District In-charge Minister’s Tour
ಕೊಪ್ಪಳ ಸೆಪ್ಟೆಂಬರ್ 16 (ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ ಅವರು ಸೆಪ್ಟೆಂಬರ್ 17ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಗ್ಗೆ 8 ಗಂಟೆಗೆ ಕಾರಟಗಿಯಿಂದ ನಿರ್ಗಮಿಸಿ ಬೆಳಗ್ಗೆ 9ಕ್ಕೆ ಕೊಪ್ಪಳ ನಗರಕ್ಕೆ ಆಗಮಿಸಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ 76ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ-2023ರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾಗುವರು.
ಬಳಿಕ 10 ಗಂಟೆಗೆ ನಗರದ ಎಂ.ಪಿ.ಪ್ಯಾಲೇಸ್‌ನಲ್ಲಿ ಕೊಪ್ಪಳ ಖಾಸಗಿ ಶಾಲೆಗಳ ಒಕ್ಕೂಟ ಆಯೋಜಿಸಿರುವ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನಾಚರಣೆ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗುವರು.
ಬಳಿಕ ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನ ಬಳಕೆಯ ಕುರಿತಾಗಿ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗಿಯಾಗುವರು. ಮಧ್ಯಾಹ್ನ 1 ಗಂಟೆಗೆ ಕೊಪ್ಪಳ ನಗರದಿಂದ ನಿರ್ಗಮಿಸಿ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.