ಬಗಳು ಶಾಂತರೀತಿಯಿಂದ ಆಚರಣೆ ಆಗಬೇಕು ಎಂದು ಸರ್ಕಾರವು ಕೆಲವೊಂದು ಮಾರ್ಗಸೂಚಿಗಳನ್ನು ಹೊರಡಿಸಿದೆ. ಈ ಮಾರ್ಗಸೂಚಿ ಪಾಲನೆ ಆಗಬೇಕು. ಸಮಾಜದಲ್ಲಿ ಶಾಂತಿ ಪಾಲನೆ ಮಾಡಬೇಕಾದ ಜವಾಬ್ದಾರಿಯು ಪ್ರತಿಯೊಬ್ಬರಿಗು ಇದೆ. ಈ ನಿಟ್ಟಿನಲ್ಲಿ ಕೊಪ್ಪಳ ಜಿಲ್ಲೆಯ ಸಾರ್ವಜನಿಕರು ಇದುವರೆಗೆ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆಗೆ ಸಹಕಾರ ನೀಡಿದ್ದಾರೆ. ಮುಂದೆಯು ಸಹ ಸಹಕಾರ ನೀಡಿ ಎರಡೂ ಹಬ್ಬಗಳು ಶಾಂತಿಯಿಂದ ನೆರವೇರಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ ಅವರು ಮಾತನಾಡಿ, ಪ್ರತಿ ವರ್ಷವೂ ಗಣೇಶ ಮೂರ್ತಿಗಳನ್ನು ಕೂಡಿಸುವ ಸಂಖ್ಯೆ ಹೆಚ್ಚುತ್ತ ಹೋಗುತ್ತಿದೆ. ಹೀಗಾಗಿ ಮಣ್ಣಿನ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪರಿಸರ ಸಂರಕ್ಷಣೆಗೆ ಸಾರ್ವಜನಿಕರು ಸಹಕರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಮೂರ್ತಿ ಕೂಡಿಸುವಾಗ ಕಡ್ಡಾಯ ಅನುಮತಿ ಪಡೆಯಬೇಕು. ಶಾಲಾ-ಕಾಲೇಜು ವಿದ್ಯಾರ್ಥಿಗಳನ್ನು ಕರೆದೊಯ್ಯುವ ವಾಹನ ಸಂಚರಿಸಲು ಅನುಕೂಲವಾಗುವ ಹಾಗೆ ಶ್ಯಾಮಿಯಾನು ಹಾಕಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನಿಗಾ ವಹಿಸಲು ಪೆಂಡಾಲನಲ್ಲಿ ಕಡ್ಡಾಯ ಸಿಸಿಟಿವಿ ಅಳವಡಿಸಬೇಕು. ಮೇನ್ ಲೈನ್‌ಗೆ ಸಂಪರ್ಕ ಹೊಂದದ ಹಾಗೆ ಪೆಂಡಾಲನ್ನು ಸುರಕ್ಷಿತ ಸ್ಥಳದಲ್ಲಿ ಹಾಕಬೇಕು. ಜನದಟ್ಟಣೆ ನಿಯಂತ್ರಿಸುವ ನಿಟ್ಟಿನಲ್ಲಿ ಪೆಂಡಾಲನಲ್ಲಿ ಎರಡು ಕಡೆ ಪ್ರವೇಶ ದ್ವಾರ ಮಾಡಬೇಕು. ಜವಾಬ್ದಾರಿ ಇರುವಂತವರಿಗೆ ಸ್ವಯಂ ಸೇವಕರೆಂದು ನೇಮಿಸಬೇಕು. ಆ ಎಲ್ಲ ಸ್ವಯಂ ಸೇವಕರ ಪಟ್ಟಿಯನ್ನು ಪೊಲೀಸ್ ಇಲಾಖೆಗೆ ನೀಡಬೇಕು. ಧ್ವನಿ ವರ್ಧಕ ಬಳಕೆಯನ್ನು ಸರ್ಕಾರ ಹೊರಡಿಸಿದ ಮಾರ್ಗಸೂಚಿಯನುಸಾರ ಮಾಡಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವಾಗ ಆಯಾ ಠಾಣಾ ವ್ಯಾಪ್ತಿಯಲ್ಲಿ ಅನುಮತಿ ಪಡೆಯಬೇಕು. ಗಣಪತಿ ಮೆರವಣಿಗೆ ಮಾರ್ಗ ಬದಲಾವಣೆ ಮಾಡದೇ ಮಂಡಳಿಗೆ ಸಹಕರಿಸಬೇಕು ಎಂದು ತಿಳಿಸಿದರು.
