Breaking News

ಮಹರ್ಷಿ ವಾಲ್ಮೀಕಿ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Application Invitation for Maharshi Valmiki Award

ಜಾಹೀರಾತು

ಕೊಪ್ಪಳ ಸೆಪ್ಟೆಂಬರ್ 18 (ಕರ್ನಾಟಕ ವಾರ್ತೆ): ಕೊಪ್ಪಳ ಸಮಾಜ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗಾಗಿ ಪ್ರಸ್ತಾವನೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅಕ್ಟೋಬರ್ 28ರಂದು ನಡೆಯುವ ಮಹರ್ಷಿ ವಾಲ್ಮೀಕಿ ಜಯಂತಿಯಂದು ವಾಲ್ಮೀಕಿ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಈ ಪ್ರಶಸ್ತಿಗಾಗಿ ಪರಿಶಿಷ್ಟ ವರ್ಗದವರ ಜನರಿಗೆ ಸೇವೆ ಸಲ್ಲಿಸಿದ ಕೊಪ್ಪಳ ಜಿಲ್ಲೆಯಿಂದ ಒಬ್ಬರು ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡಿ ನಿರ್ದೇಶಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಇವರಿಗೆ ಪ್ರಸ್ತಾವನೆ ಸಲ್ಲಿಸಬೇಕಾಗಿರುತ್ತದೆ.
ಪ್ರಮುಖವಾಗಿ ಪರಿಶಿಷ್ಟ ವರ್ಗದವರ ಶೈಕ್ಷಣಿಕ ಪ್ರಗತಿ ಹಾಗೂ ಆರ್ಥಿಕವಾಗಿ ಸಧೃಡಗೊಳಿಸಲು ಸ್ವಯಂ ಪ್ರೇರಣೆಯಿಂದ ದುಡಿಯುವ ವ್ಯಕ್ತಿಯಾಗಿರಬೇಕು. ಪರಿಶಿಷ್ಟ ಪಂಗಡಗಳ ಮೇಲೆ ನಡೆಯುವ ದೌರ್ಜನ್ಯ ಇವುಗಳ ನಿರ್ಮೂಲನೆ ಹಾಗೂ ಸಮಾಜದಲ್ಲಿ ಸಾಮರಸ್ಯ ವಾತಾವರಣ ಮೂಡಿಸುವುದು ಅಥವಾ ದೌರ್ಜನ್ಯ ನಿಯಂತ್ರಿಸಲು ಸಹಕಾರಿಯಾಗುವ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಶ್ರಮಿಸುವ ವ್ಯಕ್ತಿಯಾಗಿರಬೇಕು. ಶ್ರೀ ಮಹರ್ಷಿ ವಾಲ್ಮೀಕಿ ಇವರ ತತ್ವ ಹಾಗೂ ಆದರ್ಶಗಳನ್ನು ಸಾಕಾರಗೊಳಿಸುವಂತಹ ಯಾವುದೇ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಪರಿಶಿಷ್ಟ ವರ್ಗದ ಜನರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಶ್ರಮಿಸಿರುವ ವ್ಯಕ್ತಿಯಾಗಿರಬೇಕು.
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 35 ವರ್ಷಗಳಾಗಿರಬೇಕು. ಕೊಪ್ಪಳ ಜಿಲ್ಲೆಯಿಂದ ಒಬ್ಬರನ್ನು ಮಾತ್ರ ಶಿಫಾರಸ್ಸು ಮಾಡಬೇಕಿದೆ. ಒಂದಕ್ಕಿಂತ ಹೆಚ್ಚು ಅರ್ಜಿಗಳು ಬಂದಲ್ಲಿ ವಯಸ್ಸಿನ ಆಧಾರದ ಮೇಲೆ ಶಿಫಾರಸ್ಸು ಮಾಡಿ ರಾಜ್ಯಮಟ್ಟದ ಆಯ್ಕೆ ಸಮಿತಿಗೆ ಸಲ್ಲಿಸಲಾಗುವುದು. ಆಯ್ಕೆ ಮಾಡುವ ವ್ಯಕ್ತಿಯು ಸಾಮಾಜಿಕ ಕ್ಷೇತ್ರದಲ್ಲಿ ಮುಖ್ಯವಾಗಿ ಪರಿಶಿಷ್ಟ ವರ್ಗದ ಜನರಿಗೆ ಸೇವೆ ಸಲ್ಲಿಸಿದ ವ್ಯಕ್ತಿಯಾಗಿದ್ದು, ಜನಸಾಮಾನ್ಯರಲ್ಲಿ ಸ್ವಯಂಸೇವಕರಾಗಿ ಮಾನ್ಯತೆ, ಕೀರ್ತಿ, ಪ್ರಖ್ಯಾತಿ ಹೊಂದಿರಬೇಕು. ಅವರು ಸಾಧನೆ ಮಾಡಿರುವ ಸಾಧನೆಗಳ ಬಗ್ಗೆ ದಾಖಲಾತಿ ಹೊಂದಿರಬೇಕು. ಪ್ರಶಸ್ತಿ ಆಯ್ಕೆ ಕುರಿತಂತೆ ಸರ್ಕಾರ ತೆಗೆದುಕೊಳ್ಳುವ ನಿರ್ಣಯವೇ ಅಂತಿಮ. ಪ್ರಶಸ್ತಿಗಾಗಿ ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿರುವ ಅರ್ಜಿ ಹಾಗೂ ದಾಖಲೆಗಳೊಂದಿಗೆ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಮತ್ತು ಇಲಾಖೆಯ ಸಂಭಂದಪಟ್ಟ ತಾಲೂಕು ಸಹಾಯಕ ನಿರ್ದೇಶಕರು ಅಥವಾ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿಗೆ ಸೆಪ್ಟೆಂಬರ್ 22 ರೊಳಗಾಗಿ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Mallikarjun

Check Also

ಕುಷ್ಟಗಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ: ನೋಂದಣಿಗೆ ಸೂಚನೆ

Kushtagi Taluk Level Dasara Games: Notice for registration ಕೊಪ್ಪಳ ಆಗಸ್ಟ್ 29 (ಕರ್ನಾಟಕ ವಾರ್ತೆ): 2025-26ನೇ ಸಾಲಿನ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.