Kalyan Karnataka Amrita Mahotsav: Commemorative Issue Released by News Department
ಕೊಪ್ಪಳ ಸೆಪ್ಟೆಂಬರ್ 17 (ಕರ್ನಾಟಕ ವಾರ್ತೆ): 76ನೇ ಕಲ್ಯಾಣ ಕರ್ನಾಟಕ ಉತ್ಸವ ದಿನದ ಹಿನ್ನೆಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಸಹಯೋಗದಲ್ಲಿ ಪ್ರಕಟಿಸಿದ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವದ ಸ್ಮರಣ ಸಂಚಿಕೆಯನ್ನು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ, ಸಂಸದರಾದ ಕರಡಿ ಸಂಗಣ್ಣ ಮತ್ತು ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಹಾಗೂ ಹೇಮಲತಾ ನಾಯಕ ಅವರು ಬಿಡುಗಡೆ ಮಾಡಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಸೆ.17ರಂದು ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಸಂದರ್ಭದಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ, ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ, ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಬೆಂಗಳೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಡೊಳ್ಳಿನ, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಹಾಗೂ ಇನ್ನೀತರರು ಉಪಸ್ಥಿತರಿದ್ದರು.
ಮಲ್ಲಿಕಾರ್ಜುನ ಖರ್ಗೆ, ದೇವು ಪತ್ತಾರ, ರಿಷಿಕೇಶ ಬಹಾದ್ದೂರ ದೇಸಾಯಿ, ಲಕ್ಷ್ಮಣ ದಸ್ತಿ, ಡಾ.ಶಾಲಿನಿ ರಜನೀಶ, ಡಾ.ಟಿ.ಆರ್.ಚಂದ್ರಶೇಖರ, ಎ.ನಾರಾಯಣ, ರಝಾಕ್ ಉಸ್ತಾದ್, ಎಂ.ಚಂದ್ರ ಪೂಜಾರಿ, ಸಂಗೀತಾ ಕಟ್ಟಿಮನಿ, ಡಾ.ಗಣಪತಿ ಸಿನ್ನೂರ ಅವರ ಲೇಖನಗಳು ಈ ಸಂಚಿಕೆಯಲ್ಲಿವೆ.