ಸಾರ್ವಜನಿಕರಲ್ಲಿ ಮನವಿ: ಸಮಾಜದಲ್ಲಿ ಎಲ್ಲರೂ ಶಾಂತಿ ಸಹಬಾಳ್ವೆಯಿಂದ ಇರಬೇಕು. ಗೌರಿ ಗಣೇಶ ಹಬ್ಬ ಎಂದರೆ ಅದು ಹಬ್ಬದ ರೀತಿಯಲ್ಲೇ ಇರಬೇಕು. ಮೆರವಣಿಗೆಯು ಶಾಂತಿಯುತವಾಗಿ ಸೌಹಾರ್ದಯುತವಾಗಿ ನಡೆಯಬೇಕು. ಅವಘಡಗಳು ಉಂಟಾಗಿ ಕಠಿಣ ಕ್ರಮ ಜರುಗಿಸುವ ಅನಿವಾರ್ಯತೆಯನ್ನು ಯಾರು ಸಹ ಸೃಷ್ಟಿ ಮಾಡಬಾರದು. ಕೊಪ್ಪಳ ಜಿಲ್ಲೆಯು ಶಾಂತಿಗೆ ಹೆಸರಾಗಿದೆ. ಇಲ್ಲಿನ ಜನರು ಶಾಂತಿಪ್ರಿಯರಾಗಿದ್ದಾರೆ. ಹೀಗಾಗಿ ಗೌರಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಎರಡೂ ಹಬ್ಬಗಳು ಶಾಂತಿಯಿಂದ ನಡೆಯುವಂತೆ ಎಲ್ಲ ಸಮುದಾಯವರು ಜಿಲ್ಲಾ ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತಕ್ಕೆ ಸಹಕಾರ ನೀಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸಭೆಯ ಮೂಲಕ ಜಿಲ್ಲೆಯ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರು ಮಾತನಾಡಿ, ಕೊಪ್ಪಳ ಜಿಲ್ಲೆಯ ಜನರು ಪ್ರತಿಯೊಂದು ಹಬ್ಬವನ್ನು ಶಾಂತಿಯಿಂದ ಆಚರಿಸುವುದನ್ನು ನಾವು ನೋಡಿದ್ದೇವೆ. ಇದೆ ರೀತಿಯ ಶಾಂತಿ ಸೌಹಾರ್ದತೆಯನ್ನು ಜಿಲ್ಲಾಡಳಿತವು ಸದಾಕಾಲ ಬಯಸುತ್ತದೆ. ಪಿಓಪಿ ಗಣಪತಿ ಮೂರ್ತಿಗಳನ್ನು ಬಳಸಬಾರದು ಎಂದು ಪರಿಸರ ಸಚಿವರು ತಿಳಿಸಿದ್ದು ಈ ನಿಯಮ ಪಾಲನೆ ಮಾಡಿ ಪರಿಸರ ಸಂರಕ್ಷೆಣೆಗೆ ಸಾರ್ವಜನಿಕರು ಸಹಕರಿಸಬೇಕು. ನಾವು ನೆಮ್ಮದಿಯಿಂದ ಬದುಕಲು ಒಳ್ಳೆಯ ಗಾಳಿ, ನೀರು, ಮಣ್ಣು ಬೇಕು. ಇದನ್ನು ಅರಿತು ಪಿಓಪಿ ಗಣಪತಿ ಮೂರ್ತಿಗಳನ್ನು ತಯಾರಿಸುವುದನ್ನು ಮತ್ತು ಮಾರಾಟ ಮಾಡುವುದನ್ನು ಸಂಪೂರ್ಣ ಕೈಬಿಡಬೇಕು ಎಂದು ಗಣೇಶ ಮಂಡಳಿಯ ಪದಾಧಿಕಾರಿಗಳಲ್ಲಿ ಮನವಿ ಮಾಡಿದರು.
ಸಭೆಯಲ್ಲಿ ಭಾಗಿಯಾಗಿದ್ದ ಕೊಪ್ಪಳ ಸೇರಿದಂತೆ ಗಂಗಾವತಿ, ಕನಕಗಿರಿ, ಕುಷ್ಟಗಿ, ಯಲಬುರ್ಗಾ, ಕುಕನೂರ, ಕಾರಟಗಿ ತಾಲೂಕಿನ ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಮಾತನಾಡಿ, ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬಕ್ಕಾಗಿ ಸರ್ಕಾರ ಹಾಗೂ ಜಿಲ್ಲಾಡಳಿತ ಕಾಲಕಾಲಕ್ಕೆ ಹೊರಡಿಸುವ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಶಾಂತಿ, ಸೌಹಾರ್ದಯುತವಾಗಿ ಹಬ್ಬ ಆಚರಿಸಲು ಎಲ್ಲ ರೀತಿಯಲ್ಲಿ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.
ಮುಖಂಡರಾದ ನಾಸೀರ ಹುಸೇನಿ ಅವರು ಮಾತನಾಡಿ, ಶಾಂತಿ ಮತ್ತು ಸೌಹಾರ್ದತೆಯಿಂದ ಹಬ್ಬಗಳನ್ನು ಆಚರಿಸುವುದು ಎಲ್ಲಾ ನಾಗರಿಕರ ಕರ್ತವ್ಯವಾಗಿದೆ. ಈದ್ ಮಿಲಾದ್ ಹಬ್ಬ ಮತ್ತು ಗಣೇಶ್ ಹಬ್ಬ ಎರಡನ್ನೂ ಶಾಂತಿಯುತವಾಗಿ ಆಚರಿಸುತ್ತೇವೆ ಎಂದರು.
ಮುಖಂಡರಾದ ಮರಿಯಪ್ಪ ಮಾತನಾಡಿ, ನಮ್ಮ ಜಿಲ್ಲೆಯಲ್ಲಿ ಶಾಂತಿ ನೆಲೆಸಿದೆ. ಇಲ್ಲಿ ಎಲ್ಲರೂ ಶಾಂತಿ, ಸೌಹಾರ್ದಯಿಂದ ಬಾಳುತ್ತಿದ್ದೇವೆ. ಹಬ್ಬಗಳು ನಾವೆಲ್ಲ ಒಂದೇ ಎಂಬ ಒಳ್ಳೆಯ ಸದಾವಕಾಶ ಕಲ್ಪಿಸುತ್ತವೆ. ಹಬ್ಬದ ಸಂದರ್ಭದಲ್ಲಿ ಮದ್ಯ ಮಾರಾಟ ನಿಷೇಧ ಕಟ್ಟುನಿಟ್ಟಾಗಿ ಜಾರಿಯಾಗಬೇಕು ಎಂದರು.
ಗೌರಿಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳನ್ನು ಶಾಂತತೆಯಿಂದ ಆಚರಿಸಲಾಗುವುದು. ಪ್ರತಿಯೊಬ್ಬರಿಗೂ ಪೊಲೀಸ್ ಇಲಾಖೆಯವರು ಅಗತ್ಯ ಸಹಕಾರ ನೀಡಬೇಕು ಎಂದು ಪರಶುರಾಮ ಬಂಡಿ, ಸಂಜೀವ್, ಖಲೀಲ್ ಅಹ್ಮದ್, ವೀರೇಶ, ಅಯ್ಯಣ್ಣ ಸೇರಿದಂತೆ ಹಲವು ಮುಖಂಡರು ಮನವಿ ಮಾಡಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ಉಪಾಧಿಕ್ಷಕರಾದ ಶರಣಬಸಪ್ಪ ಸುಬೇಧಾರ, ಜಿಪಂ ಉಪ ಕಾರ್ಯದರ್ಶಿ ಮಲ್ಲಪ್ಪ ತೊದಲಬಾವಿ, ಕೊಪ್ಪಳ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಕಾವ್ಯರಾಣಿ ಕೆ.ವಿ., ನಗರಸಭೆ ಪೌರಾಯುಕ್ತರು, ಕೊಪ್ಪಳ ತಾಪಂ ಇಓ ದುಂಡಪ್ಪ ತುರಾದಿ, ನಗರ ಠಾಣೆ ವೃತ್ತ ನಿರೀಕ್ಷಕರಾದ ಸಂತೋಷ ಹಳ್ಳೂರ ಸೇರಿದಂತೆ ವಿವಿಧ ತಾಲೂಕಿನ ತಹಸೀಲ್ದಾರರು, ತಾಪಂ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಪೊಲೀಸ್ ಇಲಾಖೆಯ ಇನ್ನೀತರ ಅಧಿಕಾರಿಗಳು ಮತ್ತು ಸಿಬ್ಬಂದಿ, ಗಣೇಶ ಮಂಡಳಿಯ ಮುಖ್ಯಸ್ಥರು ಮತ್ತು ಇನ್ನೀತರ ಪದಾಧಿಕಾರಿಗಳು ಇದ್ದರು.

ವಿಶ್ವ ಕ್ಷೌರಿಕರ ದಿನದಂದು ಉಚಿತ ಕ್ಷೌರ ಸೇವೆಯುಆತ್ಮತೃಪ್ತಿಯನ್ನು ಕೊಡುತ್ತದೆ .ಡಾ‌ ಎಂ ಬಿ .ಹಡಪದ ಸುಗೂರ ಎನ್

Free Shave Service Gives Self-Satisfaction On World Barber’s Day Dr. MB. Hadapada Sugura N

ಕಲಬುರಗಿ: –ಸೆ.೧೬ ರಂದು ವಿಶ್ವ ಕ್ಷೌರಿಕರ ದಿನಾಚರಣೆ ಸಂದರ್ಭದಲ್ಲಿ ಅನಾಥ ಅಂಧ ಮಕ್ಕಳಿಗೆ. ಅಂಗವಿಕಲರಿಗೆ, ಪೌರ ಕಾರ್ಮಿಕರಿಗೆ ಉಚಿತ ಕ್ಷೌರ ಸೇವೆ ಮಾಡಿದ ಸಮಾಜದ ಸೇವಕ ಡಾ.ಮಲ್ಲಿಕಾರ್ಜುನ ಬಿ.ಹಡಪದ ಸುಗೂರ ಎನ್, ಮನುಷ್ಯನಿಗೆ ಭಗವಂತ ಏನೆಲ್ಲ ನೀಡಿದ್ದರು ನಮ್ಮ ಸ್ವಾರ್ಥ ಜೀವನದಲ್ಲಿ ಆತ್ಮ ತೃಪ್ತಿಯನ್ನು ಕಳೆದುಕೊಂಡಿದ್ದೇವೆ. ಸಮಾಜಿಕ ಸೇವೆಯಲ್ಲಿ ಒಂದಾದ (ಸ್ವಚ್ಛತೆ ಕ್ಷೌರ ಸೇವೆ ಕುರಿತು ಕಾರ್ಯವನ್ನು). ಅಂದರೆ (ಅನಾಥರಿಗೆ.) ಅಂಗವಿಕಲರಿಗೆ. ಪೌರ ಕಾರ್ಮಿಕರಿಗೆ ‌ ಉಚಿತ ಕ್ಷೌರ ಸೇವೆಯನ್ನು ಇಂದು ‘ವಿಶ್ವ ಕ್ಷೌರಿಕರ” ದಿನಾಚರಣೆ ದಿನದಂದು ಅವರಿಗೆ ಅಂದವಾಗಿ ಸುಂದರ ಮಾನವರನ್ನಾಗಿ ಕೇಶ ವಿನ್ಯಾಸ ಮಾಡುವುದು. ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದ ಜನಪ್ರೀಯ ಹೇರ್ ಸಲೂನ್ ಅಂಗಡಿಯಲ್ಲಿ ಉಚಿತ ಕ್ಷೌರ ಸೇವೆ ಮಾಡಿದ ಸಮಾಜದ ಸೇವಕ – ಡಾ.ಮಲ್ಲಿಕಾರ್ಜುನ ಬಿ.ಹಡಪದ ಸುಗೂರ ಎನ್ ಅವರು ಅನಾಥರಿಗೆ. ಅಂಗವಿಕಲರಿಗೆ. ಪೌರ ಕಾರ್ಮಿಕರಿಗೆ ಈ ವಿಭಿನ್ನ. ರೀತಿಯ ಮೂಲಕ ಉಚಿತ ಕ್ಷೌರ ಸೇವೆ ಮಾಡಿದಾಗ ಅದರಿಂದ ಸಿಗುವ ಆತ್ಮತೃಪ್ತಿಯೂ ಬೇರೆಲ್ಲಿಯೂ ಸಿಗುವುದಿಲ್ಲಾ ಎಂದು ಡಾ.ಮಲ್ಲಿಕಾರ್ಜುನ ಬಿ. ಹಡಪದ ಸುಗೂರ ಎನ್ ಕಲಬುರಗಿ ಜಿಲ್ಲೆಯ ಸಂಘಟನಾ ಕಾರ್ಯದರ್ಶಿ ಯವರು ತಿಳಿಸಿದರು.
ನಾಲವಾರ ಪಟ್ಟಣದ ಅವರ ಜನಪ್ರಿಯ ಹೇರ್ ಸಲೂನ್ ಅಂಗಡಿಯಲ್ಲಿ ಅನಾಥ ಅಂಧ ಮಕ್ಕಳಿಗೆ. ಅಂಗವಿಕಲರಿಗೆ, ಪೌರ ಕಾರ್ಮಿಕರಿಗೆ. ಇಂದು ‘ವಿಶ್ವ- ಕ್ಷೌರಿಕರ ದಿನಾಚರಣೆ” ಸಂದರ್ಭದಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಯಿಸಿ ಮಾತನಾಡುತ ಅವರು ಇಂದು ವಿಶ್ವ ಕ್ಷೌರಿಕ ರ ದಿನವನ್ನು ಈ ರೀತಿಯಾಗಿ ನಾವು ಸಂತೋಷ ಸಂಭ್ರಮದಿಂದ ಕೂಡಿ, ಈ ದಿನ ಗ್ರಾಹಕರಿಗೆ ಈ ಸೇವೆ ಮಾಡುವುದರಿಂದ ಆತ್ಮ ತೃಪ್ತಿಯ ಜೊತೆಗೆ ಸಾರ್ವಜನಿಕರಲ್ಲಿ ಈ ಸೇವೆ ಸಲ್ಲಿಸಿದ ಕೀರ್ತಿ ನಮ್ಮ ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜ ತನ್ನಂತಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡುತ್ತಾ ಯುವ ಪಿಳಿಗೆಗೆ ಸಾಮಾಜಿಕ ಸಂಘಟನೆಯ ಜೊತೆಗೆ ಈ ರೀತಿಯ ವಿಭಿನ್ನ ಸೇವೆಯನ್ನು ಮಾಡಬೇಕು ಎಂದು ಜಾಗೃತಿ ಹಾಗೂ ಸಮಾಜದ ಜವಬ್ದಾರಿಯನ್ನು ತರುವುದು ಅವಶ್ಯವಾಗಿದೆ
ಅಂತಹ ಕೆಲಸವನ್ನು ಡಾ.ಮಲ್ಲಿಕಾರ್ಜುನ ಬಿ.ಹಡಪದ ಸುಗೂರ ಎನ್ ಕಲಬುರಗಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗಳು ಹಾಗೂ ಕಲಬುರಗಿ ಜಿಲ್ಲಾ ಹಡಪದ (ಅಪ್ಪಣ್ಣ) ಸಮಾಜದ ಸಹಯೋಗದಲ್ಲಿ ಇಂದು ವಿಶ್ವ ಕ್ಷೌರಿಕರ ದಿನದಂದು ಉಚಿತ ಕ್ಷೌರ ಸೇವೆ ಹಮ್ಮಿಕೊಳ್ಳಲಾಗಿದೆ ಇದರಲ್ಲಿ ನಮ್ಮ ಸಮಾಜದ ಸಂಘಟನೆಯ ಜೊತೆಗೆ ಸಾಮಾಜಿಕ ಜವಬ್ದಾರಿಯನ್ನು ನಿರ್ವಹಿಸಿದ್ದು. ನಮಗೆ ಹೆಮ್ಮೆ ಎನ್ನಿಸುತ್ತದೆ